ಧಗಧಗ ಹೊತ್ತಿ ಉರಿಯುತ್ತಿದೆ ಉತ್ತರ ಪ್ರದೇಶ, ಗುಂಡಿನ ಸದ್ದು ಯಾಕೆ
ಉತ್ತರಪ್ರದೇಶದಲ್ಲಿ ಭಾರೀ ಅವಘಡ ಸಂಭವಿಸಿದ್ದು, ಹಿಂಸಾಚಾರ ಹೆಚ್ಚಳವಾಗಿದೆ. ಉತ್ತರ ಪ್ರದೇಶ ರಾಜ್ಯವು ಕಳೆದ ಕೆಲವು ದಿನಗಳಿಂದ ಪ್ರಶಾಂತವಾಗಿ ಇತ್ತು. ಇದೀಗ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ಭಾರೀ ಹಿಂಸಾಚಾರ ನಡೆದಿದ್ದು, ಒಬ್ಬ ವ್ಯಕ್ತಿ ಈ ಘಟನೆಯಲ್ಲಿ ಸಾವನ್ನಪ್ಪಿದ್ದಾನೆ.
ದೇಶದಲ್ಲಿ ಹೆಚ್ಚು ಜನ ಸಂಖ್ಯೆ ಇರುವ ರಾಜ್ಯಗಳಲ್ಲಿ ಒಂದಾಗಿರುವ ಹಾಗೂ ಸೂಕ್ಷ್ಮ ಪ್ರದೇಶಗಳನ್ನು ಹೆಚ್ಚಿನ ಸಂಖ್ಯೆ ಇರುವಂತಹ ಉತ್ತರ ಪ್ರದೇಶದಲ್ಲಿ ಭಾನುವಾರ ನಡೆದ ಸಂಘರ್ಷವು. ಸೋಮವಾರ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಇದರಿಂದ ಉತ್ತರ ಪ್ರದೇಶದ ಕೆಲವು ಪ್ರದೇಶಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶದ ವಿವಿಧ ಭಾಗದಲ್ಲಿ ದಸರಾ ಸಂಭ್ರಮಾಚರಣೆ ನಡೆದಿದೆ. ಆದರೆ, ಬುಧವಾರ ದುರ್ಗಾ ವಿಗ್ರಹ ವಿಸರ್ಜನಾ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಹೊತ್ತಿಕೊಂಡ ಸಣ್ಣ ಕಿಡಿಯು ಭಾರೀ ಅನಾಹುತವನ್ನೇ ಸೃಷ್ಟಿ ಮಾಡಿದೆ.

ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ಸೋಮವಾರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಭಾಗದಲ್ಲಿ ಭಾನುವಾರ ಹಿಂದೂ ಧರ್ಮೀಯರು ದುರ್ಗಾ ವಿಗ್ರಹವನ್ನು ವಿಸರ್ಜನೆ ಮಾಡಲು ಮೆರವಣಿಗೆ ಸಾಗಿದ್ದರು. ಆದರೆ, ಎರಡು ಗುಂಪುಗಳ ನಡುವೆ ಭಾರೀ ಮಾತಿನ ಚಕಮಕಿ ನಡೆದ ನಂತರ ಪ್ರತಿಭಟನೆ ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ. ಇದರ ನಡುವೆ ಹಿಂದೂವೊಬ್ಬರನ್ನು ಗುಂಡಿನ ದಾಳಿಗೆ ಬಲಿಯಾಗಿದ್ದಾನೆ. ಈ ಬೆಳವಣಿಗೆಯ ನಂತರ ಈ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಹಿಂದೂ ಕೊಲೆ; ಪ್ರತಿಭಟನೆ: ಹಿಂದೂ ವ್ಯಕ್ತಿಯನ್ನು ಭಾನುವಾರ ಕೊಲೆ ಮಾಡಲಾಗಿದೆ ಎನ್ನಲಾಗಿದ್ದು, ಇದರ ವಿರುದ್ಧ ಸೋಮವಾರ ಪ್ರತಿಭಟನೆ ನಡೆದಿದೆ. ಸೋಮವಾರ ಪ್ರತಿಭಟನೆ ನಡೆಯುವ ಸಂದರ್ಭದಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಪ್ರತಿಭಟನಾ ನಿರತರನ್ನು ನಿಯಂತ್ರಿಸುವ ಉದ್ದೇಶದಿಂದ ಉತ್ತರ ಪ್ರದೇಶದ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಬರದೆ ಇದ್ದಾಗ ಅಶ್ರುವಾಯು ಶೆಲ್ ಬಳಸಲಾಗಿದೆ.
ಪರಿಸ್ಥಿತಿ ವಿಕೋಪಕ್ಕೆ: ಉತ್ತರ ಪ್ರದೇಶದಲ್ಲಿ ಎರಡು ಕೋಮುಗಳ ನಡುವೆ ನಡೆದ ಸಂಘರ್ಷವು ಇದೀಗ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆ ಹಲವು ಪ್ರದೇಶಗಳಿಗೆ ಹಬ್ಬಿದೆ. ಇಲ್ಲಿನ ದುರ್ಗಾ ವಿಗ್ರಹ ವಿಸರ್ಜನೆ ಮಾಡಲು ಮೆರವಣಿಗೆ ಸಾಗಿತ್ತು. ಆ ಸಂದರ್ಭದಲ್ಲಿ ಬಹ್ರೈಚ್‌ನ ಮಹಾಸಿ ಎನ್ನುವಲ್ಲಿ ಹಿಂಸಾಚಾರ ವ್ಯಾಪಕವಾಗಿದೆ. ಮೊದಲು ಎರಡು ಕೋಮುಗಳ ನಡುವೆ ಸಂಘರ್ಷ ಏರ್ಪಟ್ಟಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಅಲ್ಲದೇ ಹಲವರು ಗಾಯಗೊಂಡಿದ್ದಾರೆ.

ಸೋಮವಾರ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಕೆಲವು ಕಿಡಿಗೇಡಿಗಳು ಇಲ್ಲಿನ ಅಂಗಡಿಗಳು, ಆಸ್ಪತ್ರೆ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸುವ ಉದ್ದೇಶದಿಂದ ಉತ್ತರ ಪ್ರದೇಶದ ಪೊಲೀಸರು ಬಹ್ರೈಚ್ ಜಿಲ್ಲೆಯಲ್ಲಿ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಕೋಮುಗಲಭೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ 30 ಜನ ಆರೋಪಿಗಳನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.
ಹಲವರಿಗೆ ಮುಂದುವರಿದ ಶೋಧ: ಇನ್ನು ಉತ್ತರ ಪ್ರದೇಶದ ಗಲಭೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಪೊಲೀಸರು 30 ಜನರನ್ನು ಇಲ್ಲಿಯವರೆಗೆ ಬಂಧಿಸಿದ್ದಾರೆ. ಸಂಘರ್ಷಕ್ಕೆ ಪ್ರಚೋದನೆ ನೀಡಿದವರು ಹಾಗೂ ಗಲಭೆಯಲ್ಲಿ ಭಾಗಿಯಾಗಿದ್ದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಅಲ್ಲಲ್ಲಿ ಅಲ್ಪ ಪ್ರಮಾಣದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಆದರೆ ಒಟ್ಟಾರೆ ಉತ್ತರ ಪ್ರದೇಶ ಇನ್ನೂ ಬೂದಿ ಮುಚ್ಚಿದ ಕೆಂಡದಂತೆಯೇ ಇದೆ.
ಇದೀಗ ಈ ಬೆಳವಣಿಗೆ ಬಿಜೆಪಿ ಹಾಗೂ ವಿರೋಧ ಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಸರ್ಕಾರದ ವೈಫಲ್ಯದಿಂದಲೇ ಈ ಘಟನೆ ನಡೆದಿದೆ ಎಂದು ಉತ್ತರ ಪ್ರದೇಶದ ವಿರೋಧ ಪಕ್ಷಗಳು ಆರೋಪ ಮಾಡಿವೆ.
ಯೋಗಿ ಆದಿತ್ಯನಾಥ್ ಎಚ್ಚರಿಕೆ
ಇನ್ನು ಉತ್ತರ ಪ್ರದೇಶದಲ್ಲಿನ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ಪರಿಸ್ಥಿತಿಯನ್ನು ಹಾಳು ಮಾಡಲು ಯಾರಾದರೂ ಪ್ರಯತ್ನಿಸಿದರೆ ಸುಮ್ಮನಿರುವುದಿಲ್ಲ ಎಂದಿದ್ದಾರೆ.
ರಾಜ್ಯದಲ್ಲಿನ ಎಲ್ಲರ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತಿದೆ. ಗಲಭೆಕೋರರು ಹಾಗೂ ಈ ಘಟನೆಗೆ ಕಾರಣರಾದವರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಅವರು ಟ್ವೀಟ್ ಮಾಡಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications