Ayodhya: ರಾಮ ಮಂದಿರದ ಆವರಣದಲ್ಲಿ ಮೊಬೈಲ್ ಫೋನ್ ಸೇರಿದಂತೆ ಕೆಲ ವಸ್ತುಗಳಿಗೆ ನಿಷೇಧ!
ಅಯೋಧ್ಯೆಯ ರಾಮಲಾಲ ದರ್ಶನಕ್ಕೆ ತೆರಳುವ ಭಕ್ತರು ಮೊಬೈಲ್ ಫೋನ್ ಬಳಸುವಂತಿಲ್ಲ. ಹೌದು... ರಾಮಮಂದಿರ ಆವರಣದಲ್ಲಿ ಮೊಬೈಲ್ ಫೋನ್‌ಗಳಿಗೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಮಾಹಿತಿಯನ್ನು ಶ್ರೀರಾಮ ಮಂದಿರ ಟ್ರಸ್ಟ್ ಹಂಚಿಕೊಂಡಿದೆ.
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯ ಅನಿಲ್ ಮಿಶ್ರಾ ಅವರು ಈ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಆಡಳಿತದೊಂದಿಗೆ ಟ್ರಸ್ಟ್‌ನ ಸಭೆ ನಡೆದಿತ್ತು. ಈ ಸಭೆಯಲ್ಲಿ ಪ್ರಯಾಣಿಕರ ಸುರಕ್ಷತೆ ಮತ್ತು ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಆಡಳಿತ ಮಂಡಳಿ ಮತ್ತು ಟ್ರಸ್ಟ್ ಒಟ್ಟಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಹೀಗಾಗಿ ಇನ್ನುಮುಂದೆ ಜನರು ಮೊಬೈಲ್ ಫೋನ್‌ಗಳೊಂದಿಗೆ ರಾಮ ಮಂದಿರದ ಆವರಣಕ್ಕೆ ಹೋಗುವಂತಿಲ್ಲ. ಶ್ರೀರಾಮನ ಎಲ್ಲಾ ಸಂದರ್ಶಕರಿಗೆ ಈ ವ್ಯವಸ್ಥೆಯನ್ನು ಅನುಸರಿಸಲು ವಿನಂತಿಸಲಾಗಿದೆ. ಯಾರೂ ಯಾವುದೇ ರೀತಿಯ ಅನಾನುಕೂಲತೆಯನ್ನು ಎದುರಿಸದಂತೆ ಸಹಕರಿಸಲು ಟ್ರಸ್ಟ್ ಮೊಬೈಲ್ ಫೋನ್‌ಗಳನ್ನು ಇಡಲು ಸ್ಥಳಾವಕಾಶ ನೀಡಿದೆ. ಅಲ್ಲದೆ ರಾಮಮಂದಿರದ ಆವರಣದೊಳಗೆ ಪ್ರವೇಶಿಸುವಾಗ ಮೊಬೈಲ್ ಸೇರಿದಂತೆ ಕೆಲ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ.
ಇವುಗಳನ್ನು ಇಡಲು ಮಂದಿರ ಪ್ರವೇಶಕ್ಕೂ ಮುನ್ನ ವ್ಯವಸ್ಥೆ ಮಾಡಲಾಗಿದೆ. ಭಕ್ತರು ನಿಗಧಿತ ಸ್ಥಳದಲ್ಲಿ ಆ ವಸ್ತುಗಳನ್ನು ಇಟ್ಟು ರಾಮಮಂದಿರದ ಆವರಣ ಪ್ರವೇಶಿಸಬೇಕಾಗುತ್ತದೆ. ಹಾಗಾದರೆ ಮೊಬೈಲ್ ಜೊತೆಗೆ ಯಾವ ವಸ್ತುಗಳನ್ನು ರಾಮ ಮಂದಿರದ ಆವರಣದೊಳಗೆ ತೆಗೆದುಕೊಂಡು ಹೋಗುವಂತಿಲ್ಲ ಎಂದು ತಿಳಿಯೋಣ.
ದೇವಾಲಯದಲ್ಲಿ ಈ ವಸ್ತುಗಳಿಗೆ ನಿಷೇಧ..
*ಮಾರ್ಗಸೂಚಿಗಳ ಪ್ರಕಾರ, ರಾಮ ಮಂದಿರದಲ್ಲಿ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಗ್ಯಾಜೆಟ್ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ.
*ಜೊತೆಗೆ ಚರ್ಮದ ಬೆಲ್ಟ್ ಮತ್ತು ತೊಗಲಿನ ಚೀಲಗಳನ್ನು ಒಯ್ಯುವುದನ್ನು ಸಹ ನಿಷೇಧಿಸಲಾಗಿದೆ.
*ಭಕ್ತರು ಅನೇಕ ಸ್ಥಳಗಳಲ್ಲಿ ಭದ್ರತಾ ತಪಾಸಣೆಯ ಪ್ರಕ್ರಿಯೆಯ ಮೂಲಕ ಮಂದಿರದ ಒಳಗೆ ಹೋಗಬೇಕು.

*ಮಂದಿರ ಪ್ರವೇಶಕ್ಕೂ ಮುನ್ನ ಲಾಕರ್ ಕೋಣೆಗಳು ಇದ್ದು ಅಲ್ಲಿ ನೀವು ನಿಮ್ಮ ಎಲ್ಲಾ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ಇಡಬಹುದು.
*ರಾಮಲಾಲ ದರ್ಶನಕ್ಕೆ ಯಾವುದೇ ರೀತಿಯ ಶುಲ್ಕವನ್ನು ಪಾವತಿಸಲಾಗುವುದಿಲ್ಲ ಅಥವಾ ಯಾವುದೇ ಸ್ಲಿಪ್ ಇತ್ಯಾದಿಗಳ ಅಗತ್ಯವಿರುವುದಿಲ್ಲ.
* ಆದರೆ ಆರತಿಗೆ ಪಾಸ್ ಅಗತ್ಯವಿದೆ.
*ದೇವಾಲಯವನ್ನು ಪ್ರವೇಶಿಸಲು ಯಾವುದೇ ಅನುಮತಿ ಅಥವಾ ಪಾಸ್ ಅಗತ್ಯವಿಲ್ಲ.
*ರಾಮಲಾಲಾಗೆ ಮಾಲೆ, ಹೂವು, ತೆಂಗಿನಕಾಯಿ, ಪ್ರಸಾದ ಅಥವಾ ಇತರ ಯಾವುದೇ ನೈವೇದ್ಯವನ್ನು ತೆಗೆದುಕೊಳ್ಳಲು ಅನುಮತಿಸಲಾಗುವುದಿಲ್ಲ.
*ದರ್ಶನದ ನಂತರ ಭಕ್ತರಿಗೆ ಪ್ರಸಾದ ದೊರೆಯಲಿದೆ.
-
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ -
ಯುಪಿಎಸ್ಸಿ 2025 ಫಲಿತಾಂಶ ಪ್ರಕಟ: ಪಾಸಾದವರು 958 ಆಕಾಂಕ್ಷಿಗಳು, ಅರ್ಜಿ ಹಾಕಿದ್ದವರು 10 ಲಕ್ಷ ಮಂದಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ












Click it and Unblock the Notifications