ಭಾರತದಲ್ಲಿ ಪೋರ್ನ್ ವಿಡಿಯೋ ವೀಕ್ಷಣೆ ನಿಷೇಧ: ಸುಪ್ರೀಂ ಕೋರ್ಟ್ ಹೇಳಿದ್ದೇನು ?
ಭಾರತದಲ್ಲಿ ಪೋರ್ನ್ / ಅಶ್ಲೀಲ ವಿಡಿಯೋ ವೀಕ್ಷಣೆ ತಡೆಗೆ ಸಂಬಂಧಿಸಿದಂತೆ ಭಾರೀ ಚರ್ಚೆ ನಡೆದಿದೆ. ದೇಶದಲ್ಲಿ ಪೋರ್ನ್ ವೀಕ್ಷಣೆಗೆ ಸಂಬಂಧಿಸಿದಂತೆ ಈಗಾಗಲೇ ಕೆಲವೊಂದು ಕಠಿಣ ನಿಯಮಗಳನ್ನು ರೂಪಿಸಲಾಗಿದೆ. ಇದೀಗ ನೇಪಾಳದ Gen Z Protests ಬಗ್ಗೆ ಉಲ್ಲೇಖಿಸಿ, ಪೋರ್ನ್ ವಿಡಿಯೋ ವೀಕ್ಷಣೆ ನಿಷೇಧದ ಬಗ್ಗೆ ಉಲ್ಲೇಖಿಸಲಾಗಿದೆ. ಅದೇನು ಎನ್ನುವ ಸಂಪೂರ್ಣ ವಿವರ ಈ ಲೇಖನದಲ್ಲಿ ನೋಡೋಣ.
ಈಚೆಗೆ ದೇಶದಲ್ಲಿ ಅಶ್ಲೀಲ ವಿಡಿಯೋ ವೀಕ್ಷಣೆಯನ್ನು ತಡೆಯಲು ರಾಷ್ಟ್ರೀಯ ನೀತಿ ಜಾರಿ ಮಾಡಬೇಕು ಎಂದು ಕೋರಿ ಸಲ್ಲಿಕೆ ಮಾಡಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ವಿಚಾರಣೆ ನಡೆಸಿದ್ದು, ಈ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್ ನೇಪಾಳದಲ್ಲಿ ಈಚೆಗೆ ನಡೆದಿರುವ ಬೃಹತ್ Gen Z ಪ್ರತಿಭಟನೆಯನ್ನು ಉಲ್ಲೇಖ ಮಾಡಿದೆ. ನೇಪಾಳದಲ್ಲಿ ಈಚೆಗೆ ಏನಾಗಿತ್ತು ಎನ್ನುವುದು ಗೊತ್ತಿದೆ ಅಲ್ಲವೇ ಎಂದು ಪ್ರಶ್ನೆ ಮಾಡಿದೆ ಎಂದು ಹೇಳಲಾಗಿದೆ.

ಸುಪ್ರೀಂ ಕೋರ್ಟ್ ಈ ವಿಷಯವನ್ನು ಕೈಗೆತ್ತಿಕೊಂಡಿದ್ದು, ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ನೇಪಾಳದಲ್ಲಿ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲಾಗಿತ್ತು. ಅದರ ಪರಿಣಾಮ ಏನಾಯಿತು, ಮುಂದೆ ಏನೆಲ್ಲಾ ಪರಿಣಾಮ ಬೀರಿತು ಹಾಗೂ ಅದರ ಫಲಿತಾಂಶ ಏನಾಯಿತು ಎನ್ನುವುದನ್ನು ಎಲ್ಲರೂ ನೋಡಿದ್ದೀರಿ ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ವಿಶೇಷವಾಗಿ ಅಪ್ರಾಪ್ತ ವಯಸ್ಕರಲ್ಲಿ ಅಶ್ಲೀಲ ಚಿತ್ರಗಳನ್ನು ನೋಡುವುದನ್ನು ತಡೆಯಲು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೂಪದಲ್ಲಿ ಅಶ್ಲೀಲ ವಸ್ತುಗಳನ್ನು ನೋಡುವುದನ್ನು ನಿಷೇಧಿಸಲು ರಾಷ್ಟ್ರೀಯ ನೀತಿಯನ್ನು ರೂಪಿಸಬೇಕು. ಅಲ್ಲದೇ ಕ್ರಿಯಾ ಯೋಜನೆಯನ್ನು ರೂಪಿಸಲು ನಿರ್ದೇಶನಗಳನ್ನು ಪಿಐಎಲ್ ಮೂಲಕ ಕೊರಲಾಗಿತ್ತು.
ಕಂಪ್ಯೂಟರ್‌ಗಳ ಮೂಲಕ ಯಾವುದೇ ನಿರ್ದಿಷ್ಟ ಮಾಹಿತಿಯನ್ನು ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರವು ಅಸ್ತಿತ್ವದಲ್ಲಿರುವ ಕಾನೂನುಗಳ ಅಡಿಯಲ್ಲಿ ಅಧಿಕಾರವನ್ನು ಹೊಂದಿದೆ. ಆದರೆ, ಅಶ್ಲೀಲ ಬಳಕೆಯ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಪರಿಹರಿಸಲು ವಿಫಲವಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು. ವಿಚಾರಣೆಯನ್ನು ಮುಂದೂಡಿದ ಪೀಠವು, ನಾಲ್ಕು ವಾರಗಳ ನಂತರ ವಿಷಯವನ್ನು ಪಟ್ಟಿ ಮಾಡುವಂತೆ ನಿರ್ದೇಶಿಸಿತು. ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಅಧಿಕಾರಾವಧಿಯು ನವೆಂಬರ್ 23 ರಂದು ಮುಕ್ತಾಯವಾಗಲಿದೆ. ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಡಿಸೆಂಬರ್‌ನಲ್ಲಿ ನಡೆಸಲಿದೆ.
ನೇಪಾಳದ ಉಲ್ಲೇಖವೇಕೆ ?
ಇನ್ನು ನೇಪಾಳದಲ್ಲಿ ಈಚೆಗೆ ಸೋಷಿಯಲ್ ಮೀಡಿಯಾ ಬ್ಯಾನ್ ವಿರೋಧಿಸಿ Gen Z ಸಮುದಾಯವು ಬೀದಿಗೆ ಇಳಿದಿತ್ತು. ಅಲ್ಲದೇ ಸೋಷಿಯಲ್ ಮೀಡಿಯಾ ಬ್ಯಾನ್ ಹಾಗೂ ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತವನ್ನು ವಿರೋಧಿಸಿ ಯುವ ಸಮೂಹ ಬೀದಿಗೆ ಇಳಿದು ಪ್ರತಿಭಟನೆ ಮಾಡಿತ್ತು. 2025ರ ಸೆಪ್ಟೆಂಬರ್ ತಿಂಗಳಿನಲ್ಲಿ ನೇಪಾಳದಲ್ಲಿ ನಡೆದ ಜನರಲ್ ಝಡ್ ಪ್ರತಿಭಟನೆಯು ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಆರ್ಥಿಕ ಸಂಕಷ್ಟ ಮತ್ತು ಯುವ ನಿರುದ್ಯೋಗವನ್ನು ಪರಿಹರಿಸುವಲ್ಲಿ ಸರ್ಕಾರದ ವೈಫಲ್ಯದ ಬಗ್ಗೆ ಆಕ್ರೋಶವನ್ನು ಹೊರ ಹಾಕಿತ್ತು. 26 ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲೆ ವ್ಯಾಪಕವಾದ ಸರ್ಕಾರದ ನಿಷೇಧ ಹೇರಿತ್ತು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ












Click it and Unblock the Notifications