Get Updates
Get notified of breaking news, exclusive insights, and must-see stories!

ಬಾಂಗ್ಲಾದೇಶ ಬೆನ್ನಲ್ಲೇ ಅಸ್ಸಾಂನಲ್ಲಿ ಭುಗಿಲೆದ್ದ ಹಿಂಸಾಚಾರ: ಇಬ್ಬರ ಸಾವು, ಸೇನೆ ಮಧ್ಯಪ್ರವೇಶ

ಗುವಾಹಟಿ: ಈಶಾನ್ಯ ಭಾರತದ ಅಸ್ಸಾಂ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಅಸ್ಸಾಂನ ಹಿಂಸಾಚಾರ ಪೀಡಿತ ಪಶ್ಚಿಮ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸೇನೆಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ. ಇಲ್ಲಿನ ಮಣಿಪುರ ರಾಜ್ಯದಲ್ಲಿ ಈಗಾಗಲೇ ಆಂತರಿಕ ಕಲಹ ಶುರುವಾಗಿ ವರ್ಷಗಳೇ ಆಗಿವೆ. ಇದೀಗ ಈಶಾನ್ಯ ಭಾರತದ ಮತ್ತೊಂದು ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದಿದ್ದೆ. ಅಸ್ಸಾಂನ ಕರ್ಬಿ ಅಂಗ್ಲಾಂಗ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಸಾವನ್ನಪ್ಪಿದ್ದು, 45ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಅಸ್ಸಾಂನಲ್ಲಿ ಹೊರಗಿನ ಅತಿಕ್ರಮಣಕಾರರನ್ನು ಹೊರಹಾಕುವಂತೆ ಒತ್ತಾಯಿಸಿ ಪ್ರತಿಭಟನೆಗಳು ನಡೆಯುತ್ತಿದ್ದು, ಇದು ಕಳೆದ ಎರಡು ದಿನಗಳಿಂದ ಉಗ್ರ ಸ್ವರೂಪ ಪಡೆದುಕೊಂಡಿದೆ. ಅಸ್ಸಾಂನಲ್ಲಿ ಅತಿ ಹೆಚ್ಚು ಹಾನಿಗೊಳಗಾದ ಖೇರೋನಿ ಪ್ರದೇಶದಲ್ಲಿ ಹಿಂಸಾಚಾರದಲ್ಲಿ ತೊಡಗದಂತೆ ಜನರಿಗೆ ಪೊಲೀಸರು ಮನವಿ ಮಾಡಿದ್ದಾರೆ. ದಾರಿ ತಪ್ಪಿದ ಯುವಕರಿಗೆ ಮಾತುಕತೆಯ ಮೂಲಕ ಮಾತ್ರ ಸಮಸ್ಯೆಗಳನ್ನು ಪರಿಹರಿಸಬಹುದು ಎಂದು ಸಮುದಾಯದ ಹಿರಿಯರು ತಿಳಿ ಹೇಳುತ್ತಿದ್ದಾರೆ. ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಅಧಿಕಾರಿ ಡಿಜಿ ಹರ್ಮೀತ್ ಸಿಂಗ್ ಹೇಳಿದ್ದಾರೆ.

Assam on Edge After Bangladesh Fallout Two Killed Army Steps In

ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ಈ ಪ್ರದೇಶಕ್ಕೆ ಸೇನಾ ತುಕಡಿಯನ್ನು ಕಳುಹಿಸಲಾಗಿದೆ. ನೆರೆ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಭಾರತದ ಈಶಾನ್ಯ ರಾಜ್ಯಗಳಲ್ಲಿ ಪರಿಸ್ಥಿತಿಯು ಬೂದಿ ಮುಚ್ಚಿದ ಕೆಂಡದಂತೆ ಇದೆ. ಇದೀಗ ಸೇನಾ ಪಡೆಯು ಇಲ್ಲಿಗೆ ತಲುಪಿದೆ ಮತ್ತು ಅವರು ಈ ಪ್ರದೇಶಗಳ ಮೂಲಕ ಸೇನೆ ಗಸ್ತು ನಡೆಯುತ್ತಿದ್ದು, ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಇಂದು ಪರಿಸ್ಥಿತಿ ಸುಧಾರಿಸಿದೆ. ಎರಡೂ ಗುಂಪುಗಳ ನಡುವೆ ಪರಸ್ಪರ ಮಾತಕತೆ ನಡೆದಿದೆ ಮತ್ತು ನಮ್ಮ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ. ಇಂದಿನ ಪರಿಸ್ಥಿತಿ ಸಂಪೂರ್ಣವಾಗಿ ತಿಳಿಯಾಗಿದೆ. ಜನರು ಅಂಗಡಿಗಳು ಮತ್ತು ಬೀದಿಗಳಿಗೆ ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ನಾವು ಇನ್ನೂ ಉತ್ತಮ ಪರಿಸ್ಥಿತಿಗೆ ಹಿಂದಿರುಗಲಿದ್ದೇವೆ.

