Get Updates
Get notified of breaking news, exclusive insights, and must-see stories!

ಅತೀಕ್ ಅಹ್ಮದ್, ಅಶ್ರಫ್ ಅಹ್ಮದ್ ಹತ್ಯೆ ಕೇಸ್: ಯುಪಿಯಲ್ಲಿ ಸುರಕ್ಷತೆಯ ಬಗ್ಗೆ ದೀದಿ ಪ್ರಶ್ನೆ

ಕ್ರಿಮಿನಲ್ ಅತೀಕ್ ಅಹ್ಮದ್ ಹಾಗೂ ಅಶ್ರಫ್ ಅಹ್ಮದ್ ಮೇಲಿನ ಗುಂಡಿನ ದಾಳಿಯಿಂದಾಗಿ ಯುಪಿ ಸರ್ಕಾರದ ವಿರುದ್ಧ ವಿಪಕ್ಷಗಳು ವಾಗ್ದಾಳಿ ಮಾಡಿವೆ. ಜೊತೆಗೆ ಯುಪಿಯಲ್ಲಿ ಸುರಕ್ಷತೆಯ ಬಗ್ಗೆ ಪ್ರಶ್ನೆ ಮಾಡಿವೆ.

ಈ ಘಟನೆಯ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, 'ಭಾರತದ ಅತೀ ದೊಡ್ಡ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಅಧಃಪತನಕ್ಕೆ ಇಳಿದಿರುವುದನ್ನು ಕಂಡು ತುಂಬಾ ಆಘಾತವಾಗಿದೆ' ಎಂದು ಟ್ವೀಟ್ ಮಾಡಿದ್ದಾರೆ.

Atiq Ahmed and Ashraf Ahmed murder case

'ಉತ್ತರ ಪ್ರದೇಶದಲ್ಲಿನ ಅರಾಜಕತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಸಂಪೂರ್ಣ ಕುಸಿತಗೊಂಡಿದೆ. ಇದರಿಂದ ನನಗೆ ಆಘಾತವಾಗಿದೆ. ಪೊಲೀಸರು ಮತ್ತು ಮಾಧ್ಯಮದವರ ಕಣ್ನೆದುರು ದುಷ್ಕರ್ಮಿಗಳು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಇಂತಹ ಕಾನೂನುಬಾಹಿರ ಕೃತ್ಯಗಳಿಗೆ ನಮ್ಮ ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ ಸ್ಥಾನವಿಲ್ಲ' ಎಂದು ದೀದಿ ಟ್ವೀಟ್ ಮಾಡಿದ್ದಾರೆ.

ಉತ್ತರಪ್ರದೇಶದಲ್ಲಿ ಹಿಂದೆಂದೂ ಕೇಳಿ ಕಂಡರಿಯದ ಘಟನೆ ನಡೆದಿದೆ. ಮಾಧ್ಯಮದವರ ಮುಂದೆ ದಾಳಿಕೋರರು ಅಟ್ಟಹಾಸ ಮೆರೆದಿದ್ದಾರೆ. ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಕ್ರಿಮಿನಲ್ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರ ಮೇಲೆ ದಾಳಿ ನಡೆದಿಎ. ಘಟನೆಯಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ.

ಕಳೆದ ರಾತ್ರಿ (ಏಪ್ರಿಲ್15) ಪೊಲೀಸ್ ಭದ್ರತೆಯಲ್ಲಿದ್ದ ಆರೋಪಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರ ಮೇಲೆ ನಡೆದ ಗುಂಡಿನ ದಾಳಿ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದೆ. ನೋಡ ನೋಡುತ್ತಿದ್ದಂತೆ ದಾಳಿಕೋರರು ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಮೇಲೆ ಗುಂಡಿನ ಸುರಿ ಮಳೆ ಸುರಿಸಿದ್ದಾಳೆ.

Didi questions

ಪೊಲೀಸರು ಪ್ರಯಾಗ್‌ರಾಜ್‌ನಲ್ಲಿ ಬಂಧಿತ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರನ್ನು ಎಂದಿನಂತೆ ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಮಾಧ್ಯಮದವರು ಅತೀಕ್ ಅಹ್ಮದ್ ಮತ್ತು ಅಶ್ರಫ್ ಅಹ್ಮದ್ ಅವರ ಮುಂದೆ ಕ್ಯಾಮರಾ ಹಿಡಿದು ಪ್ರಶ್ನೆಗಳನ್ನು ಕೇಳಲು ಮುಂದಾಗಿದ್ದಾರೆ. ಇದೇ ವೇಳೆ ಸುದ್ದಿಗಾರರಂತೆ ವೇಷಧರಿಸಿದ್ದ ಮೂವರು ದಾಳಿಕೋರರು ಏಕಾಏಕಿ ಗುಂಡಿನ ದಾಳಿಗೆ ಮುಂದಾಗಿದ್ದಾರೆ. ದಾಳಿಯ ನಂತರ ಪೊಲೀಸರು ಮೂವರು ದಾಳಿಕೋರರನ್ನು ಬಂಧಿಸಿದ್ದಾರೆ.
ಜೊತೆಗೆ ದಾಳಿಕೋರರ ವಿಚಾರಣೆ ಕೂಡ ನಡೆಯುತ್ತಿದೆ.

ಈ ದೃಶ್ಯಗಳು ಸ್ಪಷ್ಟವಾಗಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರಪ್ರದೇಶದಲ್ಲಿ ಭದ್ರತೆಯ ಬಗ್ಗೆ ಪ್ರಶ್ನೆಯನ್ನು ಹುಟ್ಟು ಹಾಕಿದೆ. ಜನನಿಬಿಡ ಪ್ರದೇಶದಲ್ಲಿ ದಾಳಿಕೋರರು ಯಾವುದೇ ಭಯವಿಲ್ಲದೆ ಈ ರೀತಿ ದಾಳಿ ಮಾಡಿದ್ದು ಭೀತಿಯನ್ನು ಹುಟ್ಟುಹಾಕಿದೆ. ಘಟನೆಯಿಂದಾಗಿ ಉತ್ತರಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು 144 ಸೆಕ್ಷನ್ ಜಾರಿಗೊಳಿಸಲಾಗಿದೆ. ರಾಜ್ಯದಾದ್ಯಂತ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ. ವಿಶೇಷವಾಗಿ ಪ್ರಯಾಗ್‌ರಾಜ್‌ನಲ್ಲಿ ಪೊಲೀಸ್ ಪಡೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆ ಮಾಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+