Jharkhand Election Results 2024: ಜಾರ್ಖಂಡ್‌ನಲ್ಲಿ ಈ ಪಕ್ಷಕ್ಕೆ ಭರ್ಜರಿ ಗೆಲುವು
Jharkhand Assembly Election Results 2024: ಜಾರ್ಖಂಡ್‌ನಲ್ಲಿ 81 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆದಿದ್ದು, ಇಂದು (ನವೆಂಬರ್ 23) ಫಲಿತಾಂಶ ಹೊರಬಿದ್ದಿದೆ. ಇಲ್ಲಿನ ಆಡಳಿತರೂಡ ಜೆಎಂಎಂ ಮೈತ್ರಿಕೂಟದ ಇಂಡಿಯಾ ಮತ್ತೆ ಬಹುತಮತಗಳನ್ನು ಪಡೆಯುವ ಮೂಲಕ ಗೆಲ್ಲುವ ಅಧಿಕಾರ ಗದ್ದುಗೆ ಹಿಡಿದಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಪಕ್ಷ 288 ಸ್ಥಾನಗಳ ಪೈಕಿ 234 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಬಹುಮತ ಪಡೆದಿದ್ದರೆ, ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ 50 ಸ್ಥಾನಗಳನ್ನಷ್ಟೇ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಜಾರ್ಖಂಡ್‌ನಲ್ಲಿ 81 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಎಂಎಂ ನೇತೃತ್ವದ ಇಂಡಿಯಾ ಮೈತ್ರಿಕೂಟ 56 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರ ಹಿಡಿದಿದೆ. ಬಿಜೆಪಿ ನೇತೃತ್ವದ ಮೈತ್ರಿಕೂಟ 24 ಸ್ಥಾನಗಳನ್ನು ಗೆದ್ದಿದೆ.

ಜಾರ್ಖಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟ ಆಗಿದ್ದು, ಇಂಡಿಯಾ ಬ್ಲಾಕ್ 30 ಸ್ಥಾನಗಳನ್ನು ಗೆದ್ದಿದೆ. ಎನ್‌ಡಿಎ 9 ಸ್ಥಾನಗಳನ್ನು ಪಡೆದುಕೊಂಡಿದೆ. ಆರಂಭಿಕ ಸುತ್ತಿನಲ್ಲಿ ಹಿಂದುಳಿದಿದ್ದ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರ ಜೆಎಂಎಂ ನೇತೃತ್ವದ ಇಂಡಿಯಾ ಬ್ಲಾಕ್ ಇದೀಗ ಭಾರೀ ಗೆಲುವು ಸಾಧಿಸಿದೆ.
ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಜೆಎಂಎಂ ಮೈತ್ರಿಕೂಟದ ಇಂಡಿಯಾ ಗೆಲುವು ಬಹುತೇಕ ಖಚಿತವಾಗಿದೆ. ಹೇಮಂತ್ ಸೊರೆನ್ ಅವರ ಜೆಎಂಎಂ 41 ವಿಧಾನಸಭೆ ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಉಳಿದವುಗಳನ್ನು ತನ್ನ ಮಿತ್ರಪಕ್ಷಗಳಾದ ಕಾಂಗ್ರೆಸ್ 30, ಆರ್ಜೆಡಿ 6, ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾಗೆ 4 ಸ್ಥಾನ ನೀಡಿತ್ತು.
ಬಿಜೆಪಿ 68 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಅದರ ಮಿತ್ರಪಕ್ಷಗಳಾದ ಆಲ್ ಜಾರ್ಖಂಡ್ ವಿದ್ಯಾರ್ಥಿ ಸಂಘ 10, ಜನತಾ ದಳ ಎರಡರಲ್ಲಿ ಮತ್ತು ಲೋಕ ಜನಶಕ್ತಿ ಪಕ್ಷ ಒಂದರಲ್ಲಿ ಸ್ಪರ್ಧಿಸಿತ್ತು. ಜಾರ್ಖಂಡ್ ಚುನಾವಣೆಯಲ್ಲಿ ಭಾರೀ ಗೆಲುವಿಗಾಗಿ ಬಿಜೆಪಿ ನಾಯಕ ಹಿಮಂತ ಬಿಸ್ವಾ ಶರ್ಮಾ ಹೇಮಂತ್ ಸೊರೆನ್ ಅವರನ್ನು ಅಭಿನಂದಿಸಿದ್ದಾರೆ.
ಜೆಎಂಎಂ ಮತ್ತು ಅದರ ಮಿತ್ರಪಕ್ಷಗಳು ಜಾರ್ಖಂಡ್‌ನಲ್ಲಿ ಭರ್ಜರಿ ಜಯ ಗಳಿಸಿವೆ. ಈ ಸಾಧನೆಗಾಗಿ ಹೇಮಂತ್ ಸೊರೇನ್ ಮತ್ತು ಅವರ ಇಡೀ ತಂಡಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಅವರ ನಾಯಕತ್ವದಲ್ಲಿ ಜಾರ್ಖಂಡ್ ಪ್ರಗತಿಯ ಹಾದಿಯಲ್ಲಿ ನಡೆಯಲಿದೆ ಎಂದು ನನಗೆ ವಿಶ್ವಾಸವಿದೆ ಎಂದು ಹೇಳಿದರು.
ಭಾರತೀಯ ಚುನಾವಣಾ ಆಯೋಗದ ಪ್ರಕಾರ, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ 39,791 ಮತಗಳ ಅಂತರದಿಂದ ಗೆದ್ದಿದ್ದಾರೆ. ಹೇಮಂತ್ ಸೊರೆನ್ ಅವರು ಬಿಜೆಪಿ ಅಭ್ಯರ್ಥಿ ಗಮ್ಲಿಯೆಲ್ ಹೆಂಬ್ರೋಮ್ ವಿರುದ್ಧ ಸತತ ಮೂರನೇ ಗೆಲುವು ಸಾಧಿಸಿದ್ದಾರೆ. ಸೋರೆನ್ 95,612 ಮತಗಳನ್ನು ಪಡೆದರೆ, ಹೆಂಬ್ರೋಮ್ 55,821 ಮತಗಳನ್ನು ಪಡೆದಿದ್ದಾರೆ.
ಜಾರ್ಖಂಡ್ ರಾಜ್ಯದ ಎಲ್ಲಾ 81 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 13 ಮತ್ತು 20ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಇಂದು (ನವೆಂಬರ್ 23) ಫಲಿತಾಂಶ ಹೊರಬಿದ್ದಿದೆ. ಮೊದಲ ಹಂತದಲ್ಲು ಶೇಕಡ 67.74, ಎರಡನೇ ಹಂತದಲ್ಲಿ ಶೇಕಡ 68.95ರಷ್ಟು ಮತದಾನ ಆಗಿದೆ.












Click it and Unblock the Notifications