17ಕ್ಕೆ ಮೋದಿ ಬರ್ತಡೇ; ಭಾನುವಾರದ ರಜೆ ರದ್ದು; ಭುಗಿಲೆದ್ದ ಆಕ್ರೋಶ

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಉತ್ತರ ಪ್ರದೇಶ ಸರ್ಕಾರಿ ಶಾಲೆಗಳ ಭಾನುವಾರದ ರಜೆ ಕ್ಯಾನ್ಸಲ್. ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ಅಲ್ಲಿನ ಶಿಕ್ಷಣ ಸಚಿವರ ಆದೇಶ. ಸರ್ಕಾರದ ಕ್ರಮದ ವಿರುದ್ಧ ಪ್ರತಿಪಕ್ಷಗಳ ಟೀಕೆ.

ಲಕ್ನೋ, ಸೆಪ್ಟೆಂಬರ್ 8: ಇದೇ ತಿಂಗಳ 17ಕ್ಕೆ ಪ್ರಧಾನಿ ಮೋದಿ ಅವರ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ, ಅಂದು ಭಾನುವಾರವಾದರೂ, ಎಲ್ಲಾ ಶಾಲಾ ಮಕ್ಕಳೂ ಶಾಲೆಗಳಿಗೆ ಕಡ್ಡಾಯವಾಗಿ ಹಾಜರಾಗಬೇಕೆಂದು ಉತ್ತರ ಪ್ರದೇಶ ಸರ್ಕಾರ ಘೋಷಿಸಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಸರ್ಕಾರದ ಪರವಾಗಿ ಆದೇಶ ಹೊರಡಿಸಿರುವ ಪ್ರಾಥಮಿಕ ಶಿಕ್ಷಣ ಸಚಿವೆ ಅನುಪಮಾ ಜೈಸ್ವಾಲ್, ರಾಜ್ಯದಲ್ಲಿರುವ 1.60 ಲಕ್ಷ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪ್ರಧಾನಿ ಹುಟ್ಟುಹಬ್ಬದಂದು ಕಡ್ಡಾಯವಾಗಿ ಶಾಲೆಗಳಿಗೆ ಹಾಜರಾಗಬೇಕೆಂದು ಸೂಚಿಸಿದ್ದಾರೆ.

Attendance compulsory for PM Modi's birthday celebrations in Uttar Pradesh primary schools

ಅಂದು, ಶಾಲೆಗಳಲ್ಲಿ ಪಾಠ, ಪ್ರವಚನ ಇಲ್ಲದಿದ್ದರೂ, ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವಂಥ ಕಾರ್ಯಕ್ರಮಗಳನ್ನು ನಡೆಸಬೇಕು. ಸ್ವಚ್ಛ ಭಾರತ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ವಿದ್ಯಾರ್ಥಿಗಳನ್ನು ಪ್ರೇರೇಪಿಸಬೇಕು ಎಂದು ಅವರು ಆದೇಶದಲ್ಲಿ ಸೂಚಿಸಿದ್ದಾರೆ.

ಉತ್ತರ ಪ್ರದೇಶ ಸರ್ಕಾರದ ಈ ಆದೇಶವನ್ನು ತೀವ್ರವಾಗಿ ಖಂಡಿಸಿರುವ ಪ್ರತಿಪಕ್ಷಗಳು, ಮೋದಿ ಹುಟ್ಟುಹಬ್ಬದ ನೆಪದಲ್ಲಿ ಉತ್ತರ ಪ್ರದೇಶ ಸರ್ಕಾರ ಅವರ ಆರಾಧನೆಗೆ ಮುಂದಾಗಿದೆ ಎಂದು ಟೀಕಿಸಿದ್ದಾರೆ.

ಆದರೆ, ರಾಜ್ಯ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿರುವ ಉತ್ತರ ಪ್ರದೇಶ ಬಿಜೆಪಿ ವಕ್ತಾರ ಚಂದ್ರಮೋಹನ್, ''ಪ್ರಧಾನಿ ಮೋದಿ ಅವರು ಮಕ್ಕಳಿಗೆ ಐಕಾನ್ ಆಗಿದ್ದಾರೆ. ಹಾಗಾಗಿ, ಅವರು ತೋರಿದ ಆದರ್ಶಗಳ ಹಾದಿಯಲ್ಲಿ ನಡೆಯುವಂತೆ ಅವರ ಹುಟ್ಟುಹಬ್ಬದಂದು ಮಕ್ಕಳನ್ನು ಪ್ರೇರಿಪಿಸಲಾಗುವುದು. ಅಲ್ಲದೆ, ಸ್ವಚ್ಛ ಭಾರತದ ಬಗ್ಗೆ ಅವರಲ್ಲಿ ಹೆಚ್ಚಿನ ಅರಿವನ್ನು ಮೂಡಿಸಲಾಗುವುದು'' ಎಂದು ಅವರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+