ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿಗೆ ಕೊಲೆ ಬೆದರಿಕೆ: ಲಕ್ನೋದಲ್ಲಿ ಶಾಲಾ ಬಾಲಕ ಬಂಧನ

ಲಕ್ನೋ, ಏಪ್ರಿಲ್‌ 07: ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿ ಮಾಧ್ಯಮ ಸಂಸ್ಥೆಗೆ ಇಮೇಲ್ ಕಳುಹಿಸಿದ್ದ ಶಾಲಾ ಬಾಲಕನನ್ನು ಬಂಧಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಲಕ್ನೋದ ಹದಿಹರೆಯದ ಯುವಕನನ್ನು ನೋಯ್ಡಾ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಹಾರ ಮೂಲದ 16 ವರ್ಷದ ಬಾಲಕನನ್ನು ಶುಕ್ರವಾರ ಬೆಳಗ್ಗೆ ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಚಿನ್ಹಾಟ್ ಪ್ರದೇಶದಿಂದ ಕರೆತಂದು ಇಲ್ಲಿಗೆ ಕರೆತರಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ (ನೋಯ್ಡಾ) ರಜನೀಶ್ ವರ್ಮಾ ತಿಳಿಸಿದ್ದಾರೆ.

Assassination threat to PM, UP CM; schoolboy held from Lucknow

'ಏಪ್ರಿಲ್ 5 ರಂದು ಇಲ್ಲಿನ ಸೆಕ್ಟರ್ 20 ಪೊಲೀಸ್ ಠಾಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ. ನಂತರ ಈ ವಿಷಯವನ್ನು ತನಿಖೆ ಮಾಡಲಾಯಿತು. ಬೆದರಿಕೆ ಸಂದೇಶವನ್ನು ಒಳಗೊಂಡಿರುವ ಇಮೇಲ್ ಕಳುಹಿಸುವವರನ್ನು ಪತ್ತೆ ಹಚ್ಚಲು ತಾಂತ್ರಿಕ ತಂಡಗಳು ಭಾರೀ ಕಸರತ್ತು ನಡೆಸಿವೆ' ಎಂದು ವರ್ಮಾ ಹೇಳಿದರು.

'ತನಿಖೆಯ ಆಧಾರದ ಮೇಲೆ, ಇಮೇಲ್ ಕಳುಹಿಸಿದವರನ್ನು ಪತ್ತೆಹಚ್ಚಲಾಯಿತು. ಲಕ್ನೋದ ಚಿನ್ಹಾಟ್ ಪ್ರದೇಶದಲ್ಲಿ ಈತ ಇರುವುದು ಕಂಡುಬಂದಿತು. ಕಳುಹಿಸಿದವನು ಶಾಲಾ ಬಾಲಕನಾಗಿದ್ದಾನೆ. ಅವನು ತನ್ನ 11 ನೇ ತರಗತಿಯನ್ನು ಪೂರ್ಣಗೊಳಿಸಿದ್ದಾನೆ. ಈ ವರ್ಷ 12 ನೇ ತರಗತಿಯನ್ನು ಪ್ರಾರಂಭಿಸಲಿದ್ದಾನೆ' ಎಂದು ಪೊಲೀಸ್ ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.

ಬಾಲಕನನ್ನು ಇಲ್ಲಿನ ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ ಎಂದು ವರ್ಮಾ ತಿಳಿಸಿದ್ದಾರೆ.

ಮಾಧ್ಯಮ ಸಂಸ್ಥೆಯ ಪ್ರತಿನಿಧಿಯೊಬ್ಬರು ದೂರಿನೊಂದಿಗೆ ಅವರನ್ನು ಸಂಪರ್ಕಿಸಿದ ನಂತರ ಪೊಲೀಸರು 'ಅಪರಿಚಿತ' ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಧಾನಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿಯನ್ನು ಹತ್ಯೆ ಮಾಡುವ ಬೆದರಿಕೆಯ ಇಮೇಲ್ ಬಂದಿದೆ ಎಂದು ತಿಳಿಸಿದ್ದಾರೆ.

Assassination threat to PM, UP CM; schoolboy held from Lucknow

ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳು 153A (1b) (ಸಾಮರಸ್ಯ ಕಾಪಾಡಲು ಪೂರ್ವಾಗ್ರಹ ಪೀಡಿತ ಅಥವಾ ಸಾರ್ವಜನಿಕ ನೆಮ್ಮದಿಗೆ ಭಂಗ ತರುವಂತಹ ಕೃತ್ಯ), 505 (1b) (ಸಾರ್ವಜನಿಕರಿಗೆ ಭಯ ಅಥವಾ ಎಚ್ಚರಿಕೆಯನ್ನು ಉಂಟುಮಾಡುವ, ಅಥವಾ ಯಾರಿಗಾದರೂ ಅಪಾಯವನ್ನುಂಟುಮಾಡುವ ಕ್ರಿಯೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಯಾವುದೇ ವ್ಯಕ್ತಿಯನ್ನು ರಾಜ್ಯದ ವಿರುದ್ಧ ಅಥವಾ ಸಾರ್ವಜನಿಕ ನೆಮ್ಮದಿಯ ವಿರುದ್ಧ ಅಪರಾಧ ಮಾಡಲು ಪ್ರೇರೇಪಿಸಬಹುದಾದ ಸಾರ್ವಜನಿಕ ವಿಭಾಗ), 506 (ಅಪರಾಧ ಬೆದರಿಕೆ), 507 (ಅನಾಮಧೇಯ ಸಂವಹನದಿಂದ ಅಪರಾಧ ಬೆದರಿಕೆ) ಪ್ರಕರಣಗಳನ್ನು ಆತನ ಮೇಲೆ ಪೊಲೀಸರು ಹಾಕಿದ್ದಾರೆ.

ಈ ಪ್ರಕರಣದಲ್ಲಿ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳನ್ನು ಸಹ ಅನ್ವಯಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು 2023 ರಲ್ಲಿ ಎಂಟನೇ ಬಾರಿಗೆ ಕರ್ನಾಟಕ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಹುಲಿ ಯೋಜನೆಯ 50 ವರ್ಷಗಳನ್ನು ಪೂರೈಸಿದ ಕಾರ್ಯಕ್ರಮವನ್ನು ಉದ್ಘಾಟಿಸಲು ಪ್ರಧಾನಿ ಮೋದಿ ಏಪ್ರಿಲ್ 9 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.

2014 ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೇಂದ್ರ ಸರ್ಕಾರದ ನೇತೃತ್ವ ವಹಿಸಿದ ನಂತರ ಒಂದು ವರ್ಷದಲ್ಲಿ ರಾಜ್ಯವೊಂದಕ್ಕೆ ಅತಿ ಹೆಚ್ಚು ಬಾರಿ ಭೇಟಿ ನೀಡುತ್ತಿರುವುದು ಗಮನಾರ್ಹವಾಗಿದೆ.

ಈ ಭೇಟಿಯ ವೇಳೆ ಪ್ರಧಾನಿಯವರು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪ್ರವಾಸ ಕೈಗೊಳ್ಳುವ ನಿರೀಕ್ಷೆಯಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಹುಲಿ ಯೋಜನೆಗೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮೂರು ದಿನಗಳ ಮೆಗಾ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದಲ್ಲಿ ಏಪ್ರಿಲ್ 10 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಬಿಜೆಪಿ ಕಾರ್ಯಕರ್ತರು ಮತ್ತು ಅಧಿಕಾರಿಗಳೊಂದಿಗೆ ಪ್ರಧಾನಿ ಸಭೆ ನಡೆಸುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಮೇ 13 ರಂದು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+