ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಈ ರಾಜ್ಯದಲ್ಲಿ 2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗವಿಲ್ಲ!

ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಪಡೆದವರಿಗೆ ಸರ್ಕಾರಿ ಉದ್ಯೋಗ ನಿರಾಕರಿಸುವ ಜನಸಂಖ್ಯಾ ಯೋಜನೆಯ ಕರಡು ನೀತಿಯೊಂದನ್ನು ಅಸ್ಸಾಂ ಸರ್ಕಾರ ಜಾರಿಗೆ ತಂದಿದೆ. ಗೃಹ ಹಂಚಿಕೆ ಮುಂತಾದ ಸರ್ಕಾರಿ ಯೋಜನೆಗಳಿಗೂ ಈ ಯೋಜನೆ ಅನ್ವಯವಾಗಲಿದೆ.

|
Google Oneindia Kannada News

ಗುವಾಹಟಿ, ಏಪ್ರಿಲ್ 10 : ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಪಡೆದವರಿಗೆ ಸರ್ಕಾರಿ ಉದ್ಯೋಗ ನಿರಾಕರಿಸುವ ಜನಸಂಖ್ಯಾ ಯೋಜನೆಯ ಕರಡು ನೀತಿಯೊಂದನ್ನು ಅಸ್ಸಾಂ ಸರ್ಕಾರ ಭಾನುವಾರ ಪ್ರಕಟಿಸಿದೆ.

ಕರಡು ನೀತಿಯ ಪ್ರಕಾರ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಪಡೆಯುವವರು ಸರ್ಕಾರಿ ಉದ್ಯೋಗಕ್ಕೆ ಅರ್ಹರಾಗಿರುವುದಿಲ್ಲ ಎಂದು ಅಸ್ಸಾಂ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Assam says no government job for those with more than two children

ಈ ಷರತ್ತಿನ ಅನ್ವಯ ಈಗಾಗಲೇ ಉದ್ಯೋಗ ಪಡೆದುಕೊಂಡವರು ತಮ್ಮ ಸೇವಾವಧಿ ಪೂರ್ಣಗೊಳ್ಳುವವರೆಗೂ ಇದನ್ನು ಪಾಲಿಸಬೇಕು. ಅಲ್ಲದೇ, ಟ್ರ್ಯಾಕ್ಟರ್ ನೀಡಿಕೆ, ಗೃಹ ಹಂಚಿಕೆ ಮುಂತಾದ ಸರ್ಕಾರಿ ಯೋಜನೆಗಳಿಗೂ ಯೋಜನೆ ಅನ್ವಯವಾಗಲಿದೆ.

ಪಂಚಾಯತ್, ಮುನಿಸಿಪಾಲಿಟಿ ಚುನಾವಣೆ ಸೇರಿದಂತೆ ರಾಜ್ಯ ಚುನಾವಣಾ ಆಯೋಗದ ಅಡಿಯಲ್ಲಿ ನೆಡೆಯುವ ಚುನಾವಣಾ ಅಭ್ಯರ್ಥಿಗಳೂ ಈ ನೀತಿ ಪಾಲಿಸಬೇಕು ಎಂದು ಅವರು ಹೇಳಿದ್ದಾರೆ.

English summary
The Assam government on Sunday announced a draft population policy which suggested denial of government jobs to people with more than two children and making education up to university level free for all girls in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X