Today's Chanakya Exit Poll: ಅಸ್ಸಾಂನಲ್ಲಿ ಮತ್ತೆ ಬಿಜೆಪಿ

ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಪೂರ್ಣ ಬಹುಮತ ಪಡೆಯಲಿದೆ ಎನ್ನುತ್ತಿದೆ ಟುಡೇಸ್ ಚಾಣಕ್ಯ ಮಾಡಿರುವ ಮತದಾನೋತ್ತರ ಸಮೀಕ್ಷೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ 60 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ ಈ ಚುನಾವಣೆಯಲ್ಲಿ ಇನ್ನೂ ಹೆಚ್ಚಿನ ಸ್ಥಾನ ಗಳಿಸಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎನ್ನುತ್ತಿದೆ ಸಮೀಕ್ಷೆ.

ಟುಡೇಸ್ ಚಾಣಕ್ಯ ಸಮೀಕ್ಷೆಯ ಪ್ರಕಾರ, ಬಿಜೆಪಿ ಮತ್ತು ಮಿತ್ರ ಪಕ್ಷ 70 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ಮತ್ತು ಮಿತ್ರ ಪಕ್ಷ 56 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಈಗ ನೀಡಿರುವ ಸಂಖ್ಯೆಗಳಲ್ಲಿ 9 ಸ್ಥಾನಗಳ ವ್ಯತ್ಯಾಸ ಬರಬಹುದಷ್ಟೆ ಎಂದಿದೆ ಟುಡೇಸ್ ಚಾಣಕ್ಯ. ಇತರೆ ಪಕ್ಷಗಳು 0 ಯಿಂದ ಹೆಚ್ಚೆಂದರೆ 3 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದಷ್ಟೆ ಎನ್ನಲಾಗಿದೆ.

Assam Elections Todays Chanakya Exit polls Results 2021

2016 ರ ಚುನಾವಣೆಯಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷ 74 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ ಮತ್ತು ಮಿತ್ರ ಪಕ್ಷ 36 ಕ್ಷೇತ್ರಗಳಲ್ಲಿಯಷ್ಟೆ ಗೆಲುವು ಸಾಧಿಸಿತ್ತು. ಆದರೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಮಿತ್ರ ಪಕ್ಷ ತನ್ನ ಸ್ಥಾನವನ್ನು ಉತ್ತಮ ಪಡಿಸಿಕೊಳ್ಳಲಿದೆ ಎನ್ನಲಾಗುತ್ತಿದೆ.

ಅಸ್ಸಾಂನಲ್ಲಿ 126 ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಸರ್ಕಾರ ರಚಿಸಲು 64 ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ಅವಶ್ಯಕವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+