ಸೂಕ್ಷ್ಮ ಜಿಲ್ಲೆಗಳಲ್ಲಿ ಭದ್ರತೆ ಬಿಗಿಗೊಳಿಸಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ
ನವದೆಹಲಿ, ಸೆಪ್ಟೆಂಬರ್ 29: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪನ್ನು ಲಕ್ನೋದಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ ಸೆ. 30ರಂದು ಪ್ರಕಟಿಸಲಿದ್ದು, ದೇಶದಾದ್ಯಂತ ಅತ್ಯಧಿಕ ಕೋಮು ಸೂಕ್ಷ್ಮತೆಯ ಹಾಗೂ ಸೂಕ್ಷ್ಮ ಜಿಲ್ಲೆಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸುವಂತೆ ಕೇಂದ್ರ ಸರ್ಕಾರವು ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿದೆ. ನ್ಯಾಯಾಲಯದ ತೀರ್ಪು ಸಂಘರ್ಷಗಳಿಗೆ ಎಡೆ ಮಾಡಿಕೊಡುವ ಸಂಭವ ಇರುವುದರಿಂದ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.
ನ್ಯಾಯಾಲಯದ ತೀರ್ಪು ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಎರಡೂ ಕಡೆಗಳ ಕಿಡಿಗೇಡಿಗಳು ತೀರ್ಪನ್ನು ಕೋಮು ಬಣ್ಣಕ್ಕೆ ತಿರುಗಿಸುವ ಅಪಾಯವಿದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.
ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಭೂಮಿ ಹಕ್ಕು ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪಿನ ಬಗ್ಗೆ ಅನೇಕ ಮುಸ್ಲಿಂ ಸಂಘಟನೆಗಳಲ್ಲಿ ಅಸಮಾಧಾನವಿದೆ. ಅವರು ಈಗ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗುತ್ತದೆ ಎಂದು ನಿರೀಕ್ಷಿಸುತ್ತಿವೆ. ಅವರ ಪರವಾದ ತೀರ್ಪು ಬಾರದೆ ಹೋದರೆ ಅವರು ಪ್ರತಿಭಟನೆಗೆ ಇಳಿಯುವ ಸಾಧ್ಯತೆ ಇದೆ ಎಂದು ಅದು ತಿಳಿಸಿದೆ.

ಈ ತೀರ್ಪಿನ ಸಂದರ್ಭದಲ್ಲಿ ಸಿಎಎ, ಎನ್‌ಪಿಆರ್ ಮತ್ತು ಎನ್‌ಆರ್‌ಸಿ ವಿರೋಧಿ ಪ್ರತಿಭಟನೆಗಳಿಗೆ ಮರು ಜೀವ ನೀಡುವ ಅವಕಾಶಕ್ಕಾಗಿ ಅನೇಕ ತೀವ್ರಗಾಮಿ ಗುಂಪುಗಳು ಕಾಯುತ್ತಿವೆ. ಮಸೀದಿ ಧ್ವಂಸ ಪ್ರಕರಣದ ಆರೋಪಿಗಳು ಬಿಡುಗಡೆಯಾಗಲಿದ್ದಾರೆ ಎಂದು ಹಿಂದೂ ಸಂಘಟನೆಗಳು ಭರವಸೆ ಹೊಂದಿವೆ. ಕೆಲವು ರಾಜ್ಯಗಳಲ್ಲಿ ಕೋಮು ಸಂಗತಿಗಳು ನಿಯಂತ್ರಣದಲ್ಲಿ ಇಲ್ಲದ ಕಾರಣ ಸೂಕ್ಷ್ಮ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರಗಳು ಭದ್ರತೆಯನ್ನು ಹೆಚ್ಚು ಮಾಡಬೇಕು. ಮುಖ್ಯವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಾಕಾರಿ ಸಂಗತಿಗಳನ್ನು ಪೋಸ್ಟ್ ಮಾಡುವವರ ಮೇಲೆ ಕಣ್ಣಿಡಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications