Jharkhand Assembly Election 2024: ಜಾರ್ಖಂಡ್ ಸಿಎಂ ವಿರುದ್ಧ ಪ್ರಧಾನಿ ಮೋದಿ ಹಿಗ್ಗಾಮುಗ್ಗಾ ವಾಗ್ದಾಳಿ
Jharkhand Assembly Election 2024: ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಇನ್ನೂ ಕೆಲವೇ ದಿನಗಳು ಮಾತ್ರ ಬಾಕಿಯಿವೆ. ಈ ಹಿನ್ನೆಲೆ ರಾಜ್ಯದಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಅಬ್ಬರದ ಪ್ರಚಾರ, ರ‍್ಯಾಲಿ ಗಳನ್ನು ಮಾಡುತ್ತಿದ್ದಾರೆ. ಅಲ್ಲದೆ, ಒಬ್ಬರ ಮೇಲೊಬ್ಬರು ಗೂಬೆ ಕೂರಿಸುವ ಮೂಲಕ ಮತದಾರರನ್ನು ಸೆಳೆಯುವ ಕೆಲಸವನ್ನು ಮಾಡುತ್ತಿದ್ದಾರೆ.
ಇನ್ನು ಇಂದು (ನವೆಂಬರ್ 10) ಜಾರ್ಖಂಡ್‌ನಲ್ಲಿ ರ‍್ಯಾಲಿ ಹಮ್ಮಿಕೊಂಡಿರುವ ಪ್ರಧಾನಿ ಮೋದಿ ಅವರು, ಹೇಮಂತ್ ಸೊರೇನ್ ನೇತೃತ್ವದ ಜಾರ್ಖಂಡ್ ಸರ್ಕಾರದ ವಿರುದ್ಧ ಕೆಂಡಕಾರಿದ್ದಾರೆ. ಹಾಗಾದರೆ ಯಾವ್ಯಾವ ವಿಚಾರಗಳಿಗೆ ಆಕ್ರೋಶ ಹೊರಹಾಕಿದ್ದಾರೆ ಎಂದು ಇಲ್ಲಿ ತಿಳಿಯಿರಿ.

ಜಾರ್ಖಂಡ್‌ನಲ್ಲಿ ದೊಡ್ಡ ಪ್ರಮಾಣದ ನಡೆಯುತ್ತಿದೆ ಎಂದು ಪ್ರಧಾನಿ ಮೋದಿ ಅವರು ಹೇಳಿದರು. ಅಕ್ರಮ ಮರಳುಗಾರಿಕೆ ಬಗ್ಗೆ ಮಾತನಾಡಿದ ಅವರು, ದೊಡ್ಡ ಪ್ರಮಾಣದಲ್ಲಿ ಹಣವನ್ನು ವಶಪಡಿಸಿಕೊಂಡ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಜೆಎಂಎಂ ಮತ್ತು ಕಾಂಗ್ರೆಸ್ ಮೈತ್ರಿಕೂಟ ಜನರನ್ನು ಲೂಟಿ ಮಾಡುತ್ತಿದೆ ಎಂದು ಆರೋಪ ಮಾಡುವ ಮೂಲಕ ವಾಗ್ದಾಳಿ ನಡೆಸಿದರು.
ಸೊರೇನ್ ಸರ್ಕಾರ ಜಾರ್ಖಂಡ್ ಅನ್ನು ಲೂಟಿ ಮಾಡುತ್ತಿದೆ. ಇಲ್ಲಿ ನಾವು ಸರ್ಕಾರ ರಚಿಸಿದ ನಂತರ ಈ ಭ್ರಷ್ಟರಿಗೆ ಕಠಿಣ ಶಿಕ್ಷೆ ಆಗುವಂತೆ ನ್ಯಾಯಾಲಯದಲ್ಲಿ ಹೋರಾಡುತ್ತೇವೆ ಎಂದು ಭರವಸೆ ನೀಡುತ್ತೇನೆ. ನಿಮ್ಮಿಂದ ಬಂದಿರುವ ಹಣವನ್ನು ನಿಮಗಾಗಿ ಮತ್ತು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಖರ್ಚು ಮಾಡುತ್ತೇವೆ ಎಂದು ಹೇಳಿದರು.
ಜೆಎಂಎಂ ನಾಯಕರು ಅಕ್ರಮ ಮರಳುಗಾರಿಕೆಯಿಂದ ಕೋಟಿಗಟ್ಟಲೇ ಹಣ ಕಬಳಿಸಿದ್ದಾರೆ. ಈ ಹಣ ಇದು ನಿಮ್ಮಿಂದ ಲೂಟಿ ಮಾಡಿದ ಹಣವಲ್ಲವೇ ಎಂದು ಪ್ರಶ್ನೆ ಮಾಡಿದರು. ಇನ್ನು ಕೇಂದ್ರದಲ್ಲಿ ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರದ ಬಗ್ಗೆಯೂ ಅವರು ಮಾತನಾಡಿದರು.
2004ರಿಂದ 2014ರ ವರೆಗೆ ಅಧಿಕಾರದಲ್ಲಿದ್ದ ಸೋನಿಯಾ ಗಾಂಧಿ ಮತ್ತು ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರ, 10 ವರ್ಷಗಳಲ್ಲಿ ಕೇವಲ 80,000 ಹಣವನ್ನು ಜಾರ್ಖಂಡ್‌ಗೆ ನೀಡಿತ್ತು. ಆದರೆ, ನಮ್ಮ ಸರ್ಕಾರ 10 ವರ್ಷಗಳಲ್ಲಿ 3 ಲಕ್ಷ ಕೋಟಿಗೂ ಅಧಿಕ ಅನುದಾನ ನೀಡಿದೆ ಎಂದು ಹೇಳಿದರು.
ಜಾರ್ಖಂಡ್‌ನ 81 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 13 ಮತ್ತು 20ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ












Click it and Unblock the Notifications