Assembly Election: ಈ ಐದು ರಾಜ್ಯಗಳ ಚುನಾವಣೆಗೆ ಇಂದು ದಿನಾಂಕ ಘೋಷಣೆ
ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಸೋಮವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಿದೆ. ಚುನಾವಣಾ ಆಯೋಗವು ಸೋಮವಾರ ಮಧ್ಯಾಹ್ನ ಪತ್ರಿಕಾಗೋಷ್ಠಿಯನ್ನು ಕರೆದಿದ್ದು, ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಯಾವಾಗ ಚುನಾವಣೆ ನಡೆಯಲಿದೆ ಎಂದು ಮಾಹಿತಿ ನೀಡಲಿದೆ.
ಛತ್ತೀಸ್‌ಗಢ, ಮಧ್ಯಪ್ರದೇಶ, ತೆಲಂಗಾಣ, ಮಿಜೋರಾಂ ಮತ್ತು ರಾಜಸ್ಥಾನ ವಿಧಾನಸಭಾ ಚುನಾವಣೆಗಳು ನವೆಂಬರ್-ಡಿಸೆಂಬರ್ ತಿಂಗಳಲ್ಲಿ ನಡೆಯಲಿವೆ. ಈಗಾಗಲೆ ಐದೂ ರಾಜ್ಯಗಳಲ್ಲಿ ಎಲ್ಲಾ ಪಕ್ಷಗಳು ಚುನಾವಣೆಗೆ ತಯಾರಿ ಆರಂಭಿಸಿವೆ.

ಮಿಜೋರಾಂನ ಶಾಸಕಾಂಗ ಸಭೆಯ ಅವಧಿಯು ಈ ವರ್ಷ ಡಿಸೆಂಬರ್ 17 ರಂದು ಕೊನೆಗೊಳ್ಳುತ್ತದೆ. ಇಲ್ಲಿ ಪ್ರಸ್ತುತ ಮಿಜೋ ನ್ಯಾಷನಲ್ ಫ್ರಂಟ್ ಅಧಿಕಾರದಲ್ಲಿದೆ. ತೆಲಂಗಾಣ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ರಾಜಸ್ಥಾನದ ಶಾಸಕಾಂಗ ಸಭೆಗಳ ಅವಧಿಯು ಮುಂದಿನ ವರ್ಷದ ಜನವರಿಯಲ್ಲಿ ಹಲವು ದಿನಾಂಕಗಳಲ್ಲಿ ಕೊನೆಯಾಗಲಿದೆ.
ತೆಲಂಗಾಣದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಆಡಳಿತ ನಡೆಸುತ್ತಿದ್ದರೆ, ಮಧ್ಯಪ್ರದೇಶದಲ್ಲಿ ಬಿಜೆಪಿ ಆಡಳಿತದಲ್ಲಿದೆ. ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವಿದೆ.












Click it and Unblock the Notifications