Jharkhand Assembly Election 2024: ಜಾರ್ಖಂಡ್‌ನಲ್ಲಿ ಗೆಲ್ಲುವ ಪಕ್ಷ ಹೆಸರಿಸಿದ ಜೆ.ಪಿ.ನಡ್ಡಾ
Jharkhand Assembly Election 2024: ಈಗಾಗಲೇ ಜಾರ್ಖಂಡ್‌ನಲ್ಲಿ 43 ವಿಧಾನಸಭೆ ಸ್ಥಾನಗಳಿಗೆ ಮೊದಲ ಹಂತದ ಮತದಾನ ನಡೆದಿದೆ. ಇನ್ನು ಎರಡನೇ ಹಂತದ ಮತದಾನ ನವೆಂಬರ್ 20ರಂದ ನಡೆಯಲಿದೆ. ಈ ಹಿನ್ನೆಲೆ ಗೆಲುವು ಸಾಧಿಸಲು ಎಲ್ಲಾ ಪಕ್ಷಗಳ ರಾಜಕೀಯ ನಾಯಕರು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.
ಇದೀಗ ರಾಜ್ಯದಲ್ಲಿ ಎರಡನೇ ಹಂತದ ಮತದಾನ ಬಾಕಿಯಿದ್ದು, ಮತದಾರರನ್ನು ಸೆಳೆಯುವ ಕೆಲಸದಲ್ಲಿ ರಾಜಕೀಯ ನಾಯಕರು ನಿರತರಾಗಿದ್ದಾರೆ. ಒಬ್ಬರ ಮೇಲೊಬ್ಬರು ಆರೋಪ ಪ್ರತ್ಯಾರೋಪಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಹಾಗೆಯೇ ಇದೀಗ ಜಾರ್ಖಂಡ್ ಸರ್ಕಾರದ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಆಕ್ರೋಶ ಹೊರಹಾಕಿದ್ದಾರೆ.

ಮುಖ್ಯಮಂತ್ರಿ ಹೇಮಂತ್ ಸೊರೇನ್ ನೇತೃತ್ವದ ಜೆಎಂಎಂ ಪಕ್ಷವು ತನ್ನ 5 ವರ್ಷಗಳ ಅಧಿಕಾರದಲ್ಲಿ ಬುಡಕಟ್ಟು ರಾಜ್ಯ ಜಾರ್ಖಂಡ್ ಅನ್ನು ವಂಚನೆ, ಶೋಷಣೆ ಮತ್ತು ಲೂಟಿ ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆರೋಪ ಮಾಡಿದ್ದಾರೆ.
ಬೊಕಾರೊದ ಗೋಮಿಯಾದಲ್ಲಿ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಹೇಮಂತ್ ಸೊರೇನ್ ಸರ್ಕಾರವು ನಿಮ್ಮೊಂದಿಗೆ ದೊಡ್ಡ ಮೋಸವನ್ನು ಮಾಡಿದೆ. ಅವರ 5 ವರ್ಷಗಳ ಸರ್ಕಾರವು ಜಾರ್ಖಂಡ್ ಅನ್ನು ಬಡವಾಗುವಂತೆ ಮಾಡಿದೆ ಎಂದು ಆರೋಪ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ನವೆಂಬರ್ 20ರಂದು ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಸರ್ಕಾರವನ್ನು ಬೇರುಸಹಿತ ಕಿತ್ತೆಸೆಯಲು ಜಾರ್ಖಂಡ್‌ನ ಜನರು ಬಯಸಿದ್ದಾರೆ ಎಂಬ ಸಂಕೇತಗಳಿಗೆ ಜನ್ ಸೈಲಾಬ್ ಸಾಕ್ಷಿಯಾಗಿದೆ ಎಂದು ಹೇಳಿದರು. ನವೆಂಬರ್ 13ರಂದು ನಡೆದ ಮೊದಲ ಹಂತದ ಮತದಾನವು ಬಿಜೆಪಿ, ಎಜೆಎಸ್‌ಯು ಮತ್ತು ಎನ್‌ಡಿಎ ನೇತೃತ್ವದ ಸರ್ಕಾರವನ್ನು ಜನರು ಆಯ್ಕೆ ಮಾಡಲು ಸಿದ್ಧರಾಗಿದ್ದಾರೆ ಎಂಬ ಸ್ಪಷ್ಟ ಸಂದೇಶವನ್ನು ಈಗಾಗಲೇ ರವಾನಿಸಿದೆ ಎಂದು ಹೇಳಿದರು.
ಈಗಾಗಲೇ ಜಾರ್ಖಂಡ್‌ನ 43 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 13ರಂದು ಮೊದಲ ಹಂತದಲ್ಲಿ ಮತದಾನ ನಡೆದಿದ್ದು, ನವೆಂಬರ್ 20ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ. ಇನ್ನು ನವೆಂಬರ್ 23ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಬಿಜೆಪಿ ವಿರುದ್ಧ ಆರೋಪ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಉತ್ತರ ಪ್ರದೇಶದಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಗೆಯೇ ತಾನು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮೂಲಕ ಗಳಿಸಿದ ಹಣವನ್ನು ಬಿಜೆಪಿಯು ಇತರ ರಾಜ್ಯಗಳಲ್ಲಿನ ಚುನಾವಣಾ ಪ್ರಚಾರಗಳಿಗೆ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
"ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಗಳಿಸಿದ ಹಣದಿಂದ ಜಾರ್ಖಂಡ್ ಚುನಾವಣೆ ವೇಳೆ ಬಿಜೆಪಿ ಆಡಂಬರ ಮುಂದುವರೆಸಿದೆ. ಇತ್ತೀಚಿನ ದಿನಗಳಲ್ಲಿ ಕೋಳಿ ಕಳ್ಳತನ ಪ್ರಕರಣಗಳನ್ನೂ ತನಿಖೆ ನಡೆಸುತ್ತಿರುವ ಇ.ಡಿ, ಸಿಬಿಐ, ಎನ್‌ಐಎ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ತನಿಖೆ ಆರಂಭಿಸಿಲ್ಲ. ಯಾಕೆಂದರೆ, ಅದರ ಹಿಂದೆ ಇರುವುದೇ ಬಿಜೆಪಿ. ಚುನಾವಣೆ ಮುಗಿದ ಬಳಿಕ ಆ ಹಣದಿಂದಲೇ ಶಾಸಕರು, ಸಂಸದರನ್ನು ಖರೀದಿ ಮಾಡುತ್ತಿದೆ," ಎಂದು ಟ್ವೀಟ್ ಮೂಲಕ ಆರೋಪ ಮಾಡಿದ್ದಾರೆ.
-
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications