• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಆಯೋಧ್ಯಾ ಪ್ರಕರಣ: ನ.17ರಂದು ತೀರ್ಪು ಹೊರಬರದಿದ್ದರೆ ಮುಂದೇನು?

|

ನವದೆಹಲಿ, ಅಕ್ಟೋಬರ್ 16: ಅಯೋಧ್ಯೆಯಲ್ಲಿರುವ ರಾಮಜನ್ಮ ಭೂಮಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 40 ದಿನಗಳ ನಡೆದ ಪ್ರತಿದಿನ ವಿಚಾರಣೆ ಅಕ್ಟೋಬರ್ 16ಕ್ಕೆ ಅಂತ್ಯಗೊಳ್ಳುತ್ತಿದೆ. ವಿಚಾರಣೆ ಅಂತ್ಯಗೊಂಡ ಬಳಿಕ ನಾಲ್ಕು ವಾರಗಳಲ್ಲಿ ಅಂತಿಮ ತೀರ್ಪು ನೀಡುವುದಾಗಿ ಪಂಚ ಸದಸ್ಯರ ನ್ಯಾಯಪೀಠ ಹೇಳಿದೆ.

ಜಸ್ಟೀಸ್ ಬೊಬ್ಡೆ ಅವರಲ್ಲದೆ, ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ಜಸ್ಟೀಸ್ ಚಂದ್ರಚೂಡ್, ಜಸ್ಟೀಸ್ ಭೂಷಣ್, ಜಸ್ಟೀಸ್ ಅಬ್ದುಲ್ ನಜೀರ್ ಅವರನ್ನೊಳಗೊಂಡ ನ್ಯಾಯಪೀಠವು, ಅಕ್ಟೋಬರ್ 17ರೊಳಗೆ ಈ ಕೇಸಿಗೆ ಸಂಬಂಧಿಸಿದ ಎಲ್ಲಾ ವಿಚಾರಣೆಯನ್ನು ಅಂತಿಮಗೊಳಿಸಲಿದೆ. ನವೆಂಬರ್ 4-5ರಂದು ಅಂತಿಮ ತೀರ್ಪು ಹೊರ ಬೀಳುವ ಸಾಧ್ಯತೆಯಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ನವೆಂಬರ್ 17ರಂದು ನಿವೃತ್ತಿ ಹೊಂದುತ್ತಿರುವುದರಿಂದ ನ.17ರ ತನಕ ತೀರ್ಪಿಗೆ ಕಾಯಬಹುದಾಗಿದೆ.

25 ವರ್ಷಗಳ ಬಾಬ್ರಿ ಮಸೀದಿ ವಿವಾದ, ಟೈಮ್ ಲೈನ್

ಆದರೆ, ನ.17ರಂದು ತೀರ್ಪು ನೀಡದಿದ್ದರೆ ಮುಂದೇನು? ಎಂಬ ಪ್ರಶ್ನೆ ಸಹಜವಾಗಿ ಮೂಡಿದೆ. ಪಂಚ ಸದಸ್ಯರ ನ್ಯಾಯಪೀಠದ ನೇತೃತ್ವ ವಹಿಸಿರುವ ನ್ಯಾ. ರಂಜನ್ ಗೊಗಾಯ್ ಅವರು ನಿವೃತ್ತರಾದ ಬಳಿಕವೂ ಅಂತಿಮ ತೀರ್ಪು ಹೊರಬೀಳದೆ ವಿಚಾರಣೆ ಮುಂದುವರೆಸುವ ಪ್ರಮೇಯ ಎದುರಾದರೆ, ಅಂಥ ಸಂದರ್ಭದಲ್ಲಿ ಈ ಪ್ರಕರಣದ ವಿಚಾರಣೆಯನ್ನು ಮತ್ತೊಂದು ನ್ಯಾಯಪೀಠಕ್ಕೆ ವರ್ಗಾಯಿಸಲಾಗುತ್ತದೆ.

ಹೊಸ ನ್ಯಾಯಪೀಠವನ್ನು ಪುನರ್ ರಚಿಸಿ, ಮತ್ತೊಮ್ಮೆ ವಿಚಾರಣೆ ನಡೆಸಬೇಕಾಗುತ್ತದೆ. ಅಥವಾ ಸುಪ್ರೀಂಕೋರ್ಟಿನ ನಿರ್ದೇಶನದಂತೆ ಮೂವರು ಸದಸ್ಯರ ಸಂಧಾನಕಾರರ ಜೊತೆ ಮತ್ತೊಮ್ಮೆಈ ಭೂ ವ್ಯಾಜ್ಯವನ್ನು ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ.

ಏನಿದು ಪ್ರಕರಣ?: 1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಮಯದಲ್ಲಿ ಒಟ್ಟು 67 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಅದರಲ್ಲಿ ಕೇವಲ 2.7 ಎಕರೆ ಭೂಮಿಯಷ್ಟೇ ವಿವಾದಾತ್ಮಕ ಸ್ಥಳವಾಗಿದ್ದು, ಉಳಿದವು ವಿವಾದಮುಕ್ತವಾಗಿವೆ. ಆದ್ದರಿಂದ ಈ ಭೂಮಿಯ ವಾರಸುದಾರರಾದ ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಅದನ್ನು ಹಿಂದಿರುಗಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿತ್ತು.

2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ. 2010ರ ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ 14ಕ್ಕೂ ಅಧಿಕ ಮೇಲ್ಮನವಿಯನ್ನು ಸುಪ್ರೀಂಕೋರ್ಟಿನಲ್ಲಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ಅಂತಿಮ ಹಂತ ತಲುಪಿದ್ದು, ತೀರ್ಪು ಹೊರಬೀಳಬೇಕಿದೆ.

English summary
The Supreme Court said that it hopes to complete hearing in the Ayodhya case by October 16, 2019.What if it drags on until November and the Bench is unable to complete it.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X