ನಿನ್ನೆ ಪೊಲೀಸರ ಗುಂಡಿನ ದಾಳಿಯಿಂದಾಗಿ, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಚಳವಳಿಗಾರರು ಕೆಲವು ಮನೆಗಳು ಮತ್ತು ಅಂಗಡಿಗಳನ್ನು ಸುಟ್ಟುಹಾಕಿದ್ದಾರೆ. ದೈಹಿಕವಾಗಿ ಅಶಕ್ತರಾಗಿದ್ದ (ವಿಶೇಷ ಚೇತನ) ವ್ಯಕ್ತಿ ತಮ್ಮ ಮನೆಯಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾರೆ. ಅವರನ್ನು ಜೀವಂತವಾಗಿ ಸುಟ್ಟುಹಾಕಲಾಗಿದೆ. ಇಲ್ಲಿಯವರೆಗೆ, ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಜಿಲ್ಲಾಧಿಕಾರಿಗಳಿಗೆ ಮಹತ್ವದ ಸೂಚನೆ

ಇನ್ನು ಅಸ್ಸಾಂನ ವಿವಿಧ ಭಾಗದಲ್ಲಿ ಹಿಂಸಾಚಾರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಜಿಲ್ಲಾಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ. ನಮ್ಮ ಜಿಲ್ಲಾಧಿಕಾರಿಗಳು ಅನುಮಾನಾಸ್ಪದ ವ್ಯಕ್ತಿ ಅಥವಾ ನ್ಯಾಯಮಂಡಳಿಯಿಂದ ವಿದೇಶಿಯರೆಂದು ಘೋಷಿಸಲ್ಪಟ್ಟ ಯಾವುದೇ ವ್ಯಕ್ತಿಯನ್ನು ತಕ್ಷಣವೇ ಗಡಿಪಾರು ಆದೇಶ ಹೊರಡಿಸಬೇಕು ಮತ್ತು ಪೊಲೀಸರು ಅಥವಾ ಬಿಎಸ್‌ಎಫ್ ಅವರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಲು ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ಅಸ್ಸಾಂ ಡಿಜಿಪಿ ಹರ್ಮೀತ್ ಸಿಂಗ್ ಅವರು, ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ. ಸೇನೆಯಿಂದಲೂ ಸಹಕಾರ ಸಿಗುತ್ತಿದೆ. ಕೇವಲ ಬಲವಂತದಿಂದ ಪರಿಸ್ಥಿತಿಯನ್ನು ನಿಯಂತ್ರಿಸದೆ, ಸಭೆ ಆಯೋಜಿಸಲಾಗುತ್ತಿದೆ. ಅಸ್ಸಾಂ ಸರ್ಕಾರವು ರಾಜ್ಯ ಸರ್ಕಾರ, ಸ್ಥಳೀಯ ಮಂಡಳಿ ಮತ್ತು ತಮ್ಮ ಬೇಡಿಕೆಗಳನ್ನು ಮಂಡಿಸುತ್ತಿರುವ ಜನರ ನಡುವೆ ತ್ರಿಪಕ್ಷೀಯ ಸಭೆಗೆ ಸಮಯ ನೀಡಿದೆ. ಈ ಪ್ರತಿಭಟನೆ ನಡೆಸುತ್ತಿರುವವರು ಮುಂದೆ ಬಂದು ಯುವಕರಿಗೆ ಅಂತಹ ವಿಷಯಗಳು (ಹಿಂಸೆ) ಯಾರಿಗೂ ಪ್ರಯೋಜನವಾಗುವುದಿಲ್ಲ ಎಂದು ಅರ್ಥಮಾಡಿಕೊಳ್ಳಬೇಕು. ಅಗತ್ಯವಿರುವ ಕಾನೂನು ಕ್ರಮ ಕೈಗೊಳ್ಳಲಾಗುವುದು. ನಮ್ಮಲ್ಲಿ ವೀಡಿಯೊ ದೃಶ್ಯಾವಳಿಗಳಿವೆ ಮತ್ತು ಕೆಲವು ಜನರನ್ನು ಈಗಾಗಲೇ ಗುರುತಿಸಲಾಗಿದೆ. ಈ ಹಿಂಸೆಯಲ್ಲಿ ತೊಡಗಿಕೊಂಡಿರುವವರ ಮೇಲೆ ನಾವು ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಿದ್ದೇವೆ ಎಂದು ಅವರು ಹೇಳಿದ್ದಾರೆ.

2 ಸಾವು - ಪೊಲೀಸ್ ಸಿಬ್ಬಂದಿ ಸೇರಿ 45 ಜನಕ್ಕೆ ಗಾಯ

ಇನ್ನು ಅಸ್ಸಾಂನಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಪಶ್ಚಿಮ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಅಲ್ಲದೇ 38 ಜನ ಪೊಲೀಸ್ ಸಿಬ್ಬಂದಿ ಸೇರಿದಂತೆ 45 ಮಂದಿ ಗಾಯಗೊಂಡಿದ್ದಾರೆ. ಬುಡಕಟ್ಟು ಜನರಿರುವ ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿರುವವರನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ಕರ್ಬಿ ಸಮುದಾಯದ ಪ್ರತಿಭಟನಾಕಾರರು ಕಳೆದ 15 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಸೋಮವಾರ ಮುಂಜಾನೆ ಪ್ರತಿಭಟನಾ ಸ್ಥಳದಿಂದ ಮೂವರು ಪ್ರತಿಭಟನಾಕಾರರನ್ನು ಪೊಲೀಸರು ಕರೆದೊಯ್ದರು ಇದು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುವುದಕ್ಕೆ ಕಾರಣವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+