ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಿದ ಅಜಾತಶತ್ರು ಅಟಲ್

ಬೆಂಗಳೂರು, ಆಗಸ್ಟ್ 16 : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ರಾಜಕೀಯದಲ್ಲಿ ಮಾತ್ರ ಅಜಾತಶತ್ರು ಆಗಿರಲಿಲ್ಲ. ದೇಶದ ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದರಲ್ಲಿ ಅವರ ನಿರ್ಧಾರಗಳು ಪ್ರಮುಖ ಪಾತ್ರ ವಹಿಸಿದ್ದವು.
ಅಟಲ್ ಬಿಹಾರಿ ವಾಜಪೇಯಿ ಅವರು ಮನಮೋಹನ್ ಸಿಂಗ್ ಅವರಿಗೆ ಪ್ರಧಾನಿ ಪಟ್ಟವನ್ನು ಬಿಟ್ಟು ಕೊಡುವಾಗ ದೇಶದ ಆರ್ಥಿಕ ಪರಿಸ್ಥಿತಿ ಚೆನ್ನಾಗಿತ್ತು. ಒಟ್ಟು ದೇಶಿಯ ಉತ್ಪಾದನೆ (ಜಿಡಿಪಿ) ಶೇ 8ರಷ್ಟಿತ್ತು. ಹಣ ದುಬ್ಬರ ಶೇ 4ಕ್ಕಿಂತ ಕಡಿಮೆ ಇತ್ತು.
ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ: ವ್ಯಕ್ತಿಚಿತ್ರ
1991ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಾಗ ಆರ್ಥಿಕ ಪರಿಸ್ಥಿತಿ ಅಷ್ಟು ಅನುಕೂಲಕರವಾಗಿರಲಿಲ್ಲ. ದೇಶದಲ್ಲಿ ಸಮ್ಮಿಶ್ರ ಸರ್ಕಾರಗಳು ಅಸ್ತಿತ್ವಕ್ಕೆ ಬಂದ ಕಾರಣ ಆರ್ಥಿಕ ದೃಢತೆಯೂ ಸಾಧ್ಯವಾಗಿರಲಿಲ್ಲ. ಚಿನ್ನವನ್ನು ಅಡವಿಟ್ಟು ಸಾಲ ತರುವ ಪರಿಸ್ಥಿತಿ ನಿರ್ಮಾಣಗೊಂಡಿತ್ತು.
ಇಂದಲ್ಲಾ ನಾಳೆ ನಾವು ದಿಗ್ವಿಜಯ ಸಾಧಿಸುತ್ತೇವೆ: ಕಾಂಗ್ರೆಸ್ಸಿಗೆ ಎಚ್ಚರಿಕೆ ನೀಡಿದ್ದ ಅಟಲ್
ಅಂದಿನ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರು ಡಾ.ಮನಮೋಹನ್ ಸಿಂಗ್ ಅವರಿಗೆ ಹಣಕಾಸು ಖಾತೆ ಜವಾಬ್ದಾರಿ ನೀಡುವಾಗ ಆರ್ಥಿಕ ಪರಿಸ್ಥಿತಿ ಹದಗೆಟ್ಟಿತ್ತು. ಆದರೆ, ವಾಜಪೇಯಿ ಅವರ ಆಡಳಿತದ ಬಳಿಕ ಮನಮೋಹನ್ ಸಿಂಗ್ ಪ್ರಧಾನಿಯಾದಾಗ ಪರಿಸ್ಥಿತಿ ಸುಧಾರಿಸಿತ್ತು.
ಸ್ವಚ್ಛ ರಾಜಕಾರಣಿ ವಾಜಪೇಯಿಯ ಬಿಚ್ಚು ಮನಸ್ಸಿನ ಭಾಷಣಗಳು
ವಾಜಪೇಯಿ ಅವರು ಕೈಗೊಂಡ ದಿಟ್ಟ ನಿರ್ಧಾರಗಳು ಯುಪಿಎ ಸರ್ಕಾರಕ್ಕೆ ಸಹಾಯಕವಾಯಿತು. ಯುಪಿಎ-1ರ ಅವಧಿಯಲ್ಲಿ ಮನಮೋಹನ್ ಸಿಂಗ್ ಅವರು ಸಹ ಹಲವು ಬದಲಾವಣೆಗಳನ್ನು ತಂದು ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿದರು.