ಅಟಲ್‌ಜೀ ಚೇತರಿಸಿಕೊಳ್ಳುತ್ತಿದ್ದಾರೆ ಆದರೆ ಡಿಸ್‌ಚಾರ್ಜ್ ಇಲ್ಲ: ಏಮ್ಸ್
ನವ ದೆಹಲಿ, ಜೂನ್ 12: ಹಠಾತ್ ಆರೋಗ್ಯದಲ್ಲಿ ಏರುಪೇರಾದ ಕಾರಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ನಿನ್ನೆ ಮಧ್ಯಾಹ್ನ ದಾಖಲಾಗಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಏಮ್ಸ್ ವೈದ್ಯಾಧಿಕಾರಿಗಳು ಹೇಳಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಮೂತ್ರನಾಳ ಸೊಂಕು ಆಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ವಾಜಪೇಯಿ ಅವರು ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ, ಆದರೆ ಡಿಸ್‌ಚಾರ್ಜ್ ಬಗ್ಗೆ ಈಗಲೇ ನಿರ್ಣಯಿಸಿಲ್ಲ ಎಂದು ವೈದ್ಯರ ತಂಡದ ಮುಖ್ಯಸ್ಥ ಡಾ.ರಣದೀಪ್ ಹೇಳಿದ್ದಾರೆ.

ಇಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ದು ಮತ್ತಿತರೆ ಪ್ರಮುಖ ವ್ಯಕ್ತಿಗಳು ಆಸ್ಪತ್ರೆಗೆ ಭೇಟಿ ನೀಡಿ ಅಟಲ್‌ಜೀ ಅವರ ಆರೋಗ್ಯ ವಿಚಾರಿಸಿದರು.
ನಿನ್ನೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಲಾಲ್‌ಕೃಷ್ಣ ಅಡ್ವಾಣಿ, ಗೃಹ ಮಂತ್ರಿ ರಾಜನಾಥ್ ಸಿಂಗ್ ಮೊದಲಾದ ಬಿಜೆಪಿ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಅಟಲ್ ಜೀ ಅವರ ಆರೋಗ್ಯ ವಿಚಾರಿಸಿದರು.












Click it and Unblock the Notifications