ಜೈಲುಹಕ್ಕಿ 82 ವರ್ಷದ ಮಾಜಿ ಸಿಎಂ 12ನೇ ತರಗತಿ ಪರೀಕ್ಷೆ ಪಾಸ್!

By: ವಿಕಾಸ್ ನಂಜಪ್ಪ
Subscribe to Oneindia Kannada

ಚಂದೀಗಢ, ಮೇ 17: ಜೈಲುಹಕ್ಕಿಯಾಗಿರುವ 82 ವರ್ಷದ ಮಾಜಿ ಸಿಎಂ 12ನೇ ತರಗತಿ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಶಿಕ್ಷಕರ ನೇಮಕಾತಿ ಅವ್ಯವಹಾರದಲ್ಲಿ ಸಿಲುಕಿ ಜೈಲು ಸೇರಿರುವ ಹರ್ಯಾಣ ಮಾಜಿ ಸಿಎಂ ಓಂ ಪ್ರಕಾಶ್ ಚೌತಾಲಾ ಈಗ ಚರ್ಚೆಯ ವಿಷಯ.

ಶಿಕ್ಷಕರ ನೇಮಕಾತಿ ಅವ್ಯಹಾರದಲ್ಲಿ ಅಪರಾಧಿ ಎನಿಸಿಕೊಂಡು ತಿಹಾರ್ ಜೈಲಿನಲ್ಲಿರುವ ಮಾಜಿ ಸಿಎಂ ಓಂ ಪ್ರಕಾಶ್ ಚೌತಾಲಾ ಅವರು ಪೆರೋಲ್ ಮೇಲೆ ಜೈಲಿನಿಂದ ಹೊರ ಬಂದು ಪರೀಕ್ಷೆ ಬರೆದಿದ್ದರು. ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿ ಅಚ್ಚರಿ ಮೂಡಿಸಿದ್ದಾರೆ.[ಹರ್ಯಾಣದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ]

At 82 Om Prakash Chautala clears Class 12 exam from Tihar jail with A grade

ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (NIOS) ನಡೆಸಿದ ಪರೀಕ್ಷೆಗೆ ಚೌಟಾಲ ಹಾಜರಾಗಿದ್ದರು. ತಿಹಾರ್ ಜೈಲಿನಲ್ಲಿ ಕೈದಿಗಳಿಗಾಗಿ ವಿಶೇಷ ಪರೀಕ್ಷಾ ಕೇಂದ್ರ ತೆರೆಯಲಾಗಿತ್ತು.

ರಾಜಕೀಯ ವಿಷಯವಾಗಿ ಹಲವು ಪಠ್ಯ ಪುಸ್ತಕಗಳನ್ನು ಗ್ರಂಥಾಲಯದಿಂದ ಪಡೆದು ಓದುತ್ತಿದ್ದರು. ಏಪ್ರಿಲ್ 23ರಂದು ಪರೀಕ್ಷೆ ಮುಕ್ತಾಯವಾಗಿತ್ತು. ಇತ್ತೀಚೆಗೆ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ.

3,206 ತರಬೇತಿ ಪಡೆದ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಅವ್ಯವಹಾರದಲ್ಲಿ ಭಾಗಿಯಾಗಿದ್ದ ಚೌತಾಲಾ ಅವರನ್ನು ಅಪರಾಧಿ ಎಂದು 2013ರಲ್ಲಿ ಕೋರ್ಟ್ ಆದೇಶ ಹೊರಡಿಸಿತ್ತು.

ಎರಡು ವರ್ಷಗಳ ಬಳಿಕ ಸುಪ್ರೀಂಕೋರ್ಟ್ ಕೂಡಾ ಆದೇಶವನ್ನು ಎತ್ತಿಹಿಡಿದಿದ್ದರಿಂದ ಮಾಜಿ ಸಿಎಂ ಓಂ ಪ್ರಕಾಶ್ ಅವರು ತಿಹಾರ್ ಜೈಲು ಪಾಲಾಗಿದ್ದರು. ಹರ್ಯಾಣದ ಮಾಜಿ ಮುಖ್ಯಮಂತ್ರಿ ಹಾಗೂ ಐಎನ್‌ಎಲ್‌ಡಿ ಪಕ್ಷದ ಮುಖಂಡ ಓಂ ಪ್ರಕಾಶ್ ಚೌತಾಲಾ ಸೇರಿದಂತೆ 53 ಆರೋಪಿಗಳಿಗೆ 10 ವರ್ಷ ಜೈಲುಶಿಕ್ಷೆ ನೀಡಲಾಗಿತ್ತು. [ಹರ್ಯಾಣ ಮಾಜಿ ಸಿಎಂ ಓಂ ಪ್ರಕಾಶ್ ಚೌತಾಲಾಗೆ ಶಿಕ್ಷೆ]

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Congratulate former Haryana Chief Minister, Om Prakash Chautala for passing the higher secondary examination ("first division") at the age of 82 years from jail. Convicted in the teachers' recruitment scam, the former CM now is planning on pursuing an undergraduate course.
Please Wait while comments are loading...