Jharkhand Assembly Election 2024: ಜಾರ್ಖಂಡ್‌ನಲ್ಲಿ ಗೆಲ್ಲುವ ಪಕ್ಷದ ಬಗ್ಗೆ ಗುಟ್ಟು ಬಿಚ್ಚಿಟ್ಟ ಆಂಧ್ರಪ್ರದೇಶದ ಸಿಎಂ

Jharkhand Assembly Election 2024: ಈಗಾಗಲೇ ಹರಿಯಾಣ ಹಾಗೂ ಜಮ್ಮು & ಕಾಶ್ಮೀರ ವಿಧಾನಸಭೆ ಚುನಾಚಣೆಯ ಫಲಿತಾಂಶ ಹೊರಬಿದ್ದಿದೆ. ಇನ್ನೂ ಜಾರ್ಖಂಡ್‌ ಹಾಗೂ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಆಗಬೇಕಿದೆ. ಈಗಾಗಲೇ ಈ ಎರಡು ರಾಜ್ಯಗಳಲ್ಲೂ ಎಲ್ಲಾ ಪಕ್ಷಗಳ ರಾಜಕಾರಣಿಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.

ವಿಧಾನಸಭೆ ಘೋಷಣೆಗೂ ಮುನ್ನವೇ ಹರಿಯಾಣದಲ್ಲಿ ಎಲ್ಲಾ ರಾಜಕಾರಣಿಗಳು ಅಬ್ಬರದ ಪ್ರಚಾರವನ್ನು ಮಾಡುತ್ತಿದ್ದಾರೆ. ಇದರ ನಡುವೆಯೇ ಇದೀಗ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ಈ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಲಿದ ಎನ್ನುವ ಬಗ್ಗೆ ಸ್ಫೋಟಕ ಭವಿಷ್ಯವನ್ನು ನುಡಿದಿದ್ದಾರೆ.

Assembly Election 2024 Andhra Pradesh CM Revealed Secret About Winning Party in Jharkhand

ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಮಾತನಾಡಿ, ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ಮುಂಬರುವ ವಿಧಾನಸಭಾ ಚುನಾವಣಾ ಫಲಿತಾಂಶಗಳು ಹರಿಯಾಣ ಫಲಿತಾಂಶಗಳನ್ನು ಪುನರಾವರ್ತಿಸಲಿವೆ ಎಂದು ಹೇಳಿದ್ದಾರೆ. ಇನ್ನು ಜಮ್ಮು & ಕಾಶ್ಮೀರದಲ್ಲಿ ಸಹಜ ಸ್ಥಿತಿಗೆ ಮರಳಿದೆ. ಅಲ್ಲದೆ, ಅಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಗುರುತಿಸಿಕೊಂಡಿದೆ ಎಂದು ಹೇಳಿದ್ದಾರೆ.

"ಹರಿಯಾಣದಲ್ಲಿ ಐತಿಹಾಸಿಕ ಚುನಾವಣಾ ಗೆಲುವು ಮತ್ತು ಜಮ್ಮು-ಕಾಶ್ಮೀರದಲ್ಲಿ ಉತ್ತಮ ಸಾಧನೆಗಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ. ನಂಬಿಕೆಗೆ ಅರ್ಹನಾದ ನಾಯಕ ಉತ್ತಮವಾಗಿ ಕಾರ್ಯ ನಿರ್ವಹಿಸಿದಾಗಲೆಲ್ಲಾ ಜನರು ಅವರನ್ನು ಬೆಂಬಲಿಸುತ್ತಾರೆ ಎಂಬುದಕ್ಕೆ ಇದು ಸೂಕ್ತ ಉದಾಹರಣೆ. ಇದು ಹರಿಯಾಣದಲ್ಲಿ ಅಷ್ಟೇ ಅಲ್ಲದೆ, ಜಮ್ಮು & ಕಾಶ್ಮೀರದಲ್ಲಿಯೂ ಸಹ ಸಾಬೀತಾಗಿದೆ. ವೋಟ್ ಪರ್ಸೆಂಟೇಜ್‌ನಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಜಮ್ಮು ಕಾಶ್ಮೀರದಲ್ಲಿ ಸಾಬಿತುಪಡಿಸಿದೆ," ಎಂದು ಹೇಳಿದ್ದಾರೆ.

ದೆಹಲಿ ಪ್ರವಾಸದಿಂದ ಹಿಂತಿರುಗಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದರು. ಆಗಾಗ ನಡೆಯುವ ಚುನಾವಣೆಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿ ಆಗುವುದರಿಂದ ಭಾರತವು 'ಒಂದು ರಾಷ್ಟ್ರ ಒಂದು ಚುನಾವಣೆ'ಯನ್ನು ಬೆಂಬಲಿಸುವ ಅಗತ್ಯ ಇದೆ ಎಂದು ಹೇಳಿದರು.

ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತವು ವಿಶ್ವದ ಅತಿದೊಡ್ಡ ಆರ್ಥಿಕತೆ ರಾಷ್ಟ್ರವಾಗಲಿದೆ. ಗೌರವಾನ್ವಿತ ಪ್ರಧಾನಿ ಅವರ ಈ ಅಸಾಮಾನ್ಯ ಕೆಲಸಕ್ಕಾಗಿ ನಾನು ಮನಃಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ಹೇಳಿದರು.

ಇನ್ನು ಇತ್ತೀಚೆಗಷ್ಟೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜಾರ್ಖಂಡ್‌ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಹಾಗಾದರೆ ಸಂಪೂರ್ಣ ಮಾಹಿತಿ ಇಲ್ಲಿದೆ ತಿಳಿಯಿರಿ.

ವಿಧಾನಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಇತ್ತೀಚೆಗಷ್ಟೇ ಜಾರ್ಖಂಡ್‌ನಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಮಾಡಿದ್ದರು. ಇದೀಗ ಜಾರ್ಖಂಡ್‌ನಲ್ಲಿ 83,700 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್‌ 02ರಂದು ಚಾಲನೆ ನೀಡಿದರು. ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ 78,150 ಕೋಟಿ ರೂಪಾಯಿ ವೆಚ್ಚದಲ್ಲಿ ಧರ್ತಿ ಆಬಾ ಜನಜಾತಿಯ ಗ್ರಾಮ ಉತ್ಕರ್ಷ್‌ ಅಭಿಯಾನಕ್ಕೆ ಪ್ರಧಾನಿ ಚಾಲನೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+