Todays Chanakya ಸಮೀಕ್ಷೆ; ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ

ನವದೆಹಲಿ, ಏಪ್ರಿಲ್ 29; ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳ ಪೈಕಿ ಅಸ್ಸಾಂ ರಾಜ್ಯದಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದೆ. 126 ವಿಧಾನಸಭಾ ಸ್ಥಾನಗಳ ಪೈಕಿ ಬಹುಮತಕ್ಕೆ 64 ಸ್ಥಾನಗಳು ಬೇಕು.

ಗುರುವಾರ ಅಸ್ಸಾಂ ರಾಜ್ಯದ ವಿಧಾನಸಭೆ ಚುನಾವಣೆಯ ಚುನಾವಣೋತ್ತರ ಫಲಿತಾಂಶ ಪ್ರಕಟವಾಗಿದೆ. ಒಟ್ಟು 126 ವಿಧಾನಸಭಾ ಕ್ಷೇತ್ರಗಳಿಗೆ ಮಾರ್ಚ್ 27, ಏಪ್ರಿಲ್ 1 ಮತ್ತು ಏಪ್ರಿಲ್ 6 ರಂದು ಮೂರು ಹಂತದಲ್ಲಿ ಮತದಾನ ನಡೆದಿತ್ತು.

ಟುಡೇಸ್ ಚಾಣಾಕ್ಯ ಬಿಜೆಪಿ 70 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯದಲ್ಲಿ ಪುನಃ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ. ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿಯ ಎದುರಾಳಿ ಕಾಂಗ್ರೆಸ್ 56 ಸೀಟುಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ಹೇಳಿದೆ.

Assam Assembly Elections Todays Chanakya Exit polls Results 2021

ಅಸ್ಸಾಂ ವಿಧಾನಸಭೆ ಚುನಾವಣೆ ಬಗ್ಗೆ ಬಂದಿರುವ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಪುನಃ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ.

ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಫಲಿತಾಂಶದ ಪ್ರಕಾರ ಬಿಜೆಪಿ 75-85 ಸೀಟುಗಳನ್ನು ಪಡೆದು ಅಸ್ಸಾಂನದಲ್ಲಿ ಪುನಃ ಅಧಿಕಾರ ಹಿಡಿಯಲಿದೆ.

Republic-CNX ಸಮೀಕ್ಷೆಗಳ ಪ್ರಕಾರ ಬಿಜೆಪಿ 60-66, ಕಾಂಗ್ರೆಸ್ 26-28, ಎಜಿಪಿ 10-14, ಎಐಯುಡಿಎಫ್ 11-13, ಬಿಪಿಎಫ್ 5-7, ಯುಪಿಪಿಎಲ್ 3-5 ಮತ್ತು ಇತರರು 1-3 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+