ಬಾಹುಬಲಿ ನಿರ್ದೇಶಕ ರಾಜಮೌಳಿ ಹಾಗೂ ಕುಟುಂಬ ಸದಸ್ಯರಿಗೆ ಕೊರೊನಾ ಸೋಂಕು

ಹೈದರಾಬಾದ್, ಜುಲೈ 30: ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್.ಎಸ್.ರಾಜಮೌಳಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊರೊನಾ ಸೋಂಕು ತಗುಲಿದೆ. ಈ ವಿಚಾರವನ್ನು ಖುದ್ದು ಬಾಹುಬಲಿ ನಿರ್ದೇಶಕ ರಾಜಮೌಳಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಜಮೌಳಿ, ನನಗೆ ಮತ್ತು ನನ್ನ ಕುಟುಂಬದ ಸದಸ್ಯರಿಗೆ ಕೆಲ ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ನಂತರ ದಿನಗಳಲ್ಲಿ ಔಷಧಿಯಿಂದ ಜ್ವರವು ಕಡಿಮೆಯಾದರೂ ಕೋವಿಡ್-19 ಟೆಸ್ಟ್ ಮಾಡಿಸಿದ್ದೆವು.

ಇನ್ನು ನಮ್ಮಲ್ಲಿ ಯಾವುದೇ ಕೊರೊನಾ ಲಕ್ಷಣಗಳು ಕಂಡು ಬರಲಿಲ್ಲ ಎಂದಿರುವ ರಾಜಮೌಳಿ, ಅದಾಗ್ಯೂ ಸರ್ಕಾರದ ಸೂಚನೆಯಂತೆ ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸುತ್ತಿದ್ದೇವೆ ಎಂದಿದ್ದಾರೆ.
ಇದೀಗ ಅದರ ಫಲಿತಾಂಶ ಬಂದಿದ್ದು, ಕೊರೊನಾ ಸೋಂಕು ತಗುಲಿರುವುದು ದೃಢ​ ಆಗಿದೆ. ಹೀಗಾಗಿ ನಾವೆಲ್ಲರೂ ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್​ನಲ್ಲಿರುವುದಾಗಿ ತಿಳಿಸಿದ್ದಾರೆ.

Baahubali Director SS Rajamouli And His Family Test Positive For COVID-19

ಈಗ ಹೈದಾರಾಬಾದ್​ನಲ್ಲಿ ನೆಲೆಸಿರುವ ಎಸ್​ಎಸ್​ ರಾಜಮೌಳಿ, ಮತ್ತೆ ಬಿಗ್ ಬಜೆಟ್ ಚಿತ್ರ ಆರ್​ಆರ್​ಆರ್ ಕೆಲಸವನ್ನು ಪುನರಾರಂಭಿಸಲು ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಇದೇ ವೇಳೆ ಕೊರೊನಾ ಸೋಂಕು ತಗುಲಿರುವುದು ಗೊತ್ತಾಗಿದ್ದು, ಹೀಗಾಗಿ ಸಿನಿಮಾ ಕೆಲಸಗಳು ಮತ್ತಷ್ಟು ಮುಂದಕ್ಕೆ ಹೋಗಲಿದೆ.

ದೇಹದಲ್ಲಿ ಪ್ರತಿಕಾಯಗಳು ಅಭಿವೃದ್ಧಿಹೊಂದಲು ಕಾಯುತ್ತಿದ್ದೇನೆ. ಶೀಘ್ರವೇ ಪ್ಲಾಸ್ಮಾ ದಾನ ಮಾಡಲಿದ್ದೇನೆ ಎಂದು ರಾಜಮೌಳಿ ತಿಳಿಸಿದ್ದಾರೆ.

ಈ ಸಿನಿಮಾದಲ್ಲಿ ಟಾಲಿವುಡ್ ಸೂಪರ್​ಸ್ಟಾರ್​ಗಳಾದ ಜೂ.ಎನ್​ಟಿಆರ್ ಮತ್ತು ರಾಮ್ ಚರಣ್ ತೇಜ ಇದೇ ಮೊದಲ ಬಾರಿ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

450 ಕೋಟಿ ರೂ.ಗಳ ಬಜೆಟ್‌ ನಿರ್ಮಾಣವಾಗುತ್ತಿರುವ ಈ ಚಿತ್ರವು ಭಾರತದ ಅತ್ಯಂತ ದುಬಾರಿಯ ಸಿನಿಮಾ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಎಲ್ಲವೂ ಅಂದು ಕೊಂಡಂತೆ ಮುಂದುವರೆದರೆ 2021 ರ ಜನವರಿ 8 ರಂದು ಆರ್​ಆರ್​​ಆರ್ ಬಿಡುಗಡೆಯಾಗಲಿದೆ. ಆದರೆ 2021ಕ್ಕೆ ಬಿಡುಗಡೆಯಾಗುವುದು ಅನುಮಾನ ಎಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+