Atishi Marlena: ದೆಹಲಿ ನೂತನ ಸಿಎಂ ಆಗಿ ಅತಿಶಿ ಪ್ರಮಾಣವಚನ ಸ್ವೀಕಾರ
ನವದೆಹಲಿ, ಸೆಪ್ಟೆಂಬರ್, 2: ದೆಹಲಿ ನೂತನ ಸಿಎಂ ಆಗಿ ಅತಿಶಿ ಅವರು ಇಂದು (ಸೆಪ್ಟೆಂಬರ್ 21) ಪ್ರಮಾಣ ವಚನ ಸ್ವೀಕಾರ ಮಾಡಿದರು. ಜೊತೆಗೆ ಕೈಲಾಶ್ ಗೆಹ್ಲೋಟ್, ಗೋಪಾಲ್ ರೈ, ಸೌರಭ್ ಭಾರಧ್ವಾಜ್, ಇಮ್ರಾನ್ ಹುಸೇನ್ ಸಹ ಸಚಿವರಾಗಿ ಪ್ರಚಾಣ ವಚನ ಸ್ವೀಕಾರ ಮಾಡಿದರು. ಇನ್ನು ಇವರಿಗೆ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಪ್ರಮಾಣವಚನವನ್ನು ಬೋಧಿಸಿದರು.
ದೆಹಲಿಯ ರಾಜಭವನ ಕಚೇರಿಯಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಇಂದು (ಶನಿವಾರ, ಸೆಪ್ಟೆಂಬರ್ 21) ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದರು.

ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಸಂಜೆ 4:30ಕ್ಕೆ ರಾಜ್ ನಿವಾಸದಲ್ಲಿ ಅತಿಶಿ ಮತ್ತು ಅವರ ಮಂತ್ರಿಮಂಡಲಕ್ಕೆ ಪ್ರಮಾಣ ವಚನ ಬೋಧಿಸಿದರು.
#WATCH | AAP leader Atishi takes oath as Chief Minister of Delhi pic.twitter.com/R1iomGAaS9
— ANI (@ANI) September 21, 2024
ಹಾಲಿ ಸಚಿವರಾದ ಗೋಪಾಲ್ ರಾಯ್, ಕೈಲಾಶ್ ಗೆಹ್ಲೋಟ್, ಸೌರಭ್ ಭಾರದ್ವಾಜ್ ಮತ್ತು ಇಮ್ರಾನ್ ಹುಸೇನ್ ತಮ್ಮ ಸ್ಥಾನಗಳನ್ನು ಉಳಿಸಿಕೊಳ್ಳಲಿದ್ದು, ದಲಿತ ಶಾಸಕ ಮುಖೇಶ್ ಅಹ್ಲಾವತ್ ಸಂಪುಟದಲ್ಲಿ ಹೊಸಬರಾಗಲಿದ್ದಾರೆ. ಇನ್ನೂ ಒಂದು ಸಚಿವ ಸ್ಥಾನ ಖಾಲಿಯಿದೆ. ಇನ್ನು ಬಿಜೆಪಿಯ ಸುಷ್ಮಾ ಸ್ವರಾಜ್ ಮತ್ತು ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ನಂತರ ಅತಿಶ್ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿ ಆಗಿದ್ದಾರೆ.
ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಅರವಿಂದ್ ಕೇಜ್ರಿವಾಲ್ ಅಚ್ಚರಿಯ ನಿರ್ಧಾರ ತೆಗೆದುಕೊಂಡಿದ್ದರು. ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅವರು ದಿಢೀರನೆ ರಾಜೀನಾಮೆ ನೀಡಿದ್ದರು. ಬಳಿಕ ಅತಿಶಿ ಅವರನ್ನು ದೆಹಲಿ ಮುಖ್ಯಮಂತ್ರಿಯಾಗಿ ಘೋಷಣೆ ಮಾಡಲಾಗಿತ್ತು.
ಅತಿಶಿ ಇಂದು ದೆಹಲಿಯ ರಾಜ್ ನಿವಾಸದಲ್ಲಿ ನಡೆದ ಸಮಾರಂಭದಲ್ಲಿ ನೂತನ ಸಚಿವ ಸಂಪುಟದ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಅತಿಶಿ ಕೇಜ್ರಿವಾಲ್ ನಿವಾಸಕ್ಕೆ ತೆರಳಿದ್ದರು.
PHOTO | AAP leaders Atishi (@AtishiAAP), Gopal Rai (@AapKaGopalRai), Saurabh Bharadwaj (@Saurabh_MLAgk) and others met party national convener Arvind Kejriwal (@ArvindKejriwal) at his residence in Delhi. Atishi is scheduled to take oath as Delhi CM shortly.
— Press Trust of India (@PTI_News) September 21, 2024
(Image Source: Third… pic.twitter.com/px3YM4SV1L
ಎಎಪಿಯ ಪ್ರಮುಖ ನಾಯಕಿಯಾಗಿ, ಮಾಜಿ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಅವರ ಸಲಹೆಗಾರರಾಗಿ ಸೇವೆ ಸಲ್ಲಿಸಿದ ಅತಿಶಿ ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹಿಂದಿನ ಕೇಜ್ರಿವಾಲ್ ಆಡಳಿತದಲ್ಲಿ ಅತಿಶಿ ಅವರು ಹಣಕಾಸು, ಕಂದಾಯ, ಲೋಕೋಪಯೋಗಿ ಇಲಾಖೆ, ವಿದ್ಯುತ್ ಮತ್ತು ಶಿಕ್ಷಣ ಸೇರಿದಂತೆ ವ್ಯಾಪಕ ಶ್ರೇಣಿಯ ಪೋರ್ಟ್‌ಫೋಲಿಯೊಗಳಲ್ಲಿ ಜವಾಬ್ದಾರಿ ನಿರ್ವಹಿಸಿದ್ದರು.












Click it and Unblock the Notifications