ಅಸ್ಸಾಂ ಚುನಾವಣೆ: 97 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧೆ ಸಾಧ್ಯತೆ

ಗುವಾಹತಿ, ಫೆಬ್ರವರಿ 18: ಅಸ್ಸಾಂ ವಿಧಾನಸಭೆ ಚುನಾವಣೆಗಾಗಿ ಮೈತ್ರಿಕೂಟ ರಚಿಸಿಕೊಂಡಿರುವ ಕಾಂಗ್ರೆಸ್ 97 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. ಮಿಕ್ಕ ಕ್ಷೇತಗಳನ್ನು ಮಿತ್ರಪಕ್ಷಗಳಿಗೆ ಹಂಚಲು ನಿರ್ಧರಿಸಲಾಗಿದೆ.

ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಾಟಿಕ್ ಫ್ರಂಟ್ (ಎಐಯುಡಿಎಫ್), ಸಿಪಿಐ, ಸಿಪಿಐ (ಎಂ), ಸಿಪಿಐ(ಎಂಎಲ್) ಹಾಗೂ ಅಂಚಲಿಕ್ ಗಣ ಮೋರ್ಚಾ ಪಕ್ಷಗಳನ್ನು ಸೇರಿಸಿಕೊಂಡು ಕಾಂಗ್ರೆಸ್ ಮಹಾಮೈತ್ರಿಕೂಟ ರಚಿಸಿದೆ.

ಇನ್ನೊಂದೆಡೆ, ಬಿಜೆಪಿ ಈ ಬಾರಿ 100ಕ್ಕೂ ಅಧಿಕ ಸ್ಥಾನ ಗೆದ್ದು, ಮತ್ತೆ ಅಧಿಕಾರ ವಹಿಸಿಕೊಳ್ಳಲಿದೆ ಎಂದು ರಾಷ್ಟ್ರೀಯ ಉಪಾಧ್ಯಕ್ಷ ಜಯ್ ಪಾಂಡಾ ಘೋಷಿಸಿದ್ದಾರೆ.

Assam Assembly Election 2021Congress likely to contest 97 seats in Assam polls

2016ರಲ್ಲಿ 126 ವಿಧಾನಸಭಾ ಸ್ಥಾನಗಳ ಪೈಕಿ 60 ಬಿಜೆಪಿ ಶಾಸಕರು ಗೆದ್ದು ಅಧಿಕಾರಕ್ಕೇರಿತ್ತು. ಬೋಡೋ ಪೀಪಲ್ಸ್ ಫ್ರಂಟ್ ಹಾಗೂ ಅಸ್ಸೊಂ ಗಣ ಪರಿಷತ್ ಕ್ರಮವಾಗಿ 14 ಹಾಗೂ 12 ಸ್ಥಾನ ಗೆದ್ದು ಬಿಜೆಪಿ ಬೆಂಬಲ ಸೂಚಿಸಿದ್ದವು.

ಆದರೆ, ಇತ್ತೀಚೆಗೆ ನಡೆದ ಬೋಡೋಲ್ಯಾಂಡ್ ಟೆರಿಟೋರಿಯಲ್ ಕೌನ್ಸಿಲ್ ಚುನಾವಣೆಯಲ್ಲಿ ಬಿಟಿಎಫ್ ಮೈತ್ರಿ ಮುರಿದುಕೊಂಡ ಬಿಜೆಪಿ, ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬೆರಲ್ ಹಾಗೂ ಗಣ ಸುರಕ್ಷಾ ಪರಿಷದ್ ಜೊತೆ ಮೈತ್ರಿ ಸಾಧಿಸಿ ಬಿಟಿಸಿ ಗೆದ್ದುಕೊಂಡಿದೆ.

ಕಾಂಗ್ರೆಸ್ ಪಕ್ಷ ಈ ಬಾರಿ ನಾಗರಿಕ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಅಭಿಯಾನ ಆರಂಭಿಸಿದ್ದು, ಸಿಎಎ ಹೋರಾಟದಲ್ಲಿ ಮೃತಪಟ್ಟವರಿಗೆ ಸ್ಮಾರಕ ಸ್ಥಾಪಿಸುವುದಾಗಿ ಘೋಷಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+