Jharkhand Election: ಮತ್ತೊಮ್ಮೆ ಜಾರ್ಖಂಡ್‌ಗೆ ಭೇಟಿ ನೀಡುತ್ತೇನೆ; ಪ್ರಧಾನಿ ಮೋದಿ ಹೀಗೆ ಹೇಳಿದ್ಯಾಕೆ?
Jharkhand Assembly Election 2024: ಜಾರ್ಖಂಡ್‌ನಲ್ಲಿ 81ರಲ್ಲಿ 43 ವಿಧಾನಸಭೆ ಸ್ಥಾನಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದೆ. ಇಲ್ಲಿ ಮತ್ತೆ ಗೆಲುವು ಸಾಧಿಸಲು ಕಾಂಗ್ರೆಸ್ ಮೈತ್ರಿ ಪಕ್ಷ ಜೆಎಂಎಂ ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದೆ. ಮತ್ತೊಂದೆಡೆ ಬಿಜೆಪಿ ಕೂಡ 2019ರ ಸೇಡು ತೀರಿಸಿಕೊಳ್ಳಲು ಮುಂದಾಗಿದೆ. ಈ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ ಏನು ಹೇಳಿದ್ದಾರೆಂದು ಇಲ್ಲಿ ತಿಳಿಯಿರಿ.
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಚುನಾವಣೆ ಫಲಿತಾಂಶದ ನಂತರ ನಾನು ಮತ್ತೊಮ್ಮೆ ಜಾರ್ಖಂಡ್‌ಗೆ ಭೇಟಿ ನೀಡುತ್ತೇನೆ. ಎನ್‌ಡಿಎ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುತ್ತೇನೆಂದು ಭರವಸೆ ನೀಡುತ್ತೇನೆ ಅಂತಲೂ ಹೇಳುವ ಮೂಲಕ ಗಮನ ಸೆಳೆದಿದ್ದಾರೆ.

ಬಿಜೆಪಿ-ಎನ್‌ಡಿಎ ಪರವಾಗಿ ಪ್ರತಿ ಮತವೂ ಜಾರ್ಖಂಡ್‌ನ ಅಭಿವೃದ್ಧಿಗೆ ಹೊಸ ಚೈತನ್ಯವನ್ನು ನೀಡುತ್ತದೆ ಎಂದರು. ಇದೇ ವೇಳೆ ಮಾತು ಮುಂದುವರೆಸಿದ ಅವರು, ಜೆಎಂಎಂ ನೇತೃತ್ವದ ಸರ್ಕಾರವು ಜಾರ್ಖಂಡ್‌ನಲ್ಲಿ ನುಸುಳುಕೋರರಿಗೆ ಶಾಶ್ವತ ನಾಗರಿಕರಾಗಲು ಅವಕಾಶ ಮಾಡಿಕೊಟ್ಟಿದೆ.
ಕಾಂಗ್ರೆಸ್ ಮೈತ್ರಿ ಪಕ್ಷ ಜೆಎಂಎಂ ಸರ್ಕಾರದ ಅವಧಿಯಲ್ಲಿ, ನುಸುಳುಕೋರರು ಹೊರಗಿನಿಂದ ಖಾಯಂ ನಿವಾಸಿಗಳಾಗಿ ಬರುವಂತೆ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ. ಈ ಮೂಲಕ ಜಾರ್ಖಂಡ್‌ನಲ್ಲಿ ದೊಡ್ಡ ಪಿತೂರಿ ನಡೆಯುತ್ತಿದೆ. ಇದನ್ನೆಲ್ಲ ಮಟ್ಟ ಹಾಕಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಹೇಳಿದರು.
ಬೇರೆಡೆಯಿಂದ ಬಂದಂತಹ ನುಸುಳುಕೋರರಿಗೆ ರಾತ್ರೋರಾತ್ರಿ ಖಾಯಂ ನಿವಾಸಿ ಎಂಬ ದಾಖಲೆಗಳನ್ನು ಸೃಷ್ಟಿಸಲಾಗಿದೆ. ಅಲ್ಲದೆ, ಬುಡಕಟ್ಟು ಹೆಣ್ಣುಮಕ್ಕಳನ್ನು ಮದುವೆಯ ಹೆಸರಿನಲ್ಲಿ ವಂಚಿಸಲಾಗಿದ್ದು, ಅವರ ಭೂಮಿಯನ್ನು ಕಿತ್ತುಕೊಳ್ಳಲಾಯಿತು. ಈ ಅತಿಕ್ರಮಣಕಾರರು ನಿಮ್ಮ ಉದ್ಯೋಗ, ಅನ್ನವನ್ನು ಕಸಿದುಕೊಂಡರು. ಆದರೂ, ಜಾರ್ಖಂಡ್‌ನಲ್ಲಿ ಯಾವುದೇ ಒಳನುಸುಳುವಿಕೆ ನಡೆದಿಲ್ಲ ಎಂದು ಜೆಎಂಎಂ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ, ಅಂತಾ ಮೋದಿ ಹೇಳಿದರು.
ಎಸಿ ರೂಂನಲ್ಲಿ ಕುಳಿತುಕೊಂಡು ರಾಜಕೀಯ ಲೆಕ್ಕಾಚಾರ ಹಾಕುವವರಿಗೆ ಈ ಚುನಾವಣೆಯ ಫಲಿತಾಂಶ ತಕ್ಕ ಉತ್ತರ ಕೊಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಈಗಾಗಲೇ ನಿನ್ನೆಯೂ ಕೂಡ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆದಿಸಿದ್ದಾರೆ.
ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ: ಕಾಂಗ್ರೆಸ್ ಕರ್ನಾಟಕದ ಜನರನ್ನು ಲೂಟಿ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ನವೆಂಬರ್ 12) ವಾಗ್ದಾಳಿ ನಡೆಸಿದ್ದರು. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್ ಹಣ ಬಳಕೆ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಗಂಭೀರ ಆರೋಪ ಮಾಡಿದ್ದರು.
ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಮಾತ್ರ ಅಭಿವೃದ್ಧಿ ಸಾಧ್ಯ ಎಂದರು. ಇನ್ನು ಪುಣೆ ಕುರಿತು ಮಾತನಾಡಿದ ಅವರು, ಮುಂದಿನ 5 ವರ್ಷಗಳಲ್ಲಿ ನಗರವು ಪ್ರಗತಿಯತ್ತ ಸಾಗಲಿದೆ. ಪುಣೆಯ ಅಭಿವೃದ್ಧಿ ಕಾಣಲು ಹೂಡಿಕೆ, ಮೂಲಸೌಕರ್ಯ ಮತ್ತು ಉದ್ಯಮದ ಅಗತ್ಯವಿದೆ ಎಂದು ಹೇಳಿದರು.












Click it and Unblock the Notifications