ಬಾಬ್ರಿ ಮಸೀದಿ ಧ್ವಂಸ: ಅಡ್ವಾಣಿ ಸೇರಿ 12 ಜನರಿಗೆ ಜಾಮೀನು
ಲಕ್ನೊ, ಮೇ 30: ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಲಕ್ನೋದ ಸಿಬಿಐ ವಿಶೇಷ ನ್ಯಾಯಾಲಯ ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಹಾಗೂ ಕೇಂದ್ರ ಸಚಿವೆ ಉಮಾ ಭಾರತಿ ಸೇರಿ ಎಲ್ಲಾ 12 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.
ಮೂವರು ನಾಯಕರು ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ಮೂವರು ನಾಯಕರಲ್ಲದೆ ಇತರರ ವಿರುದ್ಧ ನ್ಯಾಯಾಲಯ ಆರೋಪಗಳನ್ನು ಪಟ್ಟಿ ಮಾಡಲಿತ್ತು. ಈ ಸಂಬಂಧ ನಾಯಕರು ವಿಚಾರಣೆಗೆ ಹಾಜರಾಗಿದ್ದರು.

ವಿಚಾರಣೆ ಆರಂಭದಲ್ಲೇ ಅಡ್ವಾಣಿ ಸೇರಿ 12 ಆರೋಪಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ತಲಾ 20 ಸಾವಿರ ಭದ್ರತೆಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.












Click it and Unblock the Notifications