ದೇಶೀಯ ವಿಮಾನಗಳ ಕಾರ್ಯಾಚರಣೆ: ಶೇ.70ರಿಂದ 80ಕ್ಕೆ ಏರಿಕೆ

ನವದೆಹಲಿ, ಡಿಸೆಂಬರ್ 03: ದೇಶೀಯ ವಿಮಾನಗಳ ಕಾರ್ಯಾಚರಣೆಯನ್ನು ಶೇ.70 ರಿಂದ ಶೇ.80ಕ್ಕೆ ಹೆಚ್ಚಿಸಲಾಗಿದೆ.

ಕೇಂದ್ರ ಸರ್ಕಾರ ಗುರುವಾರ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಸಿಹಿ ಸುದ್ದಿ ನೀಡಿದ್ದು, ಕೋವಿಡ್ ನಂತರ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದ್ದ ದೇಶೀಯ ವಿಮಾನಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ.

ಕೊರೊನಾ ವೈರಸ್ ನಡುವೆಯೂ ದೇಶಿಯ ಪ್ರಯಾಣಿಕ ವಿಮಾನಗಳಿಗೆ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ನವೆಂಬರ್ 11ರಂದು ಶೇ. 70 ರಷ್ಟು ವಿಮಾನಗಳ ಕಾರ್ಯಾಚರಣೆಗೆ ಅನುಮತಿ ನೀಡಲಾಗಿತ್ತು. ಇದೀಗ ಅದನ್ನು ಶೇ. 80ಕ್ಕೆ ಹೆಚ್ಚಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

Aviation Ministry Increases Cap On Domestic Flights From 70% To 80%

ಕೊರೊನಾ ಲಾಕ್ ಡೌನ್ ನಂತರ ಮೇ 25 ರಂದು ದೇಶಿಯ ವಿಮಾನ ಸಂಚಾರ ಪುನರಾರಂಭಗೊಂಡಾಗ ಶೇ. 33 ರಷ್ಟು ವಿಮಾನಗಳ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಜೂನ್ ಶೇ.45ಕ್ಕೆ, ಸೆಪ್ಟೆಂಬರ್ ನಲ್ಲಿ ಶೇ. 60ಕ್ಕೆ ಹಾಗೂ ನವೆಂಬರ್ ನಲ್ಲಿ ಶೇ. 70ಕ್ಕೆ ಹೆಚ್ಚಿಸಲಾಗಿತ್ತು.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಪುರಿ ಅವರು, ಮೇ 25 ರಂದು 30 ಸಾವಿರ ಪ್ರಯಾಣಿಕರೊಂದಿಗೆ ದೇಶೀಯ ವಿಮಾನಯಾನ ಪುನರಾರಂಭಗೊಂಡಿತ್ತು. ಈಗ ಅದು 2.52 ಲಕ್ಷಕ್ಕೆ ತಲುಪಿದೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+