Jharkhand Assembly Polls 2024: ನವೆಂಬರ್ 4ರಂದು ಜಾರ್ಖಂಡ್‌ಗೆ 'ನಮೋ' ಭೇಟಿ-ಕಾರ್ಯಕ್ರಮಗಳ ವಿವರ ಇಲ್ಲಿದೆ
Jharkhand Assembly Polls 2024: ಈಗಾಗಲೇ ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇನ್ನು ರಾಜ್ಯದಲ್ಲಿ ಇದೀಗ ಎಲ್ಲಾ ಪಕ್ಷಗಳ ರಾಜಕೀಯ ನಾಯಕರು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 4ಕ್ಕೆ ಭೇಟಿ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ, ಈ ವೇಳೆ ಅವರು ಯಾವೆಲ್ಲ ಕಾರ್ಯಕ್ರಮಗಳನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 4ರಂದು ಜಾರ್ಖಂಡ್‌ಗೆ ಭೇಟಿ ನೀಡಲಿದ್ದಾರೆ ಮತ್ತು ಎರಡು ಚುನಾವಣಾ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು (ಅಕ್ಟೋಬರ್ 30) ಹೇಳಿದರು. ಇನ್ನು ಇದೇ ವೇಳೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನವೆಂಬರ್ 3ರಂದು ಜಾರ್ಖಂಡ್‌ನಲ್ಲಿ ಮೂರು ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅಂತಲೂ ತಿಳಿಸಿದರು.

ಜಾರ್ಖಂಡ್‌ಗೆ ಬಿಜೆಪಿಯ ಚುನಾವಣಾ ಉಸ್ತುವಾರಿ ಆಗಿರುವ ಚೌಹಾಣ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಚೈಬಾಸಾ ಮತ್ತು ಗರ್ಹ್ವಾದಲ್ಲಿ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇನ್ನು ನವೆಂಬರ್ 2ರಂದು ಅಮಿತ್ ಶಾ ಅವರು ರಾಂಚಿಗೆ ಆಗಮಿಸಲಿದ್ದು, ಮರುದಿನ ಧಲ್ಭುಮ್‌ಗಢ್, ಬರ್ಕಥಾ ಮತ್ತು ಸಿಮಾರಿಯಾದಲ್ಲಿ ಮೂರು ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಂಚಿಯಲ್ಲಿ ಹೇಳಿದರು.
ಜಾರ್ಖಂಡ್‌ನ ಅಭಿವೃದ್ಧಿಗೆ ಇಲ್ಲಿ ಡಬಲ್ ಇಂಜಿನ್ ಸರ್ಕಾರದ ಅಗತ್ಯ ಇದೆ. ಜೆಎಂಎಂ-ಕಾಂಗ್ರೆಸ್ ಸರ್ಕಾರ ಇರುವವರೆಗೆ ರಾಜ್ಯದ ಜನ ನೆಮ್ಮದಿ ಆಗಿರಲು ಸಾಧ್ಯವಿಲ್ಲ ಎಂದು ಚೌಹಾಣ್ ಆಕ್ರೊಶ ಹೊರಹಾಕಿದರು. ಇನ್ನು ಜಾರ್ಖಂಡ್ 81 ವಿಧಾನಸಭೆ ಸ್ಥಾನಗಳಿಗೆ ನವೆಂಬರ್ 13 & 20ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.
ಬಿಜೆಪಿ ಸೇರಿದ ಮಾನಸ್ ಸಿನ್ಹಾ: ಈಗಾಗಲೇ ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಅಲ್ಲದೆ, ಈಗಾಗಲೇ ಪಕ್ಷಾಂತರ ಆಟಗಳು ಕೂಡ ಆರಂಭವಾಗಿದೆ. ಹಾಗೆಯೇ ಅಕ್ಟೋಬರ್ 28ರಂದು ಜಾರ್ಖಂಡ್ ಕಾಂಗ್ರೆಸ್‌ನ ಮಾಜಿ ಕಾರ್ಯಾಧ್ಯಕ್ಷ ಮಾನಸ್ ಸಿನ್ಹಾ ಅವರು ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ.
ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾನಸ್ ಸಿನ್ಹಾ ಅವರನ್ನು ಜಾರ್ಖಂಡ್ ಬಿಜೆಪಿ ಕಾರ್ಯಾಧ್ಯಕ್ಷ ರವೀಂದ್ರ ರೈ ಮತ್ತು ಜಾರ್ಖಂಡ್ ವಿಧಾನಸಭೆಗೆ ಬಿಜೆಪಿ ಸಹ ಉಸ್ತುವಾರಿಯಾಗಿರುವ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಅವರು ಪಕ್ಷದ ಬಾವುಟ ನೀಡುವ ಮೂಲಕ ಸ್ವಾಗತಿಸಿದರು.
ಬಳಿಕ ಮಾತನಾಡಿದ ಮಾನಸ್ ಸಿನ್ಹಾ ಅವರು, "ಕಳೆದ 27 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಸೇವೆ ಸಲ್ಲಿಸಿದ್ದೇನೆ. ಪಕ್ಷದ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದೇನೆ. ಆದರೆ, ನಮ್ಮಂತಹ ಕಾರ್ಯಕರ್ತರಿಗೆ ಪಕ್ಷದಲ್ಲಿ ಯಾವುದೇ ಗೌರವ ಇಲ್ಲದಂತಾಗಿತ್ತು. ಆದ್ದರಿಂದ ನಾನು ಬಿಜೆಪಿಗೆ ಸೇರ್ಪಡೆ ಆಗಲು ನಿರ್ಧರಿಸಿದೆ," ಎಂದು ಹೇಳಿದರು.
ಇದೇ ವೇಳೆ ಮಾತನಾಡಿದ ಹಿಮಂತ ಬಿಸ್ವಾ ಶರ್ಮಾ ಅವರು, "ಪಕ್ಷಕ್ಕೆ ಹಣಕಾಸಿನ ನೆರವು ನೀಡುವವರಿಗೆ, ಪ್ರತಿಷ್ಠಿತ ಕುಟುಂಬಗಳಿಗೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದನೆ ಮಾಡುವವರಿಗೆ ಮಾತ್ರ ಕಾಂಗ್ರೆಸ್ ಟಿಕೆಟ್ ನೀಡುತ್ತದೆ," ಎಂದು ಗಮಭೀರ ಆರೋ ಮಾಡಿದರು.












Click it and Unblock the Notifications