• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ವಿಧಾನಸಭೆ ಚುನಾವಣೆ: 3 ರಾಜ್ಯಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

|

ರಾಯ್ಪುರ, ಅಕ್ಟೋಬರ್ 23: ನವೆಂಬರ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿರುವ ಐದು ರಾಜ್ಯಗಳ ಚುನಾವಣೆಗಳ ಅಭ್ಯರ್ಥಿಗಳ ಪಟ್ಟಿಯನ್ನು ಬೇರೆ ಬೇರೆ ಪಕ್ಷಗಳು ಈಗಾಗಲೇ ಬಿಡುಗಡೆ ಮಾಡುತ್ತಿವೆ.

ಅದರದೇ ಒಂದು ಭಾಗವಾಗಿ ಬಿಜೆಪಿಯು ಛತ್ತೀಸ್ ಗಢ, ತೆಲಂಗಾಣ ಮತ್ತು ಮಿಜೋರಾಂ ಗಳಲ್ಲಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ರಾಜಸ್ಥಾನದಲ್ಲಿ ಬಿಜೆಪಿಗೆ ಶಾಪವಾಗಲಿದೆ ಬಂಡಾಯದ ಬಿಸಿ!

ಛತ್ತೀಸ್ ಗಢದ 90 ವಿಧಾನಸಭಾ ಕ್ಷೇತ್ರಗಳಲ್ಲಿ 77 ಕ್ಕೆ ತನ್ನ ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದೆ.

ಛತ್ತೀಸ್ ಗಢ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಹಿರಿಯ ಬಿಜೆಪಿ ನಾಯಕ ಜೆಪಿ ನಡ್ಡಾ, ಟಿಕೆಟ್ ಹಂಚಿಕೆಯ ಸಮಯದಲ್ಲಿ ಎಲ್ಲರಿಗೂ ನ್ಯಾಯ ನೀಡಲು ಪ್ರಯತ್ನಿಸಿದ್ದೇವೆ ಎಂದಿದ್ದಾರೆ.

ಹಿರಿಯ ನಾಯಕರ ಕೈಯಲ್ಲಿ ಅಭ್ಯರ್ಥಿಗಳ ಪಟ್ಟಿ, ರಾಹುಲ್ ಗೆ ತಲೆನೋವು?!

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ನೇತೃತ್ವದಲ್ಲಿ ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿತ್ತು.

ಛತ್ತೀಸ್ ಗಢದಲ್ಲಿ 77 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಛತ್ತೀಸ್ ಗಢದಲ್ಲಿ 77 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಛತ್ತೀಸ್ ಗಢದಲ್ಲಿ ಬಿಜೆಪಿ 49(90) ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದರೆ, ಕಾಂಗ್ರೆಸ್ 39 ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು. ಈ ರಾಜ್ಯದಲ್ಲಿ ನವೆಂಬರ್ 12 ಮತ್ತು 20 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಫಲಿತಾಂಶ ಡಿಸೆಂಬರ್ 11 ರಂದು ಹೊರಬೀಳಲಿದೆ.

ತೆಲಂಗಾಣದಲ್ಲಿ 38 ಅಭ್ಯರ್ಥಿಗಳು

ತೆಲಂಗಾಣದಲ್ಲಿ 38 ಅಭ್ಯರ್ಥಿಗಳು

ತೆಲಂಗಾಣದ 119 ವಿಧಾನಸಭಾ ಕ್ಷೇತ್ರಗಳಲ್ಲಿ 38 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಿಜೆಪಿ ಈಗಾಗಲೇ ಘೋಷಿಸಿದೆ. ತೆಲಂಗಾಣದಲ್ಲಿ ಡಿಸೆಂಬರ್ 7 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಫಲಿತಾಂಶ ಡಿಸೆಂಬರ್ 11 ರಂದು ಹೊರಬೀಳಲಿದೆ. ತೆಲಂಗಾಣದ ಮುಖ್ಯಮಂತ್ರಿಯಾಗಿದ್ದ ಕೆ ಚಂದ್ರಶೇಖರ ರಾವ್ ಅವರು ವಿಧಾನಸಭೆಯನ್ನು ವಿಸರ್ಜಿಸಿದ್ದರಿಂದ ಅವಧಿಗೂ ಮುನ್ನವೇ ಚುನಾವಣೆ ನಡೆಯುತ್ತಿದೆ.

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮುಗಿಬೀಳುತ್ತಿರುವ ಸಂಸದರು!

ಮಿಜೋರಾಂ ನಲ್ಲಿ 13 ಅಭ್ಯರ್ಥಿಗಳ ಹೆಸರು

ಮಿಜೋರಾಂ ನಲ್ಲಿ 13 ಅಭ್ಯರ್ಥಿಗಳ ಹೆಸರು

ಮಿಜೋರಾಂನ 40 ವಿಧಾನಸಭಾ ಕ್ಷೇತ್ರಗಳಲ್ಲಿ 13 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಇದೀಗ ಬಿಡುಗಡೆ ಮಾಡಿದೆ. ಮಿಜೋರಾಂ ನಲ್ಲಿ ನವೆಂಬರ್ 28 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಫಲಿತಾಂಶ ಡಿಸೆಂಬರ್ 11 ರಂದು ಹೊರಬೀಳಲಿದೆ.

ಬಿಎಸ್ಪಿ ಅಭ್ಯರ್ಥಿಗಳ ಪಟ್ಟಿ

ಬಿಎಸ್ಪಿ ಅಭ್ಯರ್ಥಿಗಳ ಪಟ್ಟಿ

ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷವೂ ಛತ್ತೀಸ್ ಗಢ ವಿಧಾನಸಭೆ ಚುನಾವಣೆಗೆ ತನ್ನ 12 ಅಭ್ಯರ್ಥಿಗಳ ಹೆಸರನ್ನು ಬಹಿರಂಗಗೊಳಸಿದೆ. ಈ ರಾಜ್ಯದಲ್ಲಿ ಬಿಎಸ್ಪಿಯು ಮಾಜಿ ಮುಖ್ಯಮಮತ್ರಿ ಅಜಿತ್ ಜೋಗಿ ಅವರ ಜನತಾ ಕಾಂಗ್ರೆಸ್ ಛತ್ತೀಸ್ ಗಢ(ಜೆ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಜೊತೆ ಮೈತ್ರಿ ಮಾಡಿಕೊಂಡಿದ್ದು, 33 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.

ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ವಿನಃ, ಕಾಂಗ್ರೆಸ್‌ ಬಳಿ ಭಿಕ್ಷೆ ಬೇಡಲ್ಲ: ಮಾಯಾವತಿ

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The BJP on Saturday announced 77 candidates for the upcoming election to Chhattisgarh's 90-member Assembly. Senior BJP leader JP Nadda, who announced the list of after the party's CEC-its highest decision-making body-held a meeting, said his party had made "an effort to include people from all background.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more