ಸಬ್ಸಿಡಿಯುಳ್ಳ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ

ಪೆಟ್ರೋಲ್, ಡೀಸೆಲ್ ದರದಲ್ಲಿ ಏರುಪೇರು ಮಾಡಿದ ಬೆನ್ನಲ್ಲೇ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಸಬ್ಸಿಡಿ ಸಹಿತ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ ಮಾಡಿವೆ. ಆದರೆ, ಎಟಿಎಫ್ ಬೆಲೆ ಇಳಿಕೆ ಮಾಡಲಾಗಿದೆ.

ನವದೆಹಲಿ, ಡಿಸೆಂಬರ್ 01: ಪೆಟ್ರೋಲ್, ಡೀಸೆಲ್ ದರದಲ್ಲಿ ಏರುಪೇರು ಮಾಡಿದ ಬೆನ್ನಲ್ಲೇ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಸಬ್ಸಿಡಿ ಸಹಿತ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ ಮಾಡಿವೆ. ಆದರೆ, ಎಟಿಎಫ್ ಬೆಲೆ ಇಳಿಕೆ ಮಾಡಲಾಗಿದೆ.

ಸರ್ಕಾರಿ ಸ್ವಾಮ್ಯ ತೈಲ ಕಂಪನಿ ಇಂಡಿಯನ್ ಆಯಿಲ್ ಕಾರ್ಪೋರೇಷನ್(ಐಒಸಿ) ಡಿಸೆಂಬರ್ 1ರಿಂದ ಜಾರಿಗೆ ಬರುವಂತೆ ಸಬ್ಸಿಡಿ ಸಹಿತ ಎಲ್ ಪಿಜಿ ಸಿಲಿಂಡರ್ ಬೆಲೆ ಪ್ರತಿ ಸಿಲಿಂಡರ್ ಮೇಲೆ 2.07ರು ಹೆಚ್ಚಿಸಲಾಗಿದೆ. ಕಳೆದ ಆರು ತಿಂಗಳಲ್ಲಿ ಏಳು ಬಾರಿ ಅಡುಗೆ ಅನಿಲ ಬೆಲೆ ಹೆಚ್ಚಿಸಲಾಗಿದೆ. ನವೆಂಬರ್ 01ರಂದು 2.05ರು ಪ್ರತಿ ಸಿಲಿಂಡರ್ ಗೆ ಹೆಚ್ಚಿಸಲಾಗಿತ್ತು. ಪರಿಷ್ಕೃತ ದರದಂತೆ 14.2 ಕೆಜಿ ಸಿಲಿಂಡರ್ ಬೆಲೆ 432.71 ಪ್ರತಿ ಸಿಲಿಂಡರ್ ಆಗಲಿದೆ. [ಪೆಟ್ರೋಲ್ ಅಲ್ಪ ಏರಿಕೆ, ಡೀಸೆಲ್ ಬೆಲೆಯಲ್ಲಿ ಅಲ್ಪ ಇಳಿಕೆ]

ATF price cut by 3.7%, LPG hiked by Rs 2 per cylinder

ಎವಿಯೇಷನ್ ಟರ್ಬೈನ್ ಇಂಧನ (ಎಟಿಎಫ್) ಬೆಲೆಯಲ್ಲಿ ಶೇ 3.7ರಷ್ಟು ಅಥವಾ 1,881 ರು ಪ್ರತಿ ಕಿಲೋ ಲೀಟರ್ ಗೆ ಇಳಿಕೆ ಮಾಡಲಾಗಿದೆ.

ಗಮನಿಸಿ: ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+