ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಇದರಿಂದ: ಬಾಬ್ರಿ ಮಸೀದಿ ತೀರ್ಪಿಗೆ ಓವೈಸಿ ಪ್ರತಿಕ್ರಿಯೆ
ನವದೆಹಲಿ, ಸೆಪ್ಟೆಂಬರ್ 30: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೋದ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ ತೀರ್ಪಿನ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತೀರ್ಪು ಪ್ರಕಟವಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಓವೈಸಿ, 1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ನ್ಯಾಯವನ್ನು ನಿರಾಕರಿಸಲಾಗಿದೆ ಎಂದು ತೀರ್ಪಿನ ಬಗ್ಗೆ ಕಿಡಿಕಾರಿದರು.
ಮಸೀದಿ ಧ್ವಂಸ ಕೃತ್ಯದಲ್ಲಿ ಬಿಜೆಪಿ ಹಿರಿಯ ಮುಖಂಡರಾದ ಎಲ್‌ಕೆ ಅಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾಭಾರತಿ, ವಿನಯ್ ಕಟಿಯಾರ್, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಸೇರಿದಂತೆ ಎಲ್ಲ 32 ಆರೋಪಿಗಳ ವಿರುದ್ಧ ಸೂಕ್ತ ಸಾಕ್ಷ್ಯ ಇಲ್ಲ ಎಂದು ಹೇಳಿದ ಸಿಬಿಐ ನ್ಯಾಯಾಧೀಶ ಎಸ್.ಕೆ. ಯಾದವ್, ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದರು.
ಸಿಬಿಐ ವಿಶೇಷ ನ್ಯಾಯಾಲಯವು ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸಿದೆ. ಇದು ಪೂರ್ವ ನಿಯೋಜಿತ ಸಂಚಲ್ಲ. ಆರೋಪಿಗಳ ವಿರುದ್ಧದ ಸೂಕ್ತ ಪುರಾವೆಗಳಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇದು ವಿರೋಧ ಪಕ್ಷಗಳ ಟೀಕೆಗೆ ಒಳಗಾಗಿದೆ. ಹಾಗಾದರೆ ಮಸೀದಿ ತಾನಾಗಿಯೇ ಬಿದ್ದಿತೇ? ಅಲ್ಲಿ ಭೂಕಂಪ ಸಂಭವಿಸಿತ್ತೇ? ಎಂದು ಪ್ರಶ್ನಿಸಿದ್ದಾರೆ. ಮುಂದೆ ಓದಿ...

ಎಷ್ಟು ತಿಂಗಳ ಸಿದ್ಧತೆ ಬೇಕು?
'ಇದು ಭಾರತೀಯ ನ್ಯಾಯಾಂಗದ ಇತಿಹಾಸದಲ್ಲಿ ಖೇದಕರ ದಿನ. ಅಲ್ಲಿ ಯಾವುದೇ ಸಂಚು ನಡೆದಿರಲಿಲ್ಲ ಎಂದು ನ್ಯಾಯಾಲಯ ಹೇಳಿದೆ. ಆ ಕ್ಷಣದಲ್ಲಿ ನಡೆದ ಕೃತ್ಯವನ್ನು ಅನರ್ಹಗೊಳಿಸಲು ಎಷ್ಟು ತಿಂಗಳ ಕಾಲ ಸಿದ್ಧತೆ ನಡೆಸಬೇಕಾಗುತ್ತದೆ ಎಂದು ನನಗೆ ತಿಳಿವಳಿಕೆ ನೀಡಿ' ಎಂದು ಓವೈಸಿ ವ್ಯಂಗ್ಯವಾಡಿದರು.

ನ್ಯಾಯಾಂಗಕ್ಕೆ ಕರಾಳ ದಿನ
ಸಿಬಿಐ ನ್ಯಾಯಾಲಯ ನೀಡಿದ ತೀರ್ಪು ಭಾರತೀಯ ನ್ಯಾಯಾಂಗಕ್ಕೆ ಕರಾಳ ದಿನ. ಏಕೆಂದರೆ ನಾಗರಿಕ ಆಸ್ತಿ ವಿವಾದವು ಕಾನೂನು ನಿಯಮದ ತೀವ್ರ ಉಲ್ಲಂಘನೆ ಮತ್ತು ಆರಾಧನೆಯ ಸಾರ್ವಜನಿಕ ಸ್ಥಳವನ್ನು ಹಾನಿ ಮಾಡುವುದು ಸಿದ್ಧತೆಯೊಂದಿಗೆ ಮಾಡಿದ ಕೃತ್ಯ ಎಂದು ಈಗಾಗಲೇ ಸುಪ್ರೀಂಕೋರ್ಟ್ ಹೇಳಿದೆ ಎಂದು ಹೇಳಿದರು.

ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಇದರಿಂದ
'ಇದು ನ್ಯಾಯದ ವಿಷಯ. ಬಾಬ್ರಿ ಮಸೀದಿ ಧ್ವಂಸಕ್ಕೆ ಕಾರಣರಾದ ಜನರಿಗೆ ಶಿಕ್ಷೆಯಾಗಬೇಕು ಎನ್ನುವುದು ಖಾತರಿಯಾಗಬೇಕದ್ದ ವಿವಾದ. ಆದರೆ ಅವರನ್ನು ಈ ಹಿಂದೆ ಗೃಹ ಸಚಿವ ಮತ್ತು ಮಾನವ ಸಂಪನ್ಮೂಲ ಸಚಿವರನ್ನಾಗಿ ಮಾಡುವ ಮೂಲಕ ರಾಜಕೀಯವಾಗಿ ಬಹುಮಾನ ನೀಡಲಾಗಿತ್ತು. ಈ ವಿವಾದದ ಕಾರಣದಿಂದಲೇ ಈಗ ಬಿಜೆಪಿ ಅಧಿಕಾರದಲ್ಲಿದೆ' ಎಂದು ಆರೋಪಿಸಿದರು.

ನ್ಯಾಯದ ಅಣಕ
'ಇದು ನ್ಯಾಯದ ಸಂಪೂರ್ಣ ಅಣಕವಾಗಿದೆ. ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಕ್ರಿಮಿನಲ್ ಸಂಚು ಆರೋಪ ಹೊತ್ತಿದ್ದ ಎಲ್ಲರನ್ನೂ ಖುಲಾಸೆಗೊಳಿಸಲಾಗಿದೆ. ಹಾಗಾದರೆ ಮಸೀದಿ ತಾನಾಗಿಯೇ ಸ್ಫೋಟಗೊಂಡಿತೇ? ಹಿಂದಿನ ಸಿಜೆಐ ನೇತೃತ್ವದ ಸಾಂವಿಧಾನಿಕ ಪೀಠವು, ಧ್ವಂಸ ಕೃತ್ಯ ಕಾನೂನಿನ ತೀವ್ರವಾದ ಉಲ್ಲಂಘನೆ ಎಂದು ಹೇಳಿತ್ತು. ಈಗ ಈ ತೀರ್ಪು ಬಂದಿದೆ. ನಾಚಿಕೆಗೇಡು' ಎಂದು ಸೀತಾರಾಂ ಯೆಚೂರಿ ಅಸಮಾಧಾನ ವ್ಯಕ್ತಪಡಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications