Breaking: ಬಿಜೆಪಿ ಸೇರಿದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್
Recommended Video
ನವದೆಹಲಿ, ಜನವರಿ 29: ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಬುಧವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಸೈನಾ ಅವರೊಂದಿಗೆ ಅವರ ಸಹೋದರಿ ಚಂದ್ರಾನ್ಶು ಕೂಡ ಬಿಜೆಪಿ ಸೇರಿಕೊಂಡಿದ್ದಾರೆ.
ಹರಿಯಾಣದ ಹಿಸಾರ್ ಮೂಲದವರಾದ ಸೈನಾ ನೆಹ್ವಾಲ್ ಬುಧವಾರ ನಡೆದ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪರ ತಾರಾ ಪ್ರಚಾರಕರಾಗಿ ಅವರು ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿದೆ.
ದೆಹಲಿ ಚುನಾವಣೆ ಸಮೀಪಿಸುತ್ತಿರುವ ವೇಳೆಯಲ್ಲಿಯೇ 29 ವರ್ಷದ ಸೈನಾ ಬಿಜೆಪಿ ಸೇರಿಕೊಂಡಿದ್ದಾರೆ .ಬ್ಯಾಡ್ಮಿಂಟನ್‌ನಲ್ಲಿ 11 ಸೂಪರ್ ಸೀರೀಸ್ ಸೇರಿದಂತೆ 24 ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದಿರುವ ಸೈನಾ, 2015ರಲ್ಲಿ ಜಗತ್ತಿನ ನಂಬರ್ ಒನ್ ಶ್ರೇಯಾಂಕದ ಆಟಗಾರ್ತಿಯೆಮಬ ಕೀರ್ತಿಗೆ ಭಾಜನರಾಗಿದ್ದರು. ಪ್ರಕಾಶ್ ಪಡುಕೋಣೆ ಬಳಿಕ ಈ ಗೌರವ ಪಡೆದ ಭಾರತದ ಎರಡನೆಯ ಕ್ರೀಡಾಪಟು ಎನಿಸಿದ್ದರು.

ಸಾಧನೆ ಪ್ರಚಾರ ಮಾಡಿದ್ದ ಸೈನಾ
2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಪಡೆದಿದ್ದರು. ಇನ್ನೂ ಕ್ರೀಡಾರಂಗದಲ್ಲಿ ಸಕ್ರಿಯರಾಗಿರುವ ಅವರು, ಈಗಲೇ ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದು ಅಚ್ಚರಿ ಮೂಡಿಸಿದೆ. ನರೇಂದ್ರ ಮೋದಿ ನೇತೃತ್ವದ ಮೊದಲ ಎನ್‌ಡಿಎ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ತಾರಾ ಪ್ರಚಾರಕರಲ್ಲಿ ಸೈನಾ ಕೂಡ ಒಬ್ಬರಾಗಿದ್ದರು.

ಮೋದಿ ಭಾಷಣ ಶ್ಲಾಘಿಸಿದ್ದ ಸೈನಾ
ದೆಹಲಿಯ ರಾಮಲೀಲಾ ಮೈದಾನದಲ್ಲಿ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸಮಾವೇಶದಲ್ಲಿ ಮಾಡಿದ್ದ ಭಾಷಣವನ್ನು ಸೈನಾ ಟ್ವಿಟ್ಟರ್‌ನಲ್ಲಿ ಶ್ಲಾಘಿಸಿದ್ದು ಗಮನ ಸೆಳೆದಿತ್ತು. ಈ ಹಿಂದೆಯೂ ಮೋದಿ ಅವರನ್ನು ಸೈನಾ ನೆಹ್ವಾಲ್ ಭೇಟಿ ಮಾಡಿದ್ದರು.

ಅಭಿನಂದನೆ ತಿಳಿಸಿದ್ದ ಸೈನಾ
2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಬಳಿಕ ಸೈನಾ ನೆಹ್ವಾಲ್, ಟ್ವಿಟ್ಟರ್‌ನಲ್ಲಿ ಅಭಿನಂದನೆ ತಿಳಿಸಿದ್ದರು. 'ಮತ್ತೊಮ್ಮೆ ಮೋದಿ ಸರ್ಕಾರ. ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು' ಎಂದಿದ್ದ ಸೈನಾ, 'ಬಿಜೆಪಿಯ ಗೆಲುವಿಗೆ ಕಾರಣರಾಗಿದ್ದ ಅಮಿತ್ ಶಾ ಅವರಿಗೆ ಅಭಿನಂದನೆ ತಿಳಿಸುತ್ತೇನೆ' ಎಂದು ಮತ್ತೊಂದು ಟ್ವೀಟ್ ಮಾಡಿದ್ದರು.

ಅಮಿತ್ ಶಾ-ಸೈನಾ ಭೇಟಿ
2018ರ ಜೂನ್‌ನಲ್ಲಿ ಆಗ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್ ಶಾ, ತೆಲಂಗಾಣದಲ್ಲಿರುವ ಸೈನಾ ನೆಹ್ವಾಲ್ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು. 'ನನ್ನ ಮನೆಯಲ್ಲಿ ಅಮಿತ್ ಶಾ ಸರ್ ಅವರನ್ನು ಭೇಟಿ ಮಾಡಿರುವುದು ನನಗೆ ಗೌರವ ತಂದಿದೆ. ನಿಮ್ಮ ಪ್ರೋತ್ಸಾಹದಾಯಕ ಮಾತುಗಳಿಗೆ ಧನ್ಯವಾದಗಳು. ಬಿಜೆಪಿ ಸರ್ಕಾರದ ವಿಭಿನ್ನ ಪ್ರಯತ್ನಗಳ ಬಗ್ಗೆ ನಾನು ಸಾಕಷ್ಟು ತಿಳಿದೆ' ಎಂದು ಸೈನಾ ಹೇಳಿದ್ದರು.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications