ಜನವರಿ 04ರಿಂದ ಸುಪ್ರೀಂಕೋರ್ಟಿನಲ್ಲಿ ಅಯೋಧ್ಯ ವಿವಾದ ವಿಚಾರಣೆ

ನವದೆಹಲಿ, ಡಿಸೆಂಬರ್ 24: ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಾಯ್ ಹಾಗೂ ಜಸ್ಟೀಸ್ ಎಸ್ ಕೆ ಕೌಲ್ ಅವರಿರುವ ನ್ಯಾಯಪೀಠವು ಜನವರಿ 04ರಿಂದ ಆಯೋಧ್ಯೆ ವಿವಾದ ಸಂಬಂಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಲಿದೆ.

ಆಯೋಧ್ಯೆ ವಿವಾದದ ನ್ಯಾಯದಾನದಲ್ಲಿ ವಿಳಂಬವಾಗುತ್ತಿದೆ ಮತ್ತು ತ್ವರಿತಗತಿಯಲ್ಲಿ ವಿಚಾರಣೆ ನಡೆಸುವಂತೆ ಕೋರಿ ಉತ್ತರಪ್ರದೇಶ ಸರ್ಕಾರವು ಸಲ್ಲಿಸಿದ್ದ ಅರ್ಜಿಯನ್ನು ಕಳೆದ ಅಕ್ಟೋಬರ್​ನಲ್ಲಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, " ಯಾವ ವಿಚಾರಕ್ಕೆ ಎಷ್ಟು ಪ್ರಾಮುಖ್ಯತೆ ನೀಡಬೇಕು ಎಂಬುದು ನ್ಯಾಯಾಲಯಕ್ಕೆ ತಿಳಿದಿದೆ," ಎಂದು ಹೇಳಿತ್ತು.

ಕೇವಲ ನಾಲ್ಕೇ ನಿಮಿಷಗಳಲ್ಲಿ ತನ್ನ ಅಭಿಪ್ರಾಯ ತಿಳಿಸಿ, ಜನವರಿಯಿಂದ ವಿವಾದದ ವಿಚಾರಣೆ ನಡೆಸುವುದಾಗಿ ತಿಳಿಸಿತ್ತು.

Ayodhya case to be heard by Supreme Court on Jan 4

ರಾಮ ಮಂದಿರ ನಿರ್ಮಾಣಕ್ಕಾಗಿ ಸುಗ್ರೀವಾಜ್ಞೆ ಜಾರಿಗೆ ತರುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಕೇಳಿ ಬಂದಿದೆ. ಸಂಘ ಪರಿವಾರ, ಹಿಂದೂ ಸಂಘಟನೆಗಳು ಸುಗ್ರೀವಾಜ್ಞೆ ಅಥವಾ ಕಾನೂನನ್ನು ಜಾರಿಗೆ ಒತ್ತಾಯಿಸಿವೆ.

ರಾಮ ಮಂದಿರ ನಿರ್ಮಾಣದ ದಿನಾಂಕವನ್ನು ಕೇಂದ್ರ ಸರ್ಕಾರ ಪ್ರಕಟಿಸಬೇಕು ಎಂಬ ನಿರ್ಣಯವನ್ನೂ ಇತ್ತೀಚೆಗೆ ನಡೆದಿದ್ದ ಧರ್ಮ ಸಂಸತ್​ನಲ್ಲಿ ಕೈಗೊಳ್ಳಲಾಗಿತ್ತು.

2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ. ಈ ಪ್ರಕರಣ ವಿಚಾರಣೆಯನ್ನು ಪ್ರತಿದಿನ ನಡೆಸಿದರೆ ಒಳ್ಳೆಯದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅಭಿಪ್ರಾಯಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+