ಅಸ್ಸಾಂ-ಮಿಜೋರಾಂ ಗಡಿ ಸಂಘರ್ಷ; 6 ಬಲಿ, 40 ಜನರಿಗೆ ಗಾಯ

ದಿಸ್‌ಪುರ್, ಜುಲೈ 27; ಅಸ್ಸಾಂ ಮತ್ತು ಮಿಜೋರಾಂ ನಡುವಿನ ಗಡಿ ಸಂಘರ್ಷ ಹಿಂಸಾಚಾರಕ್ಕೆ ತಿರುಗಿದೆ. ಈ ಸಮಯದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 40 ಜನರು ಗಾಯಗೊಂಡಿದ್ದು, 6 ಪೊಲೀಸರು ಮೃತಪಟ್ಟಿದ್ದಾರೆ.

ಹಿಂಸಾಚಾರ ನಡೆದ ಕುರಿತು ಎರಡು ರಾಜ್ಯಗಳ ಮುಖ್ಯಮಂತ್ರಿಗಳ ನಡುವೆ ವಾಗ್ವಾದ ನಡೆಯುತ್ತಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾಸ್ ಶರ್ಮಾ ಸಚಿವ ಪಿಜೂಷ್ ಹಜಾರಿಕಾಗೆ ಗಡಿ ಪ್ರದೇಶಕ್ಕೆ ಭೇಟಿ ನೀಡಲು ಸೂಚನೆ ನೀಡಿದ್ದಾರೆ.

ಎರಡು ದಿನಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಸ್ಸಾಂ ಮತ್ತು ಮಿಜೋರಾಂ ರಾಜ್ಯಗಳ ಗಡಿ ಸಂಘರ್ಷದ ಕುರಿತು ಸಭೆ ನಡೆಸಿದ್ದರು. ಈ ಸಭೆ ನಡೆದ ಬಳಿಕ ಗಲಾಟೆ ನಡೆದಿದ್ದು, ಗುಂಡಿನ ದಾಳಿಯಾಗಿದೆ.

Assam

ದಕ್ಷಿಣ ಅಸ್ಸಾಂನ ಕಚಾರ್ ಮತ್ತು ಮಿಜೋರಾಂನ ಕೊಲಾಸಿಬ್ ಜಿಲ್ಲೆಗಳು ಗಡಿಯನ್ನು ಹಂಚಿಕೊಂಡಿವೆ. ಅಂತರರಾಜ್ಯ ಗಡಿಯಲ್ಲಿರುವ ಅಸ್ಸಾಂನ ಪೊಲೀಸ್ ಠಾಣೆ ಸಮೀಪ ಹಿಂಸಾಚಾರ ನಡೆದಿದೆ.

ಘಟನೆ ವಿವರ; "ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಅಸ್ಸಾಂನ 200ಕ್ಕೂ ಹೆಚ್ಚು ಪೊಲೀಸರು ನಮ್ಮ ಗಡಿಯೊಳಕ್ಕೆ ಬಂದು ಆಟೋ ನಿಲ್ದಾಣದಲ್ಲಿದ್ದ ಪೊಲೀಸರನ್ನು ಒತ್ತಾಯ ಪೂರ್ವಕವಾಗಿ ಕಳಿಸಿದ್ದಾರೆ" ಎಂದು ಮಿಜೋರಾಂ ಮುಖ್ಯಮಂತ್ರಿ ಜೋರಮಾಥಂಗಾ ಹೇಳಿದ್ದಾರೆ.

ಈ ಸಮಯದಲ್ಲಿ ಉಂಟಾದ ಘರ್ಷಣೆಯಲ್ಲಿ ಮಿಜೋರಾಂ ಪೊಲೀಸರು ಸಹ ಪ್ರತಿದಾಳಿ ಮಾಡಿದ್ದಾರೆ. ಈ ಘರ್ಷಣೆಯಲ್ಲಿ 6 ಪೊಲೀಸರು ಮೃತಪಟ್ಟಿದ್ದಾರೆ.

ಆದರೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾಸ್ ಶರ್ಮಾ ಮಾತನಾಡಿ, "ಮಿಜೋರಾಂ ಪೊಲೀಸರು ನಮ್ಮ ಗಡಿ ಪೊಲೀಸ್ ಠಾಣೆಯನ್ನು ಆಕ್ರಮಿಸಿಕೊಂಡಿದ್ದರು. ಅದನ್ನು ಮರಳಿ ನಿಯಂತ್ರಣಕ್ಕೆ ತೆಗೆದುಕೊಂಡಿದ್ದೇವೆ" ಎಂದು ಹೇಳಿದ್ದಾರೆ.

ಗಡಿ ಸಂಘರ್ಷದ ಹಿನ್ನಲೆಯಲ್ಲಿ ಅಸ್ಸಾಂ ಸರ್ಕಾರ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದೆ. ಗಡಿಯಲ್ಲಿ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+