ಡೈಲಿ ಹಂಟ್‌ನಲ್ಲಿ 5 ರಾಜ್ಯಗಳ ಚುನಾವಣಾ ಫಲಿತಾಂಶ ಸಮಗ್ರ ವರದಿ
ಐದು ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಮೇ 2ರಂದು ಪ್ರಕಟವಾಗಲಿದೆ. ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ರಾಜ್ಯಗಳಲ್ಲಿ ಒಟ್ಟಿಗೆ ಮತದಾನ ನಡೆದಿತ್ತು.
ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ಎದುರಾಳಿಯಾದ ಬಿಜೆಪಿ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿತ್ತು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಹೊಸ ಹಾದಿ ನಿರ್ಮಿಸುವ ಭರವಸೆ ಹೊಂದಿದೆ.
ತಮಿಳುನಾಡು ರಾಜ್ಯದಲ್ಲಿ ಎಐಎಡಿಎಂಕೆ ಪಕ್ಷವು ಜಯಲಲಿತಾ ನಿಧನದ ಬಳಿಕ ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟವನ್ನು ಮೊದಲ ಬಾರಿಗೆ ಎದುರಿಸುತ್ತಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಒಂದಾಗಿದ್ದ ಡಿಎಂಕೆ-ಕಾಂಗ್ರೆಸ್ ರಾಜ್ಯದಲ್ಲಿಯೂ ಅಧಿಕಾರದ ನಿರೀಕ್ಷೆಯಲ್ಲಿದ್ದಾರೆ.

ಪುದುಚೇರಿಯಲ್ಲಿ ಬಿಜೆಪಿ ಅಧಿಕಾರ ಪಡೆಯುವ ನಿರೀಕ್ಷೆಯಲ್ಲಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಂಡ ಬಳಿಕ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿತ್ತು. ಪುದುಚೇರಿ ಕಾಂಗ್ರೆಸ್ ಪ್ರಭಾವವಿರುವ ಕ್ಷೇತ್ರ. ಆದರೆ, ಈ ಬಾರಿ ಎಲ್ಲಾ ಲೆಕ್ಕಾಚಾರ ಬೇರೆಯಾಗಿದ್ದು, ಬಿಜೆಪಿ ಎಐಎನ್‌ಆರ್‌ಸಿ ಮುನ್ನಡೆಸುವ ಮೈತ್ರಿಕೂಟದ ಜೊತೆ ಸೇರಿದೆ.
ಕೇರಳದಲ್ಲಿ ಆಡಳಿತಾರೂಢ ಎಡಪಕ್ಷ ಮತ್ತು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ನಡುವೆ ಪ್ರಬಲ ಸ್ಪರ್ಧೆ ಇದೆ. ಕಳೆದ ಎರಡು ಚುನಾವಣೆಗಳಿಂದ ಎರಡೂ ಪಕ್ಷಗಳೇ ಅಧಿಕಾರವನ್ನು ಹಂಚಿಕೊಳ್ಳುತ್ತಿವೆ. ಬಿಜೆಪಿ ನೇತೃತ್ವದ ಎನ್‌ಡಿಎ ಅಸ್ಸಾಂನಲ್ಲಿ ಅಧಿಕಾರವನ್ನು ಮರಳಿ ಪಡೆಯುವ ಉತ್ಸಾಹದಲ್ಲಿದೆ.
ಡೈಲಿ ಹಂಟ್ ಐದು ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶವನ್ನು ಲೈವ್‌ನಲ್ಲಿ ನೀಡಲಿದೆ. ಚುನಾವಣೆ ಕೇವಲ ಲೆಕ್ಕಾಚಾರಕ್ಕೆ ಮಾತ್ರ ಸೀಮಿತವಲ್ಲ. ಅಂಕಿ ಸಂಖ್ಯೆಗಳು, ವಿಶ್ಲೇಷಣೆಗಳನ್ನು ಪ್ರತಿಯೊಬ್ಬರಿಗಾಗಿ ನಾವು ನೀಡಲಿದ್ದೇವೆ. ಫಲಿತಾಂಶದ ಸ್ಪಷ್ಟ ಚಿತ್ರಣ ಲಭ್ಯವಾಗುತ್ತಿದ್ದಂತೆ ಫಲಿತಾಂಶದ ವಿಶ್ಲೇಷಣೆಯನ್ನು ರಾಜಕೀಯ ತಜ್ಞರ ಮೂಲಕ ನೀಡಲಾಗುತ್ತದೆ.
ಡೈಲಿ ಹಂಟ್ ಫಲಿತಾಂಶದ ನೇರ, ನಿಖರ ಮತ್ತು ವೇಗದ ಅಪ್ಡೇಟ್ ಮಾಹಿತಿಗಳನ್ನು ನೀಡಲಿದೆ. ಅಂಕಿ ಸಂಖ್ಯೆ, ಪ್ರಬಲ ಪೈಪೋಟಿ, ಹಿಂದಿನ ಚುನಾವಣೆ ಫಲಿತಾಂಶದ ಮಾಹಿತಿಯೂ ಸಿಗಲಿದೆ.
ಚುನಾವಣೆ ಫಲಿತಾಂಶದ ಚಿತ್ರಣ, ರಾಜ್ಯವಾರು ಲೆಕ್ಕಾಚಾರ, ಕ್ಷೇತ್ರವಾರು ವಿವರ, ಸಾಮಾಜಿಕ ಜಾಲತಾಣದ ಟ್ರೆಂಡ್, ಲೈವ್ ವಿಡಿಯೋಗಳು, ಹೆಚ್ಚು ಓದುತ್ತಿರುವ ಲೇಖನ ಸೇರಿದಂತೆ ಹಲವು ಮಾಹಿತಿಗಳನ್ನು ನೀಡಲಿದ್ದೇವೆ. ಸ್ಪಷ್ಟ, ನಿಖರ ಫಲಿತಾಂಶಕ್ಕಾಗಿ ಕಾಯುತ್ತಿರಿ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications