ಫೆ.4ರಂದು ಯುಪಿ, ಉತ್ತರಾಖಂಡದಲ್ಲಿ ಪ್ರಧಾನಿ ಮೋದಿ ವರ್ಚುವಲ್ ಪ್ರಚಾರ ಭಾಷಣ

ನವದೆಹಲಿ, ಫೆಬ್ರವರಿ 3: ಉತ್ತರಾಖಂಡದ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಿದ್ದು, ಆಡಳಿತರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಚುನಾವಣೆ ಎದುರಿಸಲು ಸನ್ನದ್ಧವಾಗುತ್ತಿವೆ. ಅದರಲ್ಲೂ ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಗಂಭೀರವಾಗಿ ತೆಗೆದುಕೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 4ರಂದು ಶುಕ್ರವಾರ ಉತ್ತರಾಖಂಡದ 14 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ಡಿಜಿಟಲ್ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ ಎಂದು ಬಿಜೆಪಿ ಮೂಲಗಳು ಗುರುವಾರ ತಿಳಿಸಿವೆ.

ಅದೇ ದಿನ, ಪ್ರಧಾನಿ ನರೇಂದ್ರ ಮೋದಿಯವರು ಉತ್ತರಪ್ರದೇಶದಲ್ಲಿ ಡಿಜಿಟಲ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ ಎಂದು ಮೂಲಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿವೆ. ಇದು ಪ್ರಧಾನಿ ಮೋದಿಯವರ ಎರಡನೇ ವರ್ಚುವಲ್ ಸಭೆ ಆಗಿದ್ದು, ಮೊದಲನೆಯದು ಜನವರಿ 31ರಂದು ನಡೆದಿತ್ತು.

Assembly Election 2022: Prime Minister Modi Virtual Campaign Speech in UP and Uttarakhand on February 4th

ಇನ್ನು ಉತ್ತರಪ್ರದೇಶದಲ್ಲಿ ಶುಕ್ರವಾರದ ವರ್ಚುವಲ್ ಸಭೆಯು ರಾಜ್ಯದ ಪಶ್ಚಿಮ ಭಾಗದ ಸುಮಾರು 20 ವಿಧಾನಸಭಾ ಸ್ಥಾನಗಳನ್ನು ಒಳಗೊಂಡಿದೆ. ಯುಪಿಯಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆ ಫೆಬ್ರವರಿ 10ರಂದು ಮತ್ತು ಎರಡನೇ ಮತ್ತು ಮೂರನೇ ಹಂತಗಳು ಫೆಬ್ರವರಿ 14 ಮತ್ತು 20ರಂದು ನಡೆಯಲಿದೆ.

ಪಶ್ಚಿಮ ಉತ್ತರಪ್ರದೇಶದ ಹೆಚ್ಚಿನ ಕ್ಷೇತ್ರಗಳಿಗೆ ಮೊದಲ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದರೆ, ರಾಜ್ಯದಲ್ಲಿ ಒಟ್ಟು ಏಳು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.

ಕೇಂದ್ರ ಚುನಾವಣಾ ಆಯೋಗವು ಇಲ್ಲಿಯವರೆಗೆ ಪೂರ್ಣ ಪ್ರಮಾಣದ ಭೌತಿಕ ಪ್ರಚಾರ ಸಭೆಗಳನ್ನು ಅನುಮತಿ ನೀಡಿಲ್ಲ ಮತ್ತು 1,000 ಜನರ ಮಿತಿಯೊಂದಿಗೆ ಸಾರ್ವಜನಿಕ ಸಭೆಗಳನ್ನು ನಡೆಸಲು ಮಾತ್ರ ಅನುಮತಿಸಲಾಗಿದೆ.

Assembly Election 2022: Prime Minister Modi Virtual Campaign Speech in UP and Uttarakhand on February 4th

ಒಂದೇ ಹಂತದಲ್ಲಿ ಫೆ.14ರಂದು ಮತದಾನ
ಉತ್ತರಾಖಂಡದಲ್ಲಿ ಜನವರಿ 21ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಜನವರಿ 21ರಿಂದ ಜ.28ರವರೆಗೆ ಅವಕಾಶವಿರುತ್ತದೆ. ಜನವರಿ 29ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜನವರಿ 31 ಕೊನೆಯ ದಿನಾಂಕವಾಗಿದೆ.

ಉತ್ತರಾಖಂಡ ರಾಜ್ಯದ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆ.14ರಂದು ಮತದಾನ ನಡೆಯಲಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ಉತ್ತರಾಖಂಡ ಅಭ್ಯರ್ಥಿಗಳ ವೆಚ್ಚದ ಮಿತಿ 40 ಲಕ್ಷ ರೂ. ಇರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. 2017ರ ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 70 ಸ್ಥಾನಗಳ ಪೈಕಿ ಬಿಜೆಪಿ 57 ಸ್ಥಾನಗಳನ್ನು ಗೆದ್ದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+