ಅಯೋಧ್ಯೆ ವಿವಾದ: ಸುಪ್ರೀಂಕೋರ್ಟ್ ನಲ್ಲಿ ಇಂದು ವಿಚಾರಣೆ

ನವದೆಹಲಿ, ಅಕ್ಟೋಬರ್ 29: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಇಂದು(ಅ.29) ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ.

2010 ರಲ್ಲಿ ಅಯೋಧ್ಯೆ ಜಮೀನನ್ನು ಮೂರು ಭಾಗಗಳಾಗಿ ವಿಂಗಡಿಸಿ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿತ್ತು.

ಮೊಘಲ್ ದೊರೆ ಬಾಬರ್ ಅವರು ಅಯೋಧ್ಯಾದಲ್ಲಿ 1528ರಲ್ಲಿ ಬಾಬ್ರಿ ಮಸೀದಿ ನಿರ್ಮಿಸಿದ್ದ . ಡಿಸೆಂಬರ್ 06,1992ರಂದು ಬಾಬ್ರಿ ಮಸೀದಿಯನ್ನು ಹಿಂದೂ ಕಾರ್ಯಕರ್ತರು ಕೆಡವಿದರು ಎಂಬ ಆರೋಪವಿದೆ. ಈ ವಿವಾದಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಿಸಲು ಹಿಂದೂ ಪರ ಸಂಘಟನೆಗಳು ಮುಂದಾಗಿದ್ದು, ಇದಕ್ಕೆ ಮುಸ್ಲಿಂ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ.

Ayodhya dispute: Supreme Court to hear plea challenging HS verdict

ಅಯೋಧ್ಯೆಯಲ್ಲಿನ ವಿವಾದಿತ ಜಾಗ(2.77 ಎಕರೆ)ದ ಮೇಲೆ ಹಿಂದೂ(ರಾಮ್ ಲಲ್ಲಾ), ಮುಸ್ಲಿಂ(ಸುನ್ನಿ ವಕ್ಫ್ ಮಂಡಳಿ) ಹಾಗೂ ನಿರ್ಮೋಹಿ ಅಖಾರಕ್ಕೆ ಸಮಾನವಾದ ಅಧಿಕಾರವಿದೆ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿತ್ತು. ಆದರೆ ಈ ತೀರ್ಪನ್ನು ವಿರೋಧಿಸಿ ಸಲ್ಲಿಸಿದ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಕೊಳ್ಳುತ್ತಿದೆ.

ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠ ಈ ಅರ್ಜಿಯ ವಿಚಾರಣೆ ನಡೆಸಲಿದೆ.

ನಮಾಜ್ ಮಾಡಲು ಮಸೀದಿಯೇ ಆಗಬೇಕೆಂದೇನಿಲ್ಲ ಎಂದು 1994ರ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ಇತ್ತೀಚೆಗಷ್ಟೇ ಸುಪ್ರೀಂಕೋರ್ಟ್ ಎತ್ತಿಹಿಡಿದಿತ್ತು. ಜೊತೆಗೆ ಈ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸುವ ಅಗತ್ಯವಿಲ್ಲ ಎಂದು ತೀರ್ಮಾನಿಸಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+