ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಕ್ಸಿಟ್ ಪೋಲ್ ಫಲಿತಾಂಶ; ಅಸ್ಸಾಂನಲ್ಲಿ ಬಿಜೆಪಿಗೆ ಅಧಿಕಾರ

|
Google Oneindia Kannada News

ನವದೆಹಲಿ, ಏಪ್ರಿಲ್ 29; ಅಸ್ಸಾಂ ರಾಜ್ಯದ ವಿಧಾನಸಭೆ ಚುನಾವಣೆಯ ಚುನಾವಣೋತ್ತರ ಫಲಿತಾಂಶ ಪ್ರಕಟವಾಗಿದೆ. ಒಟ್ಟು 126 ವಿಧಾನಸಭಾ ಕ್ಷೇತ್ರಗಳಿಗೆ ಮಾರ್ಚ್ 27, ಏಪ್ರಿಲ್ 1 ಮತ್ತು ಏಪ್ರಿಲ್ 6 ರಂದು ಮೂರು ಹಂತದಲ್ಲಿ ಮತದಾನ ನಡೆದಿತ್ತು.

ಗುರುವಾರ ರಾಷ್ಟ್ರೀಯ ವಾಹಿನಿಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿವೆ. 27,189 ಮಾದರಿಗಳ ಮೂಲಕ ಆಕ್ಸಿಸ್ ಮೈ ಇಂಡಿಯಾ ಅಸ್ಸಾಂ ವಿಧಾನಸಭೆ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಯನ್ನು ನಡೆಸಿದೆ.

ಅಸ್ಸಾಂ: 90 ಮತದಾರರ ಮತಗಟ್ಟೆಯಲ್ಲಿ 181 ಮತ ಚಲಾವಣೆ; 6 ಅಧಿಕಾರಿಗಳು ಅಮಾನತು!ಅಸ್ಸಾಂ: 90 ಮತದಾರರ ಮತಗಟ್ಟೆಯಲ್ಲಿ 181 ಮತ ಚಲಾವಣೆ; 6 ಅಧಿಕಾರಿಗಳು ಅಮಾನತು!

2021ರ ಚುನಾವಣೆಯಲ್ಲಿ ಬಿಜೆಪಿ ಶೇ 48ರಷ್ಟು ಮತಗಳಿಕೆಯನ್ನು ಪಡೆಯಲಿದ್ದು, ಅಸ್ಸಾಂ ರಾಜ್ಯದಲ್ಲಿ ಪುನಃ ಅಧಿಕಾರ ಪಡೆಯಲಿದೆ ಎಂದು ಆಕ್ಸಿಸ್ ಮೈ ಇಂಡಿಯಾ ಚುನಾವಣೋತ್ತರ ಸಮೀಕ್ಷೆ ಹೇಳಿದೆ.

ಸಮೀಕ್ಷೆ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ದೊಡ್ಡ ಪಕ್ಷ, ಆದರೆ ಅಧಿಕಾರವಿಲ್ಲ!ಸಮೀಕ್ಷೆ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ದೊಡ್ಡ ಪಕ್ಷ, ಆದರೆ ಅಧಿಕಾರವಿಲ್ಲ!

 Assam Assembly Elections Axis My India Exit polls Results 2021

ಅಸ್ಸಾಂ ವಿಧಾನಸಭೆಯಲ್ಲಿ ಬಹುಮತ ಪಡೆಯಲು ಪಕ್ಷಕ್ಕೆ 64 ಸೀಟುಗಳ ಅಗತ್ಯವಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ಚುನಾವಣೆಯಲ್ಲಿ ತೀವ್ರವಾದ ಪೈಪೋಟಿ ನಡೆಯಲಿದೆ.

ಪಶ್ಚಿಮ ಬಂಗಾಳ: ಕಳೆದ ಮತಗಟ್ಟೆ ಸಮೀಕ್ಷೆ ಹೇಳಿದ್ದೇನು, ಆಗಿದ್ದೇನು?ಪಶ್ಚಿಮ ಬಂಗಾಳ: ಕಳೆದ ಮತಗಟ್ಟೆ ಸಮೀಕ್ಷೆ ಹೇಳಿದ್ದೇನು, ಆಗಿದ್ದೇನು?

ಬಿಜೆಪಿ 75-85 ಸೀಟುಗಳನ್ನು ಪಡೆಯುವ ಮೂಲಕ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಸಮೀಕ್ಷೆ ವರದಿ ಹೇಳಿದೆ. ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರು ಹೆಚ್ಚಾಗಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಆದ್ದರಿಂದ, ಪಕ್ಷ ಬಹುಮತಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಪಡೆಯಲಿದೆ ಎಂದು ಸಮೀಕ್ಷೆಯ ವರದಿ ತಿಳಿಸಿದೆ.

ಗುರುವಾರ ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಪುದಚೇರಿ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಲಿವೆ. ಮೇ 2 ರ ಭಾನುವಾರ ಐದೂ ರಾಜ್ಯಗಳಲ್ಲಿ ಮತ ಎಣಿಕೆ ನಡೆಯಲಿದೆ.

English summary
Check out Assam assembly election Axis My India Exit Poll Results 2021 in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X