Jharkhand Assembly Election: ಜಾರ್ಖಂಡ್‌ನಲ್ಲಿ ಮತದಾನ ಸಮಯದ ಬಗ್ಗೆ ಪೊಲೀಸರು ತೆಗೆದುಕೊಂಡ ಪ್ರಮುಖ ನಿರ್ಧಾರಗಳಿವು
Jharkhand Assembly Election 2024: ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಇಲ್ಲಿನ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಆಯೋಜನೆ ಮಾಡಲಾಗಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ.
ವಿಧಾಸಭೆ ಚುನಾವಣೆ ಹಿನ್ನೆಲೆ ಜಾರ್ಖಂಡ್‌ನಲ್ಲಿ ನಕ್ಸಲ್ ಪಿಡೀತ ಪ್ರದೇಶಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಳ್ಳಲು ಮುಂದಾಗಿದ್ದಾರೆ. ಅಲ್ಲದೆ, ನಕ್ಸಲ್ ಪ್ರದೇಶಗಳನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಮತದಾನದ ಸಮಯವನ್ನು ಬದಲಾಯಿಸಬಹುದಾಗಿದ್ದು, ಒಂದು ಗಂಟೆಗೂ ಮುಂಚಿತವಾಗಿ ಮತದಾನ ಮುಗಿಸುವ ಯೋಜನೆಯನ್ನು ಹಾಕಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಸಂಜೆ 5 ಗಂಟೆಯ ಬದಲು 4 ಗಂಟೆಯವರೆಗೆ ಮಾತ್ರ ಮತದಾನ ಮಾಡಲು ತೀರ್ಮಾನ ಮಾಡಲಾಗಿದೆ. ಇದಕ್ಕಾಗಿ ರಾಜ್ಯ ಪೊಲೀಸ್ ನೋಡಲ್ ಅಧಿಕಾರಿ ಎವಿ ಹೋಮ್ಕರ್ ಅವರು ರಾಂಚಿ, ಜಮ್ಶೆಡ್‌ಪುರ ಮತ್ತು ಧನ್‌ಬಾದ್ ಜಿಲ್ಲೆಗಳ ಎಸ್‌ಪಿಗಳಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಪೊಲೀಸ್ ಕೇಂದ್ರ ಕಚೇರಿಗೆ ವರದಿ ಕಳುಹಿಸುವಂತೆ ಸೂಚಿಸಲಾಗಿದೆ.
ಈ ವಿಚಾರವಾಗಿ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನಕ್ಸಲ್ ಪೀಡಿತ ಪ್ರದೇಶಗಳಲ್ಲಿರುವ ಮತಗಟ್ಟೆಗಳ ಪಟ್ಟಿಯನ್ನು ಸಿದ್ಧಪಡಿಸುವುದಾಗಿ ತಿಳಿಸಲಾಗಿದೆ. ಅಷ್ಟೇ ಅಲ್ಲದೆ, ಮತಗಟ್ಟೆಗಳ ಪಟ್ಟಿಯನ್ನು ಸಹ ನಾವು ಸಿದ್ಧಪಡಿಸುತ್ತೇವೆ. ಸಂಜೆ 5ರ ಬದಲಿಗೆ 4 ಗಂಟೆಯವರೆಗೆ ಮತದಾನ ಮಾಡುವುದು ಸೂಕ್ತ ಎಂದು ತಿಳಿಸಿದ್ದಾರೆ.
ಅಕ್ಟೋಬರ್ 2ರಂದು ಮೋದಿ ಭಾಷಣ: ಈಗಾಗಲೇ ಬಿಜೆಪಿಯ ಪರಿವರ್ತನಾ ಯಾತ್ರೆ ಆರಂಭವಾಗಿದೆ. ಇನ್ನು ಅಕ್ಟೋಬರ್ 2ರಂದು ಅಂದರೆ ಗಾಂಧಿಜಯಂತಿಯಂದು ಹಜಾರಿಬಾಗ್‌ನಲ್ಲಿ ನಡೆಯಲಿರುವ ಬಿಜೆಪಿಯ ಪರಿವರ್ತನ ಯಾತ್ರೆ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾರ್ವಜನಿಕರ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು. ಇನ್ನು ಅಕ್ಟೋಬರ್ 3ರಿಂದ ನಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದೇವೆ ಎಂದು ತಿಳಿಸಿದರು.
2019ರಲ್ಲಿ ನವೆಂಬರ್ 30 ಮತ್ತು ಡಿಸೆಂಬರ್ 20ರ ನಡುವೆ 5 ಹಂತಗಳಲ್ಲಿ 81 ವಿಧಾನಸಭಾ ಸ್ಥಾನಗಳಿಗೆ ಚುನಾವಣೆಗಳನ್ನು ನಡೆಸಲಾಗಿದ್ದು, ಡಿಸೆಂಬರ್ 23ರಂದು ಫಲಿತಾಂಶಗಳನ್ನು ಘೋಷಣೆ ಮಾಡಲಾಯಿತು. ಇನ್ನು ಈ ಬಾರಿ ವರ್ಷದ ಕೊನೆಯಲ್ಲಿ ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 2-3 ಹಂತಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಮತದಾರರ ವಿವರ: ಜಾರ್ಖಂಡ್ ವಿಧಾನಸಭೆಯ ಚುನಾವಣೆಯು ಜನವರಿ 5, 2025ರಂದು ಕೊನೆಗೊಳ್ಳಲಿದೆ ಎಂದು ಹೇಳಾಲಾಗುತ್ತಿದೆ. ರಾಜ್ಯದಲ್ಲಿ ಒಟ್ಟು 2.59 ಕೋಟಿ ಮತದಾರರಿದ್ದಾರೆ. ಇವರಲ್ಲಿ 1.31 ಕೋಟಿ ಪುರುಷರು ಮತ್ತು 1.28 ಕೋಟಿ ಮಹಿಳೆಯರಿದ್ದಾರೆ. ರಾಜ್ಯದಲ್ಲಿ ಪ್ರಥಮ ಬಾರಿಗೆ 11.5 ಲಕ್ಷಕ್ಕೂ ಹೆಚ್ಚು ಮಂದಿ ಮತದಾನ ಮಾಡಲಿದ್ದಾರೆ. 1.5 ಲಕ್ಷ ಮತದಾರರು 85 ವರ್ಷ ಮೇಲ್ಪಟ್ಟವರಾಗಿದ್ದು, 3.64 ಲಕ್ಷ ಅಂಗವಿಕಲ ಮತದಾರರಿದ್ದಾರೆ ಎಂದು ತಿಳಿದುಬಂದಿದೆ.












Click it and Unblock the Notifications