Assembly Election 2024: "ಜಾರ್ಖಂಡ್, ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಗೆಲುವು ಪಕ್ಕಾ"
Assembly Election 2024: ಈಗಾಗಲೇ ಜಾರ್ಖಂಡ್ ಹಾಗೂ ಮಹಾರಾಷ್ಟ್ರ ವಿಧಾನಸಭೆ ಚುನಾಚಣೆ ನಿನ್ನೆ (ನವೆಂಬರ್ 20) ಮುಕ್ತಯಾಗಿದೆ. ಅಲ್ಲದೆ, ಚುನಾವಣೋತ್ತರ ಸಮೀಕ್ಷೆಗಳು ಕೂಡ ಹೊರಬಿದ್ದಿವೆ. ಇದೀಗ ಇಂದು (ನವೆಂಬರ್ 21) ಈ ಸಮೀಕ್ಷೆಗಳ ಬಗ್ಗೆ ಬಿಜೆಪಿ ನಾಯಕ ಆರ್‌ಪಿ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ಹಾಗಾದರೆ ಅವರು ಏನು ಹೇಳಿದ್ದಾರೆ ಎಂದು ಇಲ್ಲಿ ತಿಳಿಯಿರಿ.
ಮಹಾರಾಷ್ಟ್ರ ಮತ್ತು ಜಾರ್ಖಂಡ್ ಎರಡು ರಾಜ್ಯಗಳಲ್ಲಿ ಕೂಡ ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ಸಾಧಿಸಲಿವೆ ಎಂದು ಬಹುತೇಕ ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. ಇದರಂತೆಯೇ ಎರಡು ರಾಜ್ಯಗಳಲ್ಲಿ ಜನರು ಬಯಸಿದಂತೆ ಪಕ್ಷ ಅಧಿಕಾರಕ್ಕೆ ಬಂದರೆ ಜನರಿಗೆ ಅನುಕೂಲ ಆಗಲಿದೆ. ಅಲ್ಲದೆ, ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ಕೆಲಸ ಮಾಡಲು ಸಾಧ್ಯವಾಗಲಿದೆ ಎಂದು ಆರ್‌ಪಿ ಸಿಂಗ್ ಅವರು ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಬರಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳೇ ಹೇಳಿವೆ. ಇದರಿಂದಲೇ ಗೊತ್ತಾಗುತ್ತದೆ ಜನರು ನಮಗೇ ಆಶೀರ್ವಾದ ನೀಡಿದ್ದಾರೆ ಅಂತಾ. ನಾವು ಜಾರ್ಖಂಡ್‌ನಲ್ಲಿ 40ಕ್ಕೂ ಹೆಚ್ಚು ಸ್ಥಾನ ಮತ್ತು ಮಹಾರಾಷ್ಟ್ರದಲ್ಲಿ 160ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುತ್ತೇವೆ. ಅದರಲ್ಲೂ ಮಹಾರಾಷ್ಟ್ರದ ಜನರು ಡಬಲ್ ಇಂಜಿನ್ ಸರ್ಕಾರವನ್ನು ಬಯಸುತ್ತಾರೆ. ಇದರಿಂದ ಕೇಂದ್ರ ಮತ್ತು ರಾಜ್ಯ ಒಟ್ಟಾಗಿ ಕೆಲಸ ಮಾಡಲು ಸಾಧ್ಯವಾಗಲಿದ್ದು, ಜನರಿಗೆ ತುಂಬಾ ಪ್ರಯೋಜನ ಆಗಲಿದ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಮಹಾಯುತಿಯು ಅಧಿಕಾರವನ್ನು ಉಳಿಸಿಕೊಳ್ಳಲು ಸಜ್ಜಾಗಿದೆ ಮತ್ತು ಜಾರ್ಖಂಡ್‌ನಲ್ಲಿ ಎನ್‌ಡಿಎ ಕೂಡ ಸರ್ಕಾರ ರಚಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಬಹುತೇಕ ಸಂಸ್ಥೆಗಳನ್ನು ನಡೆಸಿರುವ ಚುನಾವಣೋತ್ತರ ಸಮೀಕ್ಷೆ ಪ್ರಕಾರ ಜಾರ್ಖಂಡ್‌ನಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ಒಂದು ವೇಳೆ ಈ ಪ್ರಕಾರ ಆದರೆ, ಸತತ ಗೆಲುವಿನ ನಿರೀಕ್ಷೆಯಲ್ಲಿದ್ದ ಜೆಎಂಎಂಗೆ ಶಾಕ್ ಕೊಟ್ಟಂತಾಗಲಿದೆ. ಆದರೆ ಒಂದು ಸಮೀಕ್ಷೆ ಮಾತ್ರ ಆಡಳಿತಾರೂಢ ಜೆಎಂಎಂ ನೇತೃತ್ವದ ಮೈತ್ರಿಕೂಟಕ್ಕೆ ಬಹುಮತ ಬರಲಿದೆ ಎಂದು ತಿಳಿಸಿದೆ.
ಜಾರ್ಖಂಡ್‌ನಲ್ಲಿ ಒಟ್ಟು 81 ವಿಧಾನಸಭಾ ಸ್ಥಾನಗಳಿಗೆ ವಿಧಾನಸಭೆ ನಡೆದಿದೆ. ನವೆಂಬರ್ 13ರಂದು 43 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ನವೆಂಬರ್ 20ರಂದು 38 ಸ್ಥಾನಗಳಿಗೆ ಮತದಾನ ನಡೆದಿದೆ. ಇನ್ನು ಮಹಾರಾಷ್ಟ್ರದ 288 ವಿಧಾನಸಭೆ ಸ್ಥಾನಗಳಿಗೆ ಒಂದೇ ಹಂತದಲ್ಲಿ ನವೆಂಬರ್ 20ರಂದು ಮತದಾನ ನಡೆದಿದೆ. ಇನ್ನೂ ಈ ಎರಡು ರಾಜ್ಯಗಳ ಫಲಿತಾಂಶ ನವೆಂಬರ್ 23ಕ್ಕೆ ಹೊರಬೀಳಲಿದೆ.












Click it and Unblock the Notifications