ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಸ್ಸಾಂ-ಮಿಜೋರಾಂ ಗಡಿ ಸಂಘರ್ಷ; 6 ಬಲಿ, 40 ಜನರಿಗೆ ಗಾಯ

|
Google Oneindia Kannada News

ದಿಸ್‌ಪುರ್, ಜುಲೈ 27; ಅಸ್ಸಾಂ ಮತ್ತು ಮಿಜೋರಾಂ ನಡುವಿನ ಗಡಿ ಸಂಘರ್ಷ ಹಿಂಸಾಚಾರಕ್ಕೆ ತಿರುಗಿದೆ. ಈ ಸಮಯದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 40 ಜನರು ಗಾಯಗೊಂಡಿದ್ದು, 6 ಪೊಲೀಸರು ಮೃತಪಟ್ಟಿದ್ದಾರೆ.

ಹಿಂಸಾಚಾರ ನಡೆದ ಕುರಿತು ಎರಡು ರಾಜ್ಯಗಳ ಮುಖ್ಯಮಂತ್ರಿಗಳ ನಡುವೆ ವಾಗ್ವಾದ ನಡೆಯುತ್ತಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾಸ್ ಶರ್ಮಾ ಸಚಿವ ಪಿಜೂಷ್ ಹಜಾರಿಕಾಗೆ ಗಡಿ ಪ್ರದೇಶಕ್ಕೆ ಭೇಟಿ ನೀಡಲು ಸೂಚನೆ ನೀಡಿದ್ದಾರೆ.

 'ಆಂದೋಲನ, ಭಯೋತ್ಪಾದನೆಯನ್ನು ತಿರಸ್ಕರಿಸಿದ ಅಸ್ಸಾಂ': ಅಮಿತ್‌ ಶಾ 'ಆಂದೋಲನ, ಭಯೋತ್ಪಾದನೆಯನ್ನು ತಿರಸ್ಕರಿಸಿದ ಅಸ್ಸಾಂ': ಅಮಿತ್‌ ಶಾ

ಎರಡು ದಿನಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಸ್ಸಾಂ ಮತ್ತು ಮಿಜೋರಾಂ ರಾಜ್ಯಗಳ ಗಡಿ ಸಂಘರ್ಷದ ಕುರಿತು ಸಭೆ ನಡೆಸಿದ್ದರು. ಈ ಸಭೆ ನಡೆದ ಬಳಿಕ ಗಲಾಟೆ ನಡೆದಿದ್ದು, ಗುಂಡಿನ ದಾಳಿಯಾಗಿದೆ.

'ಬಿಜೆಪಿಗೆ ಸೇರಿ' : ಪ್ರತಿಪಕ್ಷದ ಶಾಸಕರಿಗೆ ಅಸ್ಸಾಂ ಮುಖ್ಯಮಂತ್ರಿ ಶರ್ಮಾ ಮನವಿ 'ಬಿಜೆಪಿಗೆ ಸೇರಿ' : ಪ್ರತಿಪಕ್ಷದ ಶಾಸಕರಿಗೆ ಅಸ್ಸಾಂ ಮುಖ್ಯಮಂತ್ರಿ ಶರ್ಮಾ ಮನವಿ

Assam

ದಕ್ಷಿಣ ಅಸ್ಸಾಂನ ಕಚಾರ್ ಮತ್ತು ಮಿಜೋರಾಂನ ಕೊಲಾಸಿಬ್ ಜಿಲ್ಲೆಗಳು ಗಡಿಯನ್ನು ಹಂಚಿಕೊಂಡಿವೆ. ಅಂತರರಾಜ್ಯ ಗಡಿಯಲ್ಲಿರುವ ಅಸ್ಸಾಂನ ಪೊಲೀಸ್ ಠಾಣೆ ಸಮೀಪ ಹಿಂಸಾಚಾರ ನಡೆದಿದೆ.

ಅಸ್ಸಾಂ-ಮಿಜೋರಾಂ ಗಡಿ ವಿವಾದ: ತೀವ್ರ ಹಿಂಸಾಚಾರಅಸ್ಸಾಂ-ಮಿಜೋರಾಂ ಗಡಿ ವಿವಾದ: ತೀವ್ರ ಹಿಂಸಾಚಾರ

ಘಟನೆ ವಿವರ; "ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಅಸ್ಸಾಂನ 200ಕ್ಕೂ ಹೆಚ್ಚು ಪೊಲೀಸರು ನಮ್ಮ ಗಡಿಯೊಳಕ್ಕೆ ಬಂದು ಆಟೋ ನಿಲ್ದಾಣದಲ್ಲಿದ್ದ ಪೊಲೀಸರನ್ನು ಒತ್ತಾಯ ಪೂರ್ವಕವಾಗಿ ಕಳಿಸಿದ್ದಾರೆ" ಎಂದು ಮಿಜೋರಾಂ ಮುಖ್ಯಮಂತ್ರಿ ಜೋರಮಾಥಂಗಾ ಹೇಳಿದ್ದಾರೆ.

ಈ ಸಮಯದಲ್ಲಿ ಉಂಟಾದ ಘರ್ಷಣೆಯಲ್ಲಿ ಮಿಜೋರಾಂ ಪೊಲೀಸರು ಸಹ ಪ್ರತಿದಾಳಿ ಮಾಡಿದ್ದಾರೆ. ಈ ಘರ್ಷಣೆಯಲ್ಲಿ 6 ಪೊಲೀಸರು ಮೃತಪಟ್ಟಿದ್ದಾರೆ.

ಆದರೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾಸ್ ಶರ್ಮಾ ಮಾತನಾಡಿ, "ಮಿಜೋರಾಂ ಪೊಲೀಸರು ನಮ್ಮ ಗಡಿ ಪೊಲೀಸ್ ಠಾಣೆಯನ್ನು ಆಕ್ರಮಿಸಿಕೊಂಡಿದ್ದರು. ಅದನ್ನು ಮರಳಿ ನಿಯಂತ್ರಣಕ್ಕೆ ತೆಗೆದುಕೊಂಡಿದ್ದೇವೆ" ಎಂದು ಹೇಳಿದ್ದಾರೆ.

ಗಡಿ ಸಂಘರ್ಷದ ಹಿನ್ನಲೆಯಲ್ಲಿ ಅಸ್ಸಾಂ ಸರ್ಕಾರ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದೆ. ಗಡಿಯಲ್ಲಿ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದೆ.

English summary
Assam border tension with Mizoram. 40 people injured and 6 policemen have died in violence. Chief minister has directed minister Pijush Hazarika to visit the border area.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X