Assam Assembly Election 2026: ಅಸ್ಸಾಂ ವಿಧಾನಸಭಾ ಚುನಾವಣೆಯ ಮತದಾನ, ಮತ ಎಣಿಕೆ ದಿನಾಂಕಗಳ ವಿವರ
Assam Assembly Election 2026: ಭಾರತೀಯ ಚುನಾವಣಾ ಆಯೋಗವು ಇಂದು (ಮಾರ್ಚ್ 15) ಮಹತ್ವದ ಸುದ್ದಿಗೋಷ್ಠಿ ನಡೆಸಿ, ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣಾ ದಿನಾಂಕಗಳನ್ನು ಘೋಷಿಸಿದೆ. ಇದರೊಂದಿಗೆ ಇಂದಿನಿಂದಲೇ ಈ ರಾಜ್ಯಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.
ಈ ಬಾರಿ ಅಸ್ಸಾಂನಲ್ಲಿ 126 ವಿಧಾನಸಭಾ ಸ್ಥಾನಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯುತ್ತಿರುವುದು ವಿಶೇಷ. 2021ರಲ್ಲಿ ಇಲ್ಲಿ ಮೂರು ಹಂತಗಳಲ್ಲಿ ಮತದಾನ ನಡೆದಿತ್ತು. ಈ ಬಾರಿ ಏಪ್ರಿಲ್ 1ರಂದು ಮತದಾನ ನಡೆಯಲಿದ್ದು, ಮತ ಎಣಿಕೆ ಕಾರ್ಯ ಮೇ 4 ನಡೆಯಲಿದೆ. ಇನ್ನೂ ಸುದ್ದಿ ಸಂಸ್ಥೆಗಳು ನಡೆಸುವ ಎಕ್ಸಿಟ್ ಪೋಲ್ ಭವಿಷ್ಯಗಳು ಏಪ್ರಿಲ್ 29ರಂದು ಹೊರಬೀಳಲಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪಶ್ಚಿಮ ಬಂಗಾಳದಲ್ಲಿ ಭದ್ರತಾ ದೃಷ್ಟಿಯಿಂದ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದೆ. ಕಳೆದ ಬಾರಿಗಿಂತ (8 ಹಂತಗಳು) ಈ ಬಾರಿ ಹಂತಗಳ ಸಂಖ್ಯೆಯನ್ನು ಗಣನೀಯವಾಗಿ ಇಳಿಸಲಾಗಿದೆ. ಈಗಾಗಲೇ ಎಲ್ಲಾ ರಾಜ್ಯಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಸುಮಾರು 20 ಲಕ್ಷ ಹೊಸ ಮತದಾರರು ಈ ಬಾರಿ ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ. ಮತಗಟ್ಟೆಗಳ ಬಳಿ ಮೊಬೈಲ್ ನಿಷೇಧ, ಇವಿಎಂನಲ್ಲಿ ಅಭ್ಯರ್ಥಿಗಳ ಭಾವಚಿತ್ರ ಮತ್ತು ಕಟ್ಟುನಿಟ್ಟಿನ ಭದ್ರತೆಗಾಗಿ ಸುಮಾರು 1.5 ಲಕ್ಷ ಕೇಂದ್ರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ.
ಅಸ್ಸಾಂ ವಿಧಾನಸಭಾ ಚುನಾವಣೆ
* ಕ್ಷೇತ್ರಗಳು - 126
* ನಾಮಪತ್ರ ಸಲ್ಲಿಕೆಗೆ ಕೊನೆ ದಿನ - ಮಾರ್ಚ್ 23
* ನಾಮಪತ್ರ ವಾಪಸ್ಗೆ ಕೊನೆ ದಿನ - ಮಾರ್ಚ್ 26
* ಮತದಾನ - ಏಪ್ರಿಲ್ 9
* ಫಲಿತಾಂಶ - ಮೇ 4
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications