ವಿಧಾನಸಭೆ ಉಪಚುನಾವಣೆ 2022: 6 ರಾಜ್ಯಗಳ 7 ಸ್ಥಾನಗಳಿಗೆ ವೇಳಾಪಟ್ಟಿ ಬಿಡುಗಡೆ

ನವದೆಹಲಿ ಅಕ್ಟೋಬರ್ 3: ಭಾರತದ ಚುನಾವಣಾ ಆಯೋಗವು ಆರು ರಾಜ್ಯಗಳ ಏಳು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಯ ದಿನಾಂಕಗಳನ್ನು ಇಂದು ಪ್ರಕಟಿಸಿದೆ. ನವೆಂಬರ್ 3 ರಂದು ಮತದಾನ ನಡೆಯಲಿದ್ದು, ನವೆಂಬರ್ 6 ರಂದು ಮತ ಎಣಿಕೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಗಮನಾರ್ಹವಾಗಿ, ಮಹಾರಾಷ್ಟ್ರ, ಬಿಹಾರ, ಒಡಿಶಾ, ತೆಲಂಗಾಣ, ಉತ್ತರ ಪ್ರದೇಶ ಮತ್ತು ಹರಿಯಾಣದಲ್ಲಿ ಉಪಚುನಾವಣೆ ನಡೆಯಲಿದೆ.

ಈ ಚುನಾವಣೆಗಳಿಗೆ ವಿದ್ಯುನ್ಮಾನ ಮತಯಂತ್ರಗಳನ್ನು ಬಳಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗ ನೋಟಿಸ್‌ನಲ್ಲಿ ತಿಳಿಸಿದೆ.

ಚುನಾವಣಾ ಆಯೋಗದ ಪ್ರಕಾರ, ಚುನಾವಣಾ ಅಧಿಸೂಚನೆಯನ್ನು ಅಕ್ಟೋಬರ್ 7 ಹೊರಡಿಸಲಾಗುತ್ತದೆ. ನಾಮಪತ್ರಗಳನ್ನು ಸಲ್ಲಿಸಲು ಅಕ್ಟೋಬರ್ 14 ಕೊನೆಯ ಆಗಿದೆ. ನಾಮ ಪತ್ರಗಳ ಪರಿಶೀಲನೆಯು ಅಕ್ಟೋಬರ್ 15 ರಂದು ನಡೆಯಲಿದೆ ಎಂದು ಹೇಳಿಕೆಯಲ್ಲಿ ತಿಳಿಸಿಲಾಗಿದೆ. ಉಮೇದುವಾರಿಕೆಗಳನ್ನು ಹಿಂಪಡೆಯಲು ಅಕ್ಟೋಬರ್ 17 ಕೊನೆಯ ದಿನವಾಗಿದೆ.

Assembly By-Elections 2022: Schedule Released for 7 Seats Across 6 States- Check Dates Here

ಚುನಾವಣಾ ಆಯೋಗದ ಪ್ರಕಾರ, ಅಕ್ಟೋಬರ್ 7 ರಿಂದ ಈ ಎಲ್ಲಾ ಕ್ಷೇತ್ರಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ. ಈ ಚುನಾವಣೆಗಳು ಮಹಾರಾಷ್ಟ್ರದ ಅಂಧೇರಿ ಪೂರ್ವ, ಬಿಹಾರದ ಮೊಕಾಮಾ ಮತ್ತು ಗೋಪಾಲ್ಗಂಜ್, ಹರಿಯಾಣದ ಆದಂಪುರ, ತೆಲಂಗಾಣದ ಮನುಗೋಡ್, ಉತ್ತರ ಪ್ರದೇಶದ ಗೋಲಾ ಗೋಕರ್ನಾಥ ಮತ್ತು ಒಡಿಶಾದ ಧಮ್‌ನಗರ (ಮೀಸಲು) ಸ್ಥಾನಗಳಿಗೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+