2021ನೇ ಸಾಲಿನ UPSC ಮುಖ್ಯ ಪರೀಕ್ಷೆ ನಿಗದಿಯಂತೆ ಜ.7ಕ್ಕೆ
ನವದೆಹಲಿ, ಜನವರಿ 6: ಕೋವಿಡ್-19 ಸಾಂಕ್ರಾಮಿಕದ ಹೊಸ ರೂಪಾಂತರಿ ಓಮಿಕ್ರಾನ್‌ನಿಂದ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ಪರಿಶೀಲಿಸಿದ ನಂತರ, ಕೇಂದ್ರ ಲೋಕ ಸೇವಾ ಆಯೋಗ, 2021ರ ನಾಗರಿಕ ಸೇವೆಗಳ (ಮುಖ್ಯ) ಪರೀಕ್ಷೆಯನ್ನು ವೇಳಾಪಟ್ಟಿಯ ಪ್ರಕಾರ ಅಂದರೆ, 2022ರ ಜನವರಿ 7, 8, 9, 15 ಮತ್ತು 16ರಂದು ನಡೆಸಲು ನಿರ್ಧರಿಸಿದೆ.
ಸೋಂಕು ತಡೆಗೆ ಸರ್ಕಾರಗಳು ವಿಧಿಸುತ್ತಿರುವ ನಿರ್ಬಂಧ/ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು, ಆಯೋಗ ತಮ್ಮ ಪ್ರಕ್ರಿಯೆಗೆ ಅಭ್ಯರ್ಥಿಗಳಿಗೆ/ ಪರೀಕ್ಷಾ ಕಾರ್ಯನಿರ್ವಾಹಕರಿಗೆ, ವಿಶೇಷವಾಗಿ ಕಂಟೈನ್ಮೆಂಟ್/ ಮೈಕ್ರೋ ವಲಯದಿಂದ ಬರುವವರಿಗೆ ಯಾವುದೇ ಅನಾನುಕೂಲತೆ ಉಂಟಾಗದಂತೆ ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದೆ. ಕಂಟೈನ್ಮೆಂಟ್ ವಲಯ(ಗಳು) ಮತ್ತು ಅಗತ್ಯವಿದ್ದಲ್ಲಿ, ಅಭ್ಯರ್ಥಿಗಳ ಇ-ದಾಖಲಾತಿ ಕಾರ್ಡ್‌ಗಳನ್ನು ಮತ್ತು ಪರೀಕ್ಷಾ ಕಾರ್ಯನಿರ್ವಾಹಕರ ಗುರುತಿನ ಕಾರ್ಡ್‌ಗಳನ್ನು ಸಂಚಾರದ ವೇಳೆ ಪಾಸ್‌ಗಳಾಗಿ ಬಳಸಬಹುದು ಎಂದಿದೆ.
ಪರೀಕ್ಷೆ ನಡೆಯುವ ದಿನಾಂಕದವರೆಗೆ ಅಂದರೆ 2022.01.06 ರಿಂದ 2022.01.09 ಮತ್ತು 2022.01.14ರಿಂದ 2022.01.16 ರವರೆಗೆ ಪರೀಕ್ಷೆಯ ಒಂದು ದಿನದ ಮೊದಲು ಅಭ್ಯರ್ಥಿಗಳು/ ಪರೀಕ್ಷಾ ಕಾರ್ಯನಿರ್ವಾಹಕರು ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಸಾರ್ವಜನಿಕ ಸಾರಿಗೆಯನ್ನು ಗರಿಷ್ಠ ಮಟ್ಟದಲ್ಲಿ ಕಾರ್ಯನಿರ್ವಹಿಸುವಂತೆ ರಾಜ್ಯ ಸರ್ಕಾರಗಳಿಗೆ ವಿನಂತಿಸಲಾಗಿದೆ.

ಕೋವಿಡ್ ಮಾರ್ಗಸೂಚನೆ:
ಕೋವಿಡ್ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದು, ವೈಯಕ್ತಿಕವಾಗಿ ಅರೋಗ್ಯ ಕಾಪಾಡಿಕೊಳ್ಳುವುದು ಸೇರಿದಂತೆ ಸೂಚಿಸಲಾದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಯುಪಿಎಸ್ಸಿ ತಿಳಿಸಿದೆ.
