ವಾಜಪೇಯಿ ಅಂತಿಮ ದರ್ಶನ, ಅಂತ್ಯಕ್ರಿಯೆಯ ವಿವರಗಳು
ನವದೆಹಲಿ, ಆಗಸ್ಟ್ 16 : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರವನ್ನು ಅವರ ದೆಹಲಿಯ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗಿದೆ. ಶುಕ್ರವಾರ ಸಂಜೆ 5 ಗಂಟೆ ವಿಜಯ ಘಾಟ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಗುರುವಾರ ಸಂಜೆ 5 ಗಂಟೆಗೆ ಅಟಲ್ ಬಿಹಾರಿ ವಾಜಪೇಯಿ (93) ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಆಸ್ಪತ್ರೆಯಿಂದ ಮೃತದೇಹವನ್ನು ಕೃಷ್ಣ ಮೆನನ್ ರಸ್ತೆಯಲ್ಲಿರುವ ಅವರ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗಿದೆ.
ಶುಕ್ರವಾರ ಬೆಳಗ್ಗೆ ತನಕ ಅವರ ನಿವಾಸದಲ್ಲಿ ಗಣ್ಯರು, ಸಂಬಂಧಿಕರ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ 12 ಗಂಟೆ ಸುಮಾರಿಗೆ ಬಿಜೆಪಿ ಕೇಂದ್ರ ಕಚೇರಿಗೆ ಪಾರ್ಥಿವ ಶರೀರವನ್ನು ತರಲಾಗುತ್ತದೆ. ಅಲ್ಲಿಯೂ ಕಾರ್ಯಕರ್ತರು, ಪಕ್ಷದ ನಾಯಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮಧ್ಯಾಹ್ನ 3 ಗಂಟೆ ಬಳಿಕ ಬಿಜೆಪಿ ಕೇಂದ್ರ ಕಚೇರಿಯಿಂದ ವಿಜಯ್ ಘಾಟ್ ತನಕ ಪಾರ್ಥಿವ ಶರೀರದ ಮೆರವಣಿಗೆ ನಡೆಸಲಾಗುತ್ತದೆ. ವಿಜಯ ಘಾಟ್‌ನಲ್ಲಿ ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. 1.5 ಎಕರೆ ಜಾಗದಲ್ಲಿ ವಾಜಪೇಯಿ ಅವರ ಸ್ಮಾರಕ ನಿರ್ಮಾಣವಾಗಲಿದೆ.












Click it and Unblock the Notifications