ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಉದ್ಯೋಗ ಸೃಷ್ಟಿಸುವ ಸಂಸ್ಥೆಗಳಿಗೆ ಸಬ್ಸಿಡಿ ಆಫರ್

|
Google Oneindia Kannada News

ನವದೆಹಲಿ, ನವೆಂಬರ್.12: ಭಾರತದಲ್ಲಿ ಹೊಸ ನೇಮಕಾತಿಗಳನ್ನು ಮಾಡಿಕೊಳ್ಳುವ ಸಂಸ್ಥೆಗಳಿಗೆ ಸಬ್ಸಿಡಿ ನೀಡುವುದಾಗಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಆ ಮೂಲಕ ದೇಶದಲ್ಲಿ ಉದ್ಯೋಗ ಸೃಷ್ಟಿಗೆ ಕೇಂದ್ರ ಸರ್ಕಾರವು ಉತ್ತೇಜನ ನೀಡಿದೆ.

ನವದೆಹಲಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿದ್ದಾರೆ. ಎರಡು ವರ್ಷಗಳ ಕಾಲ ಉದ್ಯೋಗಿಗಳು ಮತ್ತು ಉದ್ಯೋಗದಾತರ ನಿವೃತ್ತಿ ನಿಧಿಯ ಕೊಡುಗೆಯನ್ನು ಈ ಸಬ್ಸಿಡಿ ಮೂಲಕ ನೀಡಲಾಗುತ್ತದೆ. ಉದ್ಯೋಗಿಗಳ ವೇತನದಲ್ಲಿ ಶೇಕಡಾ 12ರಷ್ಟು, ಉದ್ಯೋಗದಾತ ಸಂಸ್ಥೆಯಿಂದ ಶೇಕಡಾ.12ರಷ್ಟು ಸೇರಿ ಒಟ್ಟು ಶೇಕಡಾ. 24 ಶೇಕಡಾ ವೇತನವನ್ನು ಸಂಸ್ಥೆಗಳಿಗೆ ಎರಡು ವರ್ಷಗಳವರೆಗೆ ಸಬ್ಸಿಡಿ ರೂಪದಲ್ಲಿ ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಲಾಕ್‌ಡೌನ್ ಬಳಿಕ ಆರ್ಥಿಕತೆ ಪ್ರಬಲ ಚೇತರಿಕೆ: ನಿರ್ಮಲಾ ಸೀತಾರಾಮನ್ಲಾಕ್‌ಡೌನ್ ಬಳಿಕ ಆರ್ಥಿಕತೆ ಪ್ರಬಲ ಚೇತರಿಕೆ: ನಿರ್ಮಲಾ ಸೀತಾರಾಮನ್

ಆತ್ಮನಿರ್ಭರ್ ಭಾರತ್ ಯೋಜನೆ ಅಡಿ ನೌಕರರ ಭವಿಷ್ಯ ನಿಧಿ ಸಂಸ್ಥೆಯಲ್ಲಿ ನೋಂದಾಯಿತ ಪ್ರತಿಯೊಬ್ಬ ಉದ್ಯೋಗಿಯು ಈ ಸಬ್ಸಿಡಿಯನ್ನು ಪಡೆದುಕೊಳ್ಳಬಹುದಾಗಿದೆ. ಈ ಯೋಜನೆ ಇಪಿಎಫ್ಒ-ನೋಂದಾಯಿತ ಸಂಸ್ಥೆಯಲ್ಲಿ ಮಾಸಿಕ 15,000 ಸಾವಿರಕ್ಕಿಂತ ಕಡಿಮೆ ವೇತನ ಪಡೆಯುವ ಉದ್ಯೋಗಿಗೆ ಈ ಯೋಜನೆ ಅನ್ವಯವಾಗುತ್ತದೆ.

 Atmanirbhar Bharat 3.0: New Employment Scheme Announced By Central Minister Nirmala Sitharaman

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಸಂದರ್ಭದಲ್ಲಿ ಉದ್ಯೋಗದಿಂದ ನಿರ್ಗಮಿಸಿದ ಹಾಗೂ ಹೊಸದಾಗಿ ಉದ್ಯೋಗಕ್ಕೆ ಸೇರಿದ್ದು, 15000ಕ್ಕಿಂತ ಕಡಿಮೆ ವೇತನ ಪಡೆಯುವ ಉದ್ಯೋಗಿಗಳಿಗೆ ಈ ಯೋಜನೆ ಫಲಾನುಭವಿಗಳು ಆಗುತ್ತಾರೆ. ಕಳೆದ ಮಾರ್ಚ್.1, 2020ರ ನಂತರ ಉದ್ಯೋಗಕ್ಕೆ ರಾಜೀನಾಮೆ ಸಲ್ಲಿಸಿದ್ದರೆ, ಅಥವಾ ಸಪ್ಟೆಂಬರ್ ಬಳಿಕ ಹೊಸ ಉದ್ಯೋಗಕ್ಕೆ ಸೇರ್ಪಡೆಯಾಗಿದ್ದಲ್ಲಿ ಈ ಯೋಜನೆಯ ಅನುಕೂಲ ಪಡೆದುಕೊಳ್ಳಬಹುದು.

ಕೊರೊನಾವೈರಸ್ ಸಂದಿಗ್ಧ ಪರಿಸ್ಥಿತಿಯಲ್ಲಿ 50 ಉದ್ಯೋಗಿಗಳನ್ನು ಹೊಂದಿರುವ ಸಂಸ್ಥೆಗಳಿಗೆ ಕನಿಷ್ಠ ಎರಡು ಹೊಸ ಉದ್ಯೋಗಿಗಳನ್ನು ಸೇರಿಸಿಕೊಳ್ಳಲು ಅವಕಾಶ ನೀಡಲಾಗಿತ್ತು. 50ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ಆ ಸಂಸ್ಥೆಗಳು ಕನಿಷ್ಠ ಐದು ಹೊಸ ಉದ್ಯೋಗಿಗಳನ್ನು ಸೇರಿಸಿಕೊಳ್ಳಲು ಅನುಮತಿಸಲಾಗಿದೆ. ಜೂನ್.31, 2021ರವರೆಗೂ ಈ ಯೋಜನೆಯು ಚಾಲ್ತಿಯಲ್ಲಿರುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

English summary
Atmanirbhar Bharat 3.0: New Employment Scheme Announced By Central Minister Nirmala Sitharaman.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X