ಕೋವಿಡ್ ಸೋಂಕು ಹರಡುತ್ತಿರುವ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸಲು ಎಲ್ಲಾ ಸಮರ್ಥ ಜಿಲ್ಲಾಧಿಕಾರಿಗಳು ಮತ್ತು ಸ್ಥಳ ಮೇಲ್ವಿಚಾರಕರಿಗೆ ಆಯೋಗದ ಮಾರ್ಗಸೂಚಿಗಳನ್ನು ಒದಗಿಸಲಾಗಿದೆ. ಈ ಮಾರ್ಗಸೂಚಿಗಳು ಮುಖ್ಯವಾಗಿ ಅಭ್ಯರ್ಥಿಗಳು/ ಪರೀಕ್ಷಾ ಕಾರ್ಯನಿರ್ವಾಹಕರಗಳ ವೈಯಕ್ತಿಕ ನೈರ್ಮಲ್ಯ, ವೈಕ್ತಿಗತ ಅಂತರವನ್ನು ಕಾಪಾಡಿಕೊಳ್ಳುವುದು ಮತ್ತು ಅಭ್ಯರ್ಥಿಗಳು ಹಾಗೂ ಪರೀಕ್ಷಾ ಕಾರ್ಯನಿರ್ವಾಹಕರು ಸದಾ ಮುಖ ಗವಸನ್ನು ಧರಿಸುವುದನ್ನು ಒಳಗೊಂಡಿರುತ್ತದೆ.
ಸ್ಥಳದ ಅನುಕೂಲಕರ ಸ್ಥಳಗಳಲ್ಲಿ ಸ್ಯಾನಿಟೈಜರ್‌ಗಳನ್ನು ಒದಗಿಸುವುದು ಮತ್ತು ಪ್ರತಿ ಸ್ಥಳವನ್ನು ನಿಯಮಿತವಾಗಿ ಸ್ಯಾನಿಟೈಸೇಶನ್ ಮಾಡಲು ಪರೀಕ್ಷಾ ಪದಾಧಿಕಾರಿಗಳು, ಅಭ್ಯರ್ಥಿಗಳು ತಮ್ಮ ಸ್ವಂತ ಸ್ಯಾನಿಟೈಜರ್‌ಗಳನ್ನು ಪಾರದರ್ಶಕ ಬಾಟಲಿಗಳಲ್ಲಿ ಕೊಂಡೊಯ್ಯುಲು ಅವಕಾವಿದೆ. ಕೆಮ್ಮುವಿಕೆ, ಸೀನುವಿಕೆ, ಉಸಿರಾಟದ ತೊಂದರೆ, ಜ್ವರದಿಂದ ಬಳಲುತ್ತಿರುವ ಅಭ್ಯರ್ಥಿಗಳಿಗೆ ಇರುವ ಎರಡು ಹೆಚ್ಚುವರಿ ಪರೀಕ್ಷಾ ಕೊಠಡಿಗಳಲ್ಲಿ ಸೂಕ್ತ ಸುರಕ್ಷತಾ ನಿಯಮಗಳ ಅಡಿಯಲ್ಲಿ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು.
ಪರಿಶೀಲನೆ ಸಮಯದಲ್ಲಿ ಅಭ್ಯರ್ಥಿಗಳು ಮಾಸ್ಕ್ ತೆಗೆಯಬೇಕೆಂದು ಅಧಿಕಾರಿಗಳು ಸೂಚಿಸಿದರೆ ತೆಗೆದು ಸಹಕರಿಸಬೇಕು ಎಂದು ಸೂಚಿಸಲಾಗಿದೆ. ಮಾಸ್ಕ್ ಧರಿಸದಿದ್ದರೆ ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರದೊಳಗೆ ಅಭ್ಯರ್ಥಿಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಲಾಗಿದೆ.
ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆಗಳು 3 ಹಂತಗಳಲ್ಲಿ ನಡೆಯಲಿವೆ. ಈ ಸೇವೆಗಳಿಗೆ ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ, ಮುಖ್ಯಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಐಎಎಸ್, ಐಪಿಎಸ್, ಐಎಫ್ಎಸ್ ಮುಂತಾದ ಹುದ್ದೆಗಳಿಗೆ ಈ ಪರೀಕ್ಷೆಯ ಮೂಲಕವೇ ನೇಮಕಾತಿ ನಡೆಯುತ್ತದೆ.
ಕೋವಿಡ್ ಕಾರಣದಿಂದ 2020ರಲ್ಲಿ ಸತತವಾಗಿ ನಾಲ್ಕು ಬಾರಿ ಪರೀಕ್ಷೆ ರದ್ದು ಪಡಿಸಿ, ಮುಂದೂಡಲಾಗಿತ್ತು. ನಂತರ 2021ರ ಜೂನ್ 27ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಅಕ್ಟೋಬರ್ 10ರಂದು ನಡೆಸಲಾಗಿತ್ತು. ಕೊರೊನಾ ಸೋಂಕಿನ ಕಾರಣದಿಂದಾಗಿ 2020ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) ಪರೀಕ್ಷೆ ಬರೆಯುವ ತಮ್ಮ ಕೊನೆಯ ಅವಕಾಶದಿಂದ ವಂಚಿತರಾದ ಅಭ್ಯರ್ಥಿಗಳಿಗೆ ಪರೀಕ್ಷೆ ತೆಗೆದುಕೊಳ್ಳಲು ಮತ್ತೊಂದು ಅವಕಾಶ ನೀಡಲಾಗಿತ್ತು.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications