ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಸ್ಸಾಂನಲ್ಲಿ ಮಳೆ, ಪ್ರವಾಹ; ಮೃಗಾಲಯದ 108 ಪ್ರಾಣಿಗಳು ಸಾವು

|
Google Oneindia Kannada News

ದಿಸ್ಪುರ್, ಜುಲೈ 19 : ಭಾರಿ ಮಳೆ, ಪ್ರವಾಹಕ್ಕೆ ಸಿಲುಕಿರುವ ಅಸ್ಸಾಂ ರಾಜ್ಯ ನಲುಗಿ ಹೋಗಿದೆ. ಇದುವರೆಗೂ ರಾಜ್ಯದಲ್ಲಿ 79 ಜನರು ಮೃತಪಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಹ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದ್ದು, ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ.

ಭಾನುವಾರ ಪ್ರವಾಹಕ್ಕೆ ಸಿಲುಕಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಇದುವರೆಗೂ ಮೃತಪಟ್ಟವರ ಸಂಖ್ಯೆ 79ಕ್ಕೇ ಏರಿಕೆಯಾಗಿದೆ ಎಂದು ಅಸ್ಸಾಂ ಸರ್ಕಾರ ಹೇಳಿದೆ. ಮುಖ್ಯಮಂತ್ರಿ ಸರ್ವಾನಂದ ಸೋನಾವಾಲ್ ಪರಿಸ್ಥಿತಿ ಬಗ್ಗೆ ತಿಳಿಯಲು, ಕಾರ್ಯಾಚರಣೆ ಮಾಹಿತಿ ಪಡೆಯಲು ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

ಅಸ್ಸಾಂ: ಪ್ರಧಾನಿ ಮೋದಿಗೆ ಮಾಜಿ ಪ್ರಧಾನಿ ದೇವೇಗೌಡರ ಸಲಹೆಅಸ್ಸಾಂ: ಪ್ರಧಾನಿ ಮೋದಿಗೆ ಮಾಜಿ ಪ್ರಧಾನಿ ದೇವೇಗೌಡರ ಸಲಹೆ

ಅಸ್ಸಾಂನ ಪ್ರಸಿದ್ಧ ಕಾಂಜಿರಂಗ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಪ್ರದೇಶ ಪ್ರವಾಹದಿಂದಾಗಿ ಜಲಾವೃತವಾಗಿದೆ. ಇದುವರೆಗೂ 108 ಪ್ರಾಣಿಗಳು ಮೃತಪಟ್ಟಿವೆ ಎಂದು ರಾಜ್ಯ ಸರ್ಕಾರ ಹೇಳಿದೆ.

ಅಸ್ಸಾಂ ಪ್ರವಾಹ: ಸಾವಿನ ಸಂಖ್ಯೆ 16ಕ್ಕೆ ಏರಿಕೆಅಸ್ಸಾಂ ಪ್ರವಾಹ: ಸಾವಿನ ಸಂಖ್ಯೆ 16ಕ್ಕೆ ಏರಿಕೆ

Assam

9 ಘೆಂಡಾಮೃಗ, 4 ಕಾಡೆಮ್ಮೆಗಳು, 7 ಕಾಡು ಹಂದಿ, 2 ಸಾರಂಗಗಳು, 82 ಜಿಂಕೆಗಳು ಇದುವರೆಗೂ ಮೃತಪಟ್ಟಿವೆ ಎಂದು ಸರ್ಕಾರ ಹೇಳಿದೆ. ಕೆಲವು ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಜಲಾವೃತವಾಗಿರುವ ಪ್ರದೇಶದಲ್ಲಿ ಪ್ರಾಣಿಗಳಿಗೆ ಆಹಾರವನ್ನುಒದಗಿಸುತ್ತಿವೆ.

ಅಸ್ಸಾಂನಲ್ಲಿ ಭಾರೀ ಪ್ರವಾಹ, ಜನ ಜೀವನ ಅತಂತ್ರ: ಜನರ ನೆರವಿಗೆ ನಿಂತ ಬಿಜೆಪಿ ಶಾಸಕಅಸ್ಸಾಂನಲ್ಲಿ ಭಾರೀ ಪ್ರವಾಹ, ಜನ ಜೀವನ ಅತಂತ್ರ: ಜನರ ನೆರವಿಗೆ ನಿಂತ ಬಿಜೆಪಿ ಶಾಸಕ

ಪ್ರಧಾನಮಂತ್ರಿ ನರೇಂದ್ರ ಮೋದಿ ನರೇಂದ್ರ ಮೋದಿ ಮುಖ್ಯಮಂತ್ರಿ ಸರ್ವಾನಂದ ಸೋನಾವಾಲ್‌ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದು, ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ.

English summary
108 animals died at Kaziranga national park and Tiger reserve in flood-related incidents in Assam. PM Narendra Modi speaks to CM Sarbananda Sonowal over flood situation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X