ಅಸ್ಸಾಂನಲ್ಲಿ ಮಳೆ, ಪ್ರವಾಹ; ಮೃಗಾಲಯದ 108 ಪ್ರಾಣಿಗಳು ಸಾವು
ದಿಸ್ಪುರ್, ಜುಲೈ 19 : ಭಾರಿ ಮಳೆ, ಪ್ರವಾಹಕ್ಕೆ ಸಿಲುಕಿರುವ ಅಸ್ಸಾಂ ರಾಜ್ಯ ನಲುಗಿ ಹೋಗಿದೆ. ಇದುವರೆಗೂ ರಾಜ್ಯದಲ್ಲಿ 79 ಜನರು ಮೃತಪಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಹ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದ್ದು, ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ.
ಭಾನುವಾರ ಪ್ರವಾಹಕ್ಕೆ ಸಿಲುಕಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಇದುವರೆಗೂ ಮೃತಪಟ್ಟವರ ಸಂಖ್ಯೆ 79ಕ್ಕೇ ಏರಿಕೆಯಾಗಿದೆ ಎಂದು ಅಸ್ಸಾಂ ಸರ್ಕಾರ ಹೇಳಿದೆ. ಮುಖ್ಯಮಂತ್ರಿ ಸರ್ವಾನಂದ ಸೋನಾವಾಲ್ ಪರಿಸ್ಥಿತಿ ಬಗ್ಗೆ ತಿಳಿಯಲು, ಕಾರ್ಯಾಚರಣೆ ಮಾಹಿತಿ ಪಡೆಯಲು ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.
ಅಸ್ಸಾಂನ ಪ್ರಸಿದ್ಧ ಕಾಂಜಿರಂಗ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಪ್ರದೇಶ ಪ್ರವಾಹದಿಂದಾಗಿ ಜಲಾವೃತವಾಗಿದೆ. ಇದುವರೆಗೂ 108 ಪ್ರಾಣಿಗಳು ಮೃತಪಟ್ಟಿವೆ ಎಂದು ರಾಜ್ಯ ಸರ್ಕಾರ ಹೇಳಿದೆ.

9 ಘೆಂಡಾಮೃಗ, 4 ಕಾಡೆಮ್ಮೆಗಳು, 7 ಕಾಡು ಹಂದಿ, 2 ಸಾರಂಗಗಳು, 82 ಜಿಂಕೆಗಳು ಇದುವರೆಗೂ ಮೃತಪಟ್ಟಿವೆ ಎಂದು ಸರ್ಕಾರ ಹೇಳಿದೆ. ಕೆಲವು ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಜಲಾವೃತವಾಗಿರುವ ಪ್ರದೇಶದಲ್ಲಿ ಪ್ರಾಣಿಗಳಿಗೆ ಆಹಾರವನ್ನುಒದಗಿಸುತ್ತಿವೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನರೇಂದ್ರ ಮೋದಿ ಮುಖ್ಯಮಂತ್ರಿ ಸರ್ವಾನಂದ ಸೋನಾವಾಲ್ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದು, ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ.












Click it and Unblock the Notifications