ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾಜಪೇಯಿ ಅಂತಿಮ ದರ್ಶನ, ಅಂತ್ಯಕ್ರಿಯೆಯ ವಿವರಗಳು

By Gururaj
|
Google Oneindia Kannada News

ನವದೆಹಲಿ, ಆಗಸ್ಟ್ 16 : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರವನ್ನು ಅವರ ದೆಹಲಿಯ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗಿದೆ. ಶುಕ್ರವಾರ ಸಂಜೆ 5 ಗಂಟೆ ವಿಜಯ ಘಾಟ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಗುರುವಾರ ಸಂಜೆ 5 ಗಂಟೆಗೆ ಅಟಲ್ ಬಿಹಾರಿ ವಾಜಪೇಯಿ (93) ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಆಸ್ಪತ್ರೆಯಿಂದ ಮೃತದೇಹವನ್ನು ಕೃಷ್ಣ ಮೆನನ್ ರಸ್ತೆಯಲ್ಲಿರುವ ಅವರ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗಿದೆ.

ಅಟಲ್ ಬಿಹಾರಿ ವಾಜಪೇಯಿ ಬದುಕಿನ ಹೆಜ್ಜೆಗುರುತುಗಳುಅಟಲ್ ಬಿಹಾರಿ ವಾಜಪೇಯಿ ಬದುಕಿನ ಹೆಜ್ಜೆಗುರುತುಗಳು

ಶುಕ್ರವಾರ ಬೆಳಗ್ಗೆ ತನಕ ಅವರ ನಿವಾಸದಲ್ಲಿ ಗಣ್ಯರು, ಸಂಬಂಧಿಕರ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಬಳಿಕ 12 ಗಂಟೆ ಸುಮಾರಿಗೆ ಬಿಜೆಪಿ ಕೇಂದ್ರ ಕಚೇರಿಗೆ ಪಾರ್ಥಿವ ಶರೀರವನ್ನು ತರಲಾಗುತ್ತದೆ. ಅಲ್ಲಿಯೂ ಕಾರ್ಯಕರ್ತರು, ಪಕ್ಷದ ನಾಯಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Atal Bihari Vajpayee will be laid to rest at Vijay Ghat

ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ (1924-2018) ವ್ಯಕ್ತಿಚಿತ್ರಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ (1924-2018) ವ್ಯಕ್ತಿಚಿತ್ರ

ಮಧ್ಯಾಹ್ನ 3 ಗಂಟೆ ಬಳಿಕ ಬಿಜೆಪಿ ಕೇಂದ್ರ ಕಚೇರಿಯಿಂದ ವಿಜಯ್ ಘಾಟ್ ತನಕ ಪಾರ್ಥಿವ ಶರೀರದ ಮೆರವಣಿಗೆ ನಡೆಸಲಾಗುತ್ತದೆ. ವಿಜಯ ಘಾಟ್‌ನಲ್ಲಿ ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. 1.5 ಎಕರೆ ಜಾಗದಲ್ಲಿ ವಾಜಪೇಯಿ ಅವರ ಸ್ಮಾರಕ ನಿರ್ಮಾಣವಾಗಲಿದೆ.

English summary
Former Prime Minister Atal Bihari Vajpayee breathed his last at the age of 93 on Thursday, 16 August, 2018 in All India Institute of Medical Science (AIIMS). He will be laid to rest at Vijay Ghat, on August 17 at 5 pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X