ಅಸ್ಸಾಂ: ಪೊಲೀಸ್ ಠಾಣೆಯಲ್ಲಿ ಪೊಲೀಸನಿಂದಲೇ ಅತ್ಯಾಚಾರ

ಗುವಾಹಟಿ, ಮೇ 04: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಮಾತಿನಂತೆ, ಪೊಲೀಸ್ ಠಾಣೆಯ ಒಳಗೆ ಮಹಿಳೆಯೊಬ್ಬರನ್ನು ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬನನ್ನು ಬಂಧಿಸಲಾಗಿದೆ.

ಅಸ್ಸಾಮಿನ ಗುವಾಹಟಿಯ ಹಾಜೋ ಎಂಬಲ್ಲಿ ಘಟನೆ ನಡೆದಿದೆ. ಇಲ್ಲಿನ ರಾಂದಿಯಾ ಪೊಲೀಸ್ ಠಾಣೆಯ ಬಿನೋದ್ ಕುಮಾರ್ ದಾಸ್ ಎಂಬ ಪೊಲೀಸ್ ಅಧಿಕಾರಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದು, ಖುದ್ದು ಮಹಿಳೆಯೇ ಪೊಲೀಸರಿಗೆ ದೂರು ನೀಡಿದ್ದರು.

ಸದ್ಯಕ್ಕೆ ಆರೋಪಿಯನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ಇನ್ನೂ ನಡೆದಿಲ್ಲ.

Assam: cop arrested for raping woman in police station

ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ಅಸ್ಸಾಮ್ ಮುಖ್ಯಮಂತ್ರಿ ತರುಣ್ ಗೋಗಾಯ್, 'ಮಹಿಳೆಯರಿಗೆ ರಕ್ಷಣೆ ನೀಡಬೇಕಾದ್ದು ಪೊಲಿಸರ ಕೆಲಸ. ಆದರೆ ಅವರೇ ಮಹಿಳೆಯರ ಮೇಲೆ ದೌರ್ಜನ್ಯ ಎಸಗುವುದು ಸರಿಯೇ? ಆರೋಪಿಗೆ ಕಠಿಣ ಶಿಕ್ಷೆ ನೀಡಲಾಗುವುದು' ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+