• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಉದ್ಯೋಗ ಖಾತ್ರಿಯಡಿ ಸಚಿನ್, ಬಚ್ಚನ್ ಕೆಲಸ!

|

ಬೆಂಗಳೂರು, ಏ. 27 : ಇದು ಅಚ್ಚರಿಯಾದರೂ ಸತ್ಯ. ಅಮೀರ್ ಖಾನ್, ಸಚಿನ್ ತೆಂಡೂಲ್ಕರ್, ರಿಕಿ ಪಾಯಿಂಟ್, ಅಮಿತಾಬ್ ಬಚ್ಚನ್ ಮುಂತಾದವರು ಗೋವಾದಲ್ಲಿ ದಿನಕ್ಕೆ 100 ದಿನಗೂಲಿಯನ್ನು ಪಡೆದಿದ್ದಾರೆ. ಕೇಂದ್ರ ಸರ್ಕಾರದ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ್ದಾರೆ.

ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹಣ ಹೇಗೆ ಗುಳುಂ ಆಗಿದೆ ಎಂಬುದಕ್ಕೆ ಇದೊಂದು ಉದಾಹರಣೆ ಮಾತ್ರ. ಗೋವಾ ಪರಿವರ್ತನ್ ಮಂಚ್ ಎಂಬ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆ ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿದ್ದ ಅರ್ಜಿಗೆ ಗೋವಾ ರಾಜ್ಯದ ಗ್ರಾಮೀಣಾಭಿವೃದ್ಧಿ ಸಂಸ್ಥೆಯೇ ಈ ಉತ್ತರ ನೀಡಿದೆ.

ಗ್ರಾಮೀಣಾಭಿವೃದ್ಧಿ ಸಂಸ್ಥೆ ನೀಡಿರುವ ಉತ್ತರ ನೋಡಿ ಬೆಚ್ಚಿ ಬಿದ್ದರಿರುವ ಪರಿವರ್ತನ್ ಮಂಚ್ ಸಂಚಾಲಕ ಯತೀಶ್ ನಾಯಕ್, ರಾಜ್ಯದಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಪತ್ರ ಬರೆದಿದ್ದಾರೆ.

ಯಾರು ಕೆಲಸ ಮಾಡಿದ್ದಾರೆ : ಗೋವಾ ರಾಜ್ಯದ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪ್ರಕಾರ ಗೋವಾ ಸಿಎಂ ಮನೋಹರ್ ಪಾರಿಕ್ಕಾರ್, ಬಾಲಿವುಡ್ ನಟ, ನಟಿಯರು, ಕ್ರಿಕೆಟ್ ತಾರೆಯರು, ಅವರ ಕುಟುಂಬ ಸದಸ್ಯರು ಉದ್ಯೋಗ ಖಾತ್ರಿ ಯೋಜನೆ ಅನ್ವಯ ಕೆಲಸ ಮಾಡಿ ದಿನಕ್ಕೆ 100 ರೂ. ದಿನಗೂಲಿಯನ್ನು ಪಡೆದಿದ್ದಾರೆ.

ರಾಹುಲ್ ದ್ರಾವಿಡ್, ಕಪಿಲ್ ದೇವ್, ಸೌರವ್ ಗಂಗೂಲಿ, ಯುವರಾಜ್ ಸಿಂಗ್, ಆಸ್ಟ್ರೇಲಿಯಾದ ಮಾಜಿ ಕ್ರಿಕೆಟರ್ ರಿಕಿ ಪಾಂಟಿಂಗ್, ಅವರ ಕುಟುಂಬ ಸದಸ್ಯರಾದ ರಿಕ್ಲಿ, ಮಿಕ್ಕಿ, ರೋಸಿ ಅವರು ಕೆಲಸ ಮಾಡಿದ್ದಾರೆ. ಬಾಲಿವುಡ್ ನಟರಾದ ಅಮಿತಾಬ್ ಬಚ್ಚನ್, ಅಮೀರ್ ಖಾನ್ ಅವರು ಕೆಲಸ ಮಾಡಿದ್ದಾರೆ ಎಂಬ ಮಾಹಿತಿ ಕೊಟ್ಟು ಇಲಾಖೆ ಪೇಚಿಗೆ ಸಿಲುಕಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Names of a host of celebrities from the world of cricket and Bollywood, including Amitabh Bachchan, Sachin Tendulkar and Ricky Ponting, have been found in the list of beneficiaries of the Mahatma Gandhi National Rural Employment Guarantee Assurance scheme in Goa